ಬೆಂಗಳೂರು: ರಾಜ್ಯ ಮಟ್ಟದ ಸಮಿತಿ ಅಧ್ಯಕ್ಷರಾದವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡೋದಾಗಿ ಸಿಎಂ ಸಿದ್ಧರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ.
ಈ ಕುರಿತಂತೆ ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯ, ಜಿಲ್ಲಾ, ತಾಲೂಕು ಹಾಗೂ ವಿಧಾನಸಭೆ ಕ್ಷೇತ್ರ ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಚನೆ ಮಾಡಲಾಗುತ್ತದೆ ಎಂದರು.
KPCC ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಜಿಲ್ಲಾಧ್ಯಕ್ಷರು, ರಾಜ್ಯ ಪದಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರುಗಳ ಸಭೆಯಲ್ಲಿ ಸಿಎಂ ಮಹತ್ವದ ಘೋಷಣೆ ಘೋಷಣೆ ಮಾಡಿದರು.
ರಾಜ್ಯ ಮಟ್ಟದ ಸಮಿತಿ ಅಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಲಾಗುತ್ತದೆ. ಐದು ಮಂದಿ ಉಪಾಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಲಾಗುತ್ತದೆ. ಉಳಿದ ಸಮಿತಿ ಅಧ್ಯಕ್ಷ ಉಪಾಧ್ಯಕ್ಷರು, ಸದಸ್ಯರಿಗೆ ಗೌರವ ಧನ ನೀಡಲಾಗುತ್ತದೆ. ವಾರ್ಷಿಕ 16 ಕೋಟಿ ರೂ. ವೆಚ್ಚ ಮಾಡಲಾಗುವುದು. ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದ ಹಿನ್ನೆಲೆಯಲ್ಲಿ ಈ ನಿರ್ಧಾರ ಎಂದು ತಿಳಿಸಿದ್ದಾರೆ.
BIG NEWS: ‘ಮುಜರಾಯಿ ಇಲಾಖೆ’ಯ ‘ದೇವಸ್ಥಾನದ ಹುಂಡಿ ಹಣ’ ಆ ದೇವಸ್ಥಾನಕ್ಕೆ ಬಳಕೆ – ಸಚಿವ ರಾಮಲಿಂಗಾರೆಡ್ಡಿ ಘೋಷಣೆ
ಮಕರ ಸಂಕ್ರಾಂತಿ 2024: ಈ ವರ್ಷ ಮಕರ ಸಂಕ್ರಾಂತಿ ಯಾವಾಗ? ದಿನಾಂಕ, ಶುಭ ಸಮಯ, ಪೂಜಾ ವಿಧಾನ ಹೀಗಿದೆ