ಬೆಂಗಳೂರು: ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ಅವರಿಗೆ 2017ರ ಪ್ರಕರಣದಲ್ಲಿ ಕೋರ್ಟ್ ಜಾಮೀನು ನೀಡಿತ್ತು. ಇನ್ನೇನು ಇಂದು ಸಂಜೆಯೊಳಗೆ ಬಿಡುಗಡೆಯಾಗಲಿದ್ದಾರೆ ಎನ್ನಲಾಗುತ್ತಿತ್ತು. ಆದ್ರೇ ಕೋರ್ಟ್ ಜಾಮೀನಿನ ಬೆನ್ನಲ್ಲೇ ಮತ್ತೊಂದು ಪ್ರಕರಣದಲ್ಲಿ ಕರವೇ ಅಧ್ಯಕ್ಷ ನಾರಾಯಣಗೌಡ ಅವರನ್ನು ಹಲಸೂರುಗೇಟ್ ಪೊಲೀಸರು ಬಂಧಿಸಿದ್ಧರು. ಈ ಪ್ರಕರಣದಲ್ಲೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡಗೆ ಸಂಕಷ್ಟ ತಪ್ಪಿಲ್ಲ. 2017ರಲ್ಲಿ ನಡೆದಿದ್ದಂತ ಕುಮಾರಸ್ವಾಮಿ ಲೇಔಟ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಪೊಲೀಸರು ಬಂಧಿಸಿದ್ದರು. ಈ ಪ್ರಕರಣದಲ್ಲಿ ಬೆಂಗಳೂರಿನ 30ನೇ ಎಸಿಎಂಎಂ ಕೋರ್ಟ್ ಅವರಿಗೆ ಇಂದು ಜಾಮೀನು ನೀಡಿತ್ತು. ಈ ಬಳಿಕ ಅವರು ಬಿಡುಗಡೆ ಆಗಲಿದ್ದಾರೆ ಎನ್ನಲಾಗುತ್ತಿತ್ತು.
ಆದ್ರೇ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಎನ್ ಡಿ ಎಂ ಎ ಕಾಯ್ದೆಯಡಿಯ ಪ್ರಕರಣದಲ್ಲಿ ಮತ್ತೆ ಕರವೇ ಅಧ್ಯಕ್ಷ ನಾರಾಯಣಗೌಡ ಅವರನ್ನು ಬಂಧಿಸಲಾಗಿದೆ. ಇದೀಗ ಅವರನ್ನು ವಶಕ್ಕೆ ಪಡೆದಿರುವಂತ ಪೊಲೀಸರು ಬೆಂಗಳೂರಿನ 30ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸೋದಕ್ಕೆ ಕರೆದೊಯ್ದಿದ್ದರು.
ಆ ಬಳಿಕ ಅವರನ್ನು ಸೆಂಟ್ ಮಾರ್ಥಾಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ವೈದ್ಯಕೀಯ ಪರೀಕ್ಷೆ ಮಾಡಿಸಿ, ಆ ಬಳಿಕ ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಿದ್ದರು. ಇಂತಹ ಅವರಿಗೆ ಹಲಸೂರು ಗೇಟ್ ಠಾಣೆಯಲ್ಲಿ ದಾಖಲಾಗಿದ್ದಂತ ಎನ್ ಡಿಎಂಎ ಕಾಯ್ದೆಯಡಿ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡಲಾಗಿದೆ. ಹೀಗಾಗಿ ಇಂದು ಅವರು ಜೈಲಿನಿಂದ ಬಿಡುಗಡೆಯಾಗೋ ಸಾಧ್ಯತೆ ಇದೆ.
BREAKING : “RSS/ಬಿಜೆಪಿ ಕಾರ್ಯಕ್ರಮ ಅನ್ನೋದು ಸ್ಪಷ್ಟ” : ರಾಮಮಂದಿರ ಪ್ರಾಣ ಪ್ರತಿಷ್ಠಾಪನೆಗೆ ‘ಕಾಂಗ್ರೆಸ್’ ಗೈರು