ಬೆಂಗಳೂರು: ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೋವಿಡ್ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಲ್ಲಿ ದೃಢಪಟ್ಟಿತ್ತು. ಇಂತಹ ಅವರು ಶೀಘ್ರ ಗುಣಮುಖರಾಗಲೆಂದು ಸಿಎಂ ಸಿದ್ಧರಾಮಯ್ಯ ಹಾರೈಸಿದ್ದಾರೆ.
ಈ ಕುರಿತಂತೆ ಎಕ್ಸ್ ಮಾಡಿರುವಂತ ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೊರೊನಾ ಸೋಂಕಿಗೆ ಒಳಗಾಗಿರುವ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋತ್ ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.
ಕರ್ನಾಟಕ ರಾಜ್ಯಪಾಲ ‘ಥಾವರ್ ಚಂದ್ ಗೆಹ್ಲೋಟ್’ಗೆ ಕೋವಿಡ್ ಪಾಸಿಟಿವ್: ಎಲ್ಲಾ ಕಾರ್ಯಕ್ರಮಗಳು ರದ್ದು
ಬೆಂಗಳೂರು: ಕರ್ನಾಟಕ ರಾಜ್ಯಪಾಲರಾಗಿರುವಂತ ಥಾವರ್ ಚಂದ್ ಗೆಹ್ಲೋಟ್ ( Thawar Chand Gehlot ) ಅವರಿಗೆ ಕೊರೋನಾ ಪಾಸಿಟಿವ್ ( Corona Positive ) ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಮುಂದಿನ ದಿನಾಂಕದವರೆಗೆ ಅವರ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ.
ಈ ಕುರಿತಂತೆ ರಾಜಭವನದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೋವಿಡ್-19 ಪರೀಕ್ಷೆಗೆ ( Covid19 Test ) ಒಳಪಟ್ಟಿದ್ದರು. ಅವರ ಪರೀಕ್ಷೆ ವರದಿಯಲ್ಲಿ ಅವರಿಗೆ ಕೊರೋನಾ ಪಾಸಿಟಿವ್ ( Corona Positive ) ಎಂಬುದಾಗಿ ತಿಳಿದು ಬಂದಿದೆ ಎಂದಿದೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೋವಿಡ್-19 ಪಾಸಿಟಿವ್ ( Covid19 Positive ) ಎಂಬುದಾಗಿ ಪರೀಕ್ಷೆಯಲ್ಲಿ ದೃಢಪಟ್ಟ ಕಾರಣ, ಮುಂದಿನ ದಿನಾಂಕದವರೆಗೆ ಅವರ ಎಲ್ಲಾ ನಿಗದಿತ ಕಾರ್ಯಕ್ರಮಗಳನ್ನು ರ್ದದುಗೊಳಿಸಿರೋದಾಗಿ ತಿಳಿಸಿದೆ.
ಇನ್ನೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮುಂಜಾಗ್ರತಾ ಕ್ರಮವಾಗಿ ರಾಜಭವನದಲ್ಲೇ ಕ್ವಾರಂಟೈನ್ ಆಗಲಿದ್ದಾರೆ. ಅವರು ಕೊರೋನಾ ಸೌಮ್ಯ ಲಕ್ಷಣಗಳನ್ನು ಹೊಂದಿದ್ದು, ಆರೋಗ್ಯವಾಗಿದ್ದಾರೆ. ಅವರಿಗೆ ಕೋವಿಡ್ ಚಿಕಿತ್ಸೆಯು ಹೋಂ ಕ್ವಾರಂಟೈನ್ ನಲ್ಲಿ ಮುಂದುವರೆಯಲಿದೆ ಅಂತ ಹೇಳಿದೆ.
BREAKING: ‘ಸ್ವಂತ ಮಗ’ನನ್ನೇ ಕೊಂದ ಪ್ರಕರಣ: ‘ಸಿಇಓ ಸುಚನಾ’ 6 ದಿನ ಗೋಪಾ ಪೊಲೀಸರ ಕಸ್ಟಡಿಗೆ
‘ಸವದತ್ತಿ ಯಲ್ಲಮ್ಮನ ಭಕ್ತ’ರಿಗೆ ಗುಡ್ ನ್ಯೂಸ್: ಸಮಗ್ರ ಅಭಿವೃದ್ಧಿಗೆ ‘ಸಚಿವ ರಾಮಲಿಂಗಾರೆಡ್ಡಿ’ ಮಾಸ್ಟರ್ ಫ್ಲ್ಯಾನ್