ಬೆಂಗಳೂರು: “ಇಂದು ಲೋಕಸಭೆ ಚುನಾವಣೆಯ ಪೂರ್ವಭಾವಿ ಸಭೆ ಕರೆಯಲಾಗಿದ್ದು, ಬೆಳಗ್ಗೆ ಪಕ್ಷದ ಎಲ್ಲಾ ಶಾಸಕರು, ಪದಾಧಿಕಾರಿಗಳು, ಚುನಾವಣೆ ಸ್ಪರ್ಧಿಸಿದ್ದ ನಾಯಕರ ಸಭೆ ನಡೆಸಲಾಗುವುದು. ಮಧ್ಯಾಹ್ನ ಜಿಲ್ಲಾ ಕಾಂಗ್ರೆಸ್ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಜತೆ ಸಭೆ ಮಾಡುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಕೆಪಿಸಿಸಿ ಕಚೇರಿಯ ಇಂದಿರಾ ಭವನದಲ್ಲಿ ಸಭೆ ಆರಂಭಕ್ಕೂ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, “ಈ ಸಭೆಯಲ್ಲಿ ಪಕ್ಷದ ಸಂಘಟನೆ, ಬೂತ್ ಮಟ್ಟದಲ್ಲಿ ಬಿಎಲ್ಎಗಳು, ಮತದಾರರ ಹೆಸರು ಸೇರ್ಪಡೆ, ಪರಿಷ್ಕರಣೆ, ಗ್ಯಾರಂಟಿ ಅನುಷ್ಠಾನ, ಜಿಲ್ಲಾ ಮಟ್ಟದ ಸಭೆ, ವಿಧಾನಸಭೆ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಸಭೆ, ಕಾರ್ಯಕರ್ತರ ಸಮಾವೇಶ, ರಾಜ್ಯ ಮಟ್ಟದ ಸಮಾವೇಶದ ಬಗ್ಗೆ ಚರ್ಚೆ ಮಾಡಲಿದ್ದೇವೆ” ಎಂದು ತಿಳಿಸಿದರು.
ರಾಜ್ಯ ಮಟ್ಟದ ಸಮಿತಿ ಅಧ್ಯಕ್ಷರಿಗೆ ‘ಸಂಪುಟ ದರ್ಜೆ’ ಸ್ಥಾನಮಾನ: ‘ಸಿಎಂ ಸಿದ್ಧರಾಮಯ್ಯ’ ಮಹತ್ವದ ಘೋಷಣೆ
ಬೆಂಗಳೂರು: ರಾಜ್ಯ ಮಟ್ಟದ ಸಮಿತಿ ಅಧ್ಯಕ್ಷರಾದವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡೋದಾಗಿ ಸಿಎಂ ಸಿದ್ಧರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ.
ಈ ಕುರಿತಂತೆ ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯ, ಜಿಲ್ಲಾ, ತಾಲೂಕು ಹಾಗೂ ವಿಧಾನಸಭೆ ಕ್ಷೇತ್ರ ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಚನೆ ಮಾಡಲಾಗುತ್ತದೆ ಎಂದರು.
KPCC ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಜಿಲ್ಲಾಧ್ಯಕ್ಷರು, ರಾಜ್ಯ ಪದಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರುಗಳ ಸಭೆಯಲ್ಲಿ ಸಿಎಂ ಮಹತ್ವದ ಘೋಷಣೆ ಘೋಷಣೆ ಮಾಡಿದರು.
ರಾಜ್ಯ ಮಟ್ಟದ ಸಮಿತಿ ಅಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಲಾಗುತ್ತದೆ. ಐದು ಮಂದಿ ಉಪಾಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಲಾಗುತ್ತದೆ. ಉಳಿದ ಸಮಿತಿ ಅಧ್ಯಕ್ಷ ಉಪಾಧ್ಯಕ್ಷರು, ಸದಸ್ಯರಿಗೆ ಗೌರವ ಧನ ನೀಡಲಾಗುತ್ತದೆ. ವಾರ್ಷಿಕ 16 ಕೋಟಿ ರೂ. ವೆಚ್ಚ ಮಾಡಲಾಗುವುದು. ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದ ಹಿನ್ನೆಲೆಯಲ್ಲಿ ಈ ನಿರ್ಧಾರ ಎಂದು ತಿಳಿಸಿದ್ದಾರೆ.
BIG NEWS: ‘ಮುಜರಾಯಿ ಇಲಾಖೆ’ಯ ‘ದೇವಸ್ಥಾನದ ಹುಂಡಿ ಹಣ’ ಆ ದೇವಸ್ಥಾನಕ್ಕೆ ಬಳಕೆ – ಸಚಿವ ರಾಮಲಿಂಗಾರೆಡ್ಡಿ ಘೋಷಣೆ
ಮಕರ ಸಂಕ್ರಾಂತಿ 2024: ಈ ವರ್ಷ ಮಕರ ಸಂಕ್ರಾಂತಿ ಯಾವಾಗ? ದಿನಾಂಕ, ಶುಭ ಸಮಯ, ಪೂಜಾ ವಿಧಾನ ಹೀಗಿದೆ