ಚಿಕ್ಕಮಗಳೂರು : ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವು ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಹಳೆ ಭಾಗದ ಮೈಸೂರು ಹಾಗೂ ಮಂಡ್ಯ ಕ್ಷೇತ್ರಗಳನ್ನು ಉಳಿಸಿಕೊಳ್ಳಲು ಜೆಡಿಎಸ್ ಪಕ್ಷದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರೆಸಾರ್ಟ್ ರಾಜಕೀಯಕ್ಕೆ ಮೊರೆ ಹೋಗಿದ್ದು ಚಿಕ್ಕಮಗಳೂರಿನ ಖಾಸಗಿ ರಿಸಲ್ಟ್ ನಲ್ಲಿ ಪಕ್ಷದ ಮುಖಂಡರು ಹಾಗೂ ನಾಯಕರು ಜೊತೆ ಇಂದು ಸಮಾಲೋಚನೆ ನಡೆಸಲಿದ್ದಾರೆ.
ರೆಸಾರ್ಟ್ ನಲ್ಲಿ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ರಾಜಕೀಯ ತಂತ್ರಗಾರಿಕೆ ನಡೆಸುತ್ತಿದ್ದು, ಹಳೆ ಮೈಸೂರು ಭಾಗದ ಕ್ಷೇತ್ರಗಳ ಮೇಲೆ ಕುಮಾರಸ್ವಾಮಿ ಕಣ್ಣು ಇಟ್ಟಿದ್ದಾರೆ. ಹಳೆ ಮೈಸೂರು ಭಾಗದ ಕ್ಷೇತ್ರಗಳನ್ನು ಉಳಿಸಿಕೊಳ್ಳಲು ರೆಸಾರ್ಟ್ ತಂತ್ರಗಾರಿಕೆಗೆ ಮೊರೆ ಹೋಗಿದ್ದಾರೆ ಎಂದು ತಿಳಿದುಬಂದಿದೆ.
ಮಂಡ್ಯ ಮೈಸೂರು ಭಾಗದ ನಾಯಕರ ಜೊತೆ ಎಚ್ಡಿಕೆ ಸಮಲೋಚನೆ ನಡೆಸಲಿದ್ದು,ಜೆಡಿಎಸ್ ಮುಖಂಡರೊಂದಿಗೆ ರೆಸಾರ್ಟ್ ಗೆ ಆಗಮಿಸಿರುವ ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿ ಟಿಕೆಟ್ ವಿಚಾರವಾಗಿ ಎಚ್ ಡಿ ಕೆ ಜೆಡಿಎಸ್ ನಾಯಕರುರೊಂದಿಗೆ ಚರ್ಚೆ ನಡೆಸಲಿದ್ದಾರೆ. ಲೋಕಸಭಾ ಚುನಾವಣೆಗೆ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಸಮಲೋಚನೆ ನಡೆಸಲಿದ್ದಾರೆ ಎನ್ನಲಾಗುತ್ತಿದೆ.
ಮಂಡ್ಯ ಕ್ಷೇತ್ರವನ್ನು ಬಿಟ್ಟು ಕೊಡಬೇಕಾ ಅಥವಾ ಬೇಡವಾ ಎಂಬ ಕುರಿತು ಚರ್ಚೆ ನಡೆಸಲಾಗುತ್ತದೆ.ಕಳೆದ ರಾತ್ರಿ ಜೆಡಿಎಸ್ ಪಕ್ಷದ ಮುಖಂಡರು ರೆಸಾರ್ಟಿಗೆ ಆಗಮಿಸಿದ್ದಾರೆ. ಜೆಡಿಎಸ್ ಮೈ ಶಾಸಕರದ ಸಿಎಸ್ ಪುಟ್ಟರಾಜು,ಎಂಎಲ್ಸಿ ಬೋಜೇಗೌಡ,ಬಾಲಕೃಷ್ಣ ಸೇರಿದಂತೆ ಹಲವು ನಾಯಕರು ಆಗಮಿಸಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಹೊಸಪೇಟೆ ಬಳಿಯ ಖಾಸಗಿ ರಿಸಲ್ಟ್ ನಲ್ಲಿ ಜೆಡಿಎಸ್ ನಾಯಕರು ಸೇರಿದ್ದಾರೆ.