ಬೆಂಗಳೂರು: ಕರ್ನಾಟಕ ಶಿಕ್ಷಣ ಕಾಯ್ದೆ-1983 ರ ಸೆಕ್ಷನ್ 2 ರ ಕ್ಲಾಸ್ (31) ಮತ್ತು ಕರ್ನಾಟಕ ಸರ್ಕಾರದ ಅಧಿಸೂಚನೆ ಸಂಖ್ಯೆ: ಇಡಿ.43.ವಿವಿಧ.2001, ದಿನಾಂಕ: 05-05-2003 ಹಾಗೂ ಸರ್ಕಾರದ ಆದೇಶ ಸಂಖ್ಯೆ: ಇಡಿ.09.ವಿವಿಧ.2001, ದಿನಾಂಕ: 16-05-2006 ಪ್ರಕಾರ, ಕರ್ನಾಟಕ ರಾಜ್ಯದಲ್ಲಿ ಐ.ಎ.ಎಸ್, ಐ.ಪಿ.ಎಸ್, ಐ.ಎಫ್.ಎಸ್. ಹಾಗೂ ಕೆ.ಎ.ಎಸ್. ಭಾμÁ ಕೋಚಿಂಗ್ ಮತ್ತು ಇನ್ನಿತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕೋಚಿಂಗ್ ನೀಡುವ ಸಂಸ್ಥೆಗಳು ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಉನ್ನತ ಶಿಕ್ಷಣ ಸೌಧ, ಶೇμÁದ್ರಿ ರಸ್ತೆ ಬೆಂಗಳೂರು – 560001 ಇಲ್ಲಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿರುತ್ತದೆ.
ನೋಂದಣಿ ಮಾಡಿಕೊಳ್ಳದೇ ಇರುವ ರಾಜ್ಯದಲ್ಲಿರುವ ಕೋಚಿಂಗ್ ಸೆಂಟರ್‍ಗಳು ಈ ಪ್ರಕಟಣೆಯು ಪ್ರಕಟಗೊಂಡ 15 ದಿನಗಳ ಒಳಗಾಗಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳುವುದು. ತಪ್ಪಿದಲ್ಲಿ ಕರ್ನಾಟಕ ಶಿಕ್ಷಣ ಕಾಯ್ದೆ-1983 ರ ಸೆಕ್ಷನ್ 2 ರ ಕ್ಲಾಸ್ (31) ರ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.