Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯದ ಸರ್ಕಾರಿ ಶಾಲೆಗಳ ಬಿಸಿಯೂಟಕ್ಕೆ `LPG ಸಿಲಿಂಡರ್’ ಕೊರತೆಯಾಗದಂತೆ ನೋಡಿಕೊಳ್ಳಿ : ಸರ್ಕಾರದಿಂದ ಮಹತ್ವದ ಆದೇಶ

ಡಿಕೆಶಿ ಸಿಎಂ ಆಗೋವರೆಗೂ ಕಟಿಂಗ್, ಶೇವಿಂಗ್ ಇಲ್ಲ : ಕೊನೆಗೂ ಫಲಿಸಿತು 3 ವರ್ಷಗಳಿಂದ ಗಡ್ಡ-ಕೂದಲು ಬಿಟ್ಟು ಕಾಯುತ್ತಿದ್ದ ಅಪ್ಪಟ ಅಭಿಮಾನಿಯ ಹರಕೆ.!

ಏಷ್ಯನ್ U20 ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ : ಮಹಿಳಾ ಹೈಜಂಪ್‌ನಲ್ಲಿ ಚಿನ್ನದ ಪದಕ ಗೆದ್ದು, ದಾಖಲೆ ಬರೆದ 18 ವರ್ಷದ ಪೂಜಾ ಸಿಂಗ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » 2000 ರೂ. ವರೆಗೆ ರೈತರ ಖಾತೆಗೆ ಇನ್ ಪುಟ್ ಸಬ್ಸಿಡಿ ಪರಿಹಾರ ಬಿಡುಗಡೆ : ಸಿಎಂ ಸಿದ್ದರಾಮಯ್ಯ
KARNATAKA

2000 ರೂ. ವರೆಗೆ ರೈತರ ಖಾತೆಗೆ ಇನ್ ಪುಟ್ ಸಬ್ಸಿಡಿ ಪರಿಹಾರ ಬಿಡುಗಡೆ : ಸಿಎಂ ಸಿದ್ದರಾಮಯ್ಯ

By ಅವಿನಾಶ್‌ ಆರ್‌ ಭೀಮಸಂದ್ರ

ಬೆಂಗಳೂರು:ಗ್ಯಾರಂಟಿಗಳು ಜಾರಿಯಾಗಿರದಿದ್ದರೆ ಬರಗಾಲದ ಹಾಹಾಕಾರ ಎದ್ದಿರುತ್ತಿತ್ತು. ರಾಜ್ಯದ 223 ತಾಲ್ಲೂಕುಗಳು ಬರಗಾಲ ಪೀಡಿತವಾಗಿದ್ದರೂ ಮೇವಿಗೆ, ಕುಡಿಯುವ ನೀರಿಗೆ, ಉದ್ಯೋಗ ಖಾತ್ರಿಗೆ ತೊಂದರೆಯಾಗಿಲ್ಲ. ಸಿಎಂ ಸಿದ್ದರಾಮಯ್ಯ ಅವರು ಮಾಹಿತಿ ನೀಡಿದ್ದಾರೆ.

ಇದೇ ವೇಳೆ ಅವರು ನಾವು ಸತ್ಯ ಹೇಳಿ ಲಾಭವನ್ನು ಪಡೆಯುವ ಪ್ರಯತ್ನ ಮಾಡಬೇಕು. ಗ್ಯಾರಂಟಿಗಳನ್ನು ಅಪಹಾಸ್ಯ, ಅವಹೇಳನ ಮಾಡಿದವರೇ ಈಗ ಮೋದಿ ಗ್ಯಾರಂಟಿ ಎಂದು ಶುರು ಮಾಡಿದ್ದಾರೆ. ನಾವು ಜನರಿಗೆ ಸತ್ಯವನ್ನು ಹೇಳಬೇಕು. ಭಾರತದ ಇತಿಹಾಸದಲ್ಲಿ ಯಾವ ಸರ್ಕಾರವೂ ಈ ರೀತಿಯ ಗ್ಯಾರಂಟಿ ಕಾರ್ಯಕ್ರಮಗಳನ್ನು ಜಾರಿ ಮಾಡಿಲ್ಲ. ಇದರಿಂದ ಬಡವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬಲು ಸಾಧ್ಯವಾಗುತ್ತದೆ. ದಲಿತರು, ಹಿಂದುಳಿದವರು, ಮಹಿಳೆಯರಿಗೆ ಅನುಕೂಲವಾಗಲಿದೆ. ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆಗಳು ಮಹಿಳಾ ಸಬಲೀಕರಣಕ್ಕೆ ಪೂರಕವಾಗಿದೆ.

ಸರ್ಕಾರದಲ್ಲಿ ಹಣವಿಲ್ಲ ಎನ್ನುವ ಅಪಪ್ರಚಾರವನ್ನು ಸೋಲಿಸಬೇಕು. ಇಷ್ಟು ದೊಡ್ಡ ದೊಡ್ಡ ಕಾರ್ಯಕ್ರಮಗಳು ಹಣವಿಲ್ಲದೆ ನಡೆಯಲು ಸಾಧ್ಯವೇ? ನಮ್ಮವರೇ ವಿರೋಧ ಪಕ್ಷಗಳ ಅಪಪ್ರಚಾರವನ್ನು ಸೋಲಿಸಲು ಮುಂದಾಗಬೇಕು. ಮಾರ್ಚ್ ಒಳಗೆ ಎಲ್ಲಾ ಶಾಸಕರಿಗೆ 25 ಕೋಟಿ ರೂ.ಗಳ ಕೆಲಸ ನೀಡಲು ಸೂಚಿಸಿದ್ದೇನೆ.

ಕಳೆದ ವರ್ಷ ಸೆಪ್ಟೆಂಬರ್ ತಿಂಗಳಲ್ಲಿ ನಾವು ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿದ್ದರೂ, ಈವರೆಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಸಭೆ ಕರೆದಿಲ್ಲ. ಪ್ರಧಾನಿ ನರೇಂದ್ರ ಮೋದಿಯವರನ್ನು ಹಾಗೂ ಅಮಿತ್ ಶಾ ಅವರನ್ನು ಭೇಟಿ ಮಾಡಿದಾಗ ಭರವಸೆ ನೀಡಿದ್ದರು. ಕೇಂದ್ರ ಸರ್ಕಾರ ಕೊಡುವವರೆಗೆ ಕಾಯಬಾರದು ಎಂದು 2000 ರೂ. ವರೆಗೆ ರೈತರಿಗೆ ಇನ್ ಪುಟ್ ಸಬ್ಸಿಡಿ ಪರಿಹಾರ ನೀಡಲು ಪ್ರಾರಂಭಿಸಲಾಗಿದೆ.

ಬಿಜೆಪಿಯವರು ಬರಪರಿಹಾರ ಕೊಟ್ಟಿಲ್ಲ ಎಂದು ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ. 25 ಸಂಸದರು ರಾಜ್ಯದಿಂದ ಇದ್ದರೂ ಒಂದು ದಿನವೂ ಈ ಬಗ್ಗೆ ಮಾತನಾಡಿಲ್ಲ. 15ನೇ ಹಣಕಾಸಿನ ಆಯೋಗವು 14-15 ನೇ ಸಾಲಿಗೆ 1.07 % ಹಣ ಕಡಿಮೆ ಮಾಡಿದರು. 1ಲಕ್ಷ 66 ಸಾವಿರ ಕೋಟಿ ರೂ.ಗಳು ನಮಗೆ ಬರಬೇಕಿತ್ತು. 15 ನೇ ಹಣಕಾಸು ಆಯೋಗದ ಮಧ್ಯಂತರ ವರದಿಯಲ್ಲಿ 5,495 ಕೋಟಿ ರೂ.ಗಳನ್ನು ಕೊಡುವುದಾಗಿ ಹೇಳಿ ಕೊಟ್ಟಿಲ್ಲ. ಕರ್ನಾಟಕದ ಬಗ್ಗೆ ಇವರಿಗೆ ಕಾಳಜಿ ಇದೆಯೇ?

2018-19 ರಲ್ಲಿ ಕೇಂದ್ರದ ಬಜೆಟ್ ಗಾತ್ರ 23 ಲಕ್ಷ ಕೋಟಿ ರೂ.ಗಳಿತ್ತು. 35 ಸಾವಿರ ಕೋಟಿ ನಮ್ಮ ಪಾಲು ಇತ್ತು. ಈಗ 45 ಲಕ್ಷ ಕೋಟಿ ರೂ.ಗಳಿದ್ದರೂ ನಮಗೆ ಬರುವುದು ಕೇವಲ 37 ಸಾವಿರ ಕೋಟಿ. ಕರ್ನಾಟಕಕ್ಕೆ ಕೇಂದ್ರದಿಂದ ಅನ್ಯಾಯವಾಗಿದೆ. ಅವರು ಕೊಡುವುದು ನಮ್ಮ ತೆರಿಗೆಯ ಹಣವನ್ನೇ.

ಸೆಸ್, ಸರ್ಚಾರ್ಜ್ ನಲ್ಲಿ ನಮಗೆ ಪಾಲಿಲ್ಲ. 4 ಲಕ್ಷ ಕೋಟಿ ರೂ.ಗಳನ್ನು ನಮ್ಮ ರಾಜ್ಯದಿಂದ ಸಂಗ್ರಹ ಮಾಡುತ್ತಾರೆ. 52 ಸಾವಿರ ಕೋಟಿ ರೂ.ಗಳನ್ನು ಮಾತ್ರ ಕೊಡುತ್ತಾರೆ. ಎಲ್ಲಾ ಶಾಸಕರು, ಸಂಸದರು ಇದನ್ನು ಹೇಳಬೇಕು. ಈ 10 ವರ್ಷಗಳಲ್ಲಿ ನಮಗೆ ದೊಡ್ಡ ಅನ್ಯಾಯವಾಗಿದೆ. ಜಿಎಸ್‌ಟಿ ಇಂದಾಗುವ ನಷ್ಟವನ್ನು ಭರಿಸುವುದಾಗಿ ಹೇಳಿದ್ದರೂ, ನಮಗೆ ಹಣವನ್ನು ಕೊಟ್ಟಿಲ್ಲ. ರಾಜ್ಯದ ಸಂಸದರೂ ತುಟಿಕ್ ಪಿಟಿಕ್ಕೆನ್ನದೇ ಇದ್ದಾರೆ. ಆರ್ಥಿಕವಾಗಿ ಸ್ವಲ್ಪ ಭಾರವಾದರೂ ಗ್ಯಾರಂಟಿಗಳು ಜನರಿಗೆ ಮುಂದಿನ ದಿನಗಳಲ್ಲಿ ಆರ್ಥಿಕ, ಸಾಮಾಜಿಕ ಶಕ್ತಿಯನ್ನು ತುಂಬುತ್ತದೆ. ಕೇಂದ್ರದಿಂದ ರಾಜ್ಯಕ್ಕಾಗಿರುವ ಅನ್ಯಾಯಗಳ ಬಗ್ಗೆ ಶಾಸಕರಿಗೆ ಪಟ್ಟಿ ಕಳಿಸಿಕೊಟ್ಟು ಅದನ್ನು ಜನರಿಗೆ ತಲುಪಿಸಬೇಕು. ಜನರಿಗೆ ನಮ್ಮ ಗ್ಯಾರಂಟಿಗಳನ್ನು ತಲುಪಿಸಬೇಕು ಅಂತ ಅವರು ಹೇಳಿದ್ದಾರೆ.

000 Input subsidy relief for farmers till date: CM Siddaramaiah 2000 ರೂ. ವರೆಗೆ ರೈತರಿಗೆ ಇನ್ ಪುಟ್ ಸಬ್ಸಿಡಿ ಪರಿಹಾರ : ಸಿಎಂ ಸಿದ್ದರಾಮಯ್ಯ Rs 2
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ ಸರ್ಕಾರಿ ಶಾಲೆಗಳ ಬಿಸಿಯೂಟಕ್ಕೆ `LPG ಸಿಲಿಂಡರ್’ ಕೊರತೆಯಾಗದಂತೆ ನೋಡಿಕೊಳ್ಳಿ : ಸರ್ಕಾರದಿಂದ ಮಹತ್ವದ ಆದೇಶ

1 Min Read

ಡಿಕೆಶಿ ಸಿಎಂ ಆಗೋವರೆಗೂ ಕಟಿಂಗ್, ಶೇವಿಂಗ್ ಇಲ್ಲ : ಕೊನೆಗೂ ಫಲಿಸಿತು 3 ವರ್ಷಗಳಿಂದ ಗಡ್ಡ-ಕೂದಲು ಬಿಟ್ಟು ಕಾಯುತ್ತಿದ್ದ ಅಪ್ಪಟ ಅಭಿಮಾನಿಯ ಹರಕೆ.!

2 Mins Read

BIG NEWS : ಮನೆ ಮಾಲೀಕ ಮಾಡಿದ ಸಾಲಕ್ಕೆ ಬಾಡಿಗೆದಾರರು ಹೊಣೆಯಲ್ಲ : ಹೈಕೋರ್ಟ್ ಮಹತ್ವದ ತೀರ್ಪು

2 Mins Read
Recent News

BIG NEWS : ರಾಜ್ಯದ ಸರ್ಕಾರಿ ಶಾಲೆಗಳ ಬಿಸಿಯೂಟಕ್ಕೆ `LPG ಸಿಲಿಂಡರ್’ ಕೊರತೆಯಾಗದಂತೆ ನೋಡಿಕೊಳ್ಳಿ : ಸರ್ಕಾರದಿಂದ ಮಹತ್ವದ ಆದೇಶ

ಡಿಕೆಶಿ ಸಿಎಂ ಆಗೋವರೆಗೂ ಕಟಿಂಗ್, ಶೇವಿಂಗ್ ಇಲ್ಲ : ಕೊನೆಗೂ ಫಲಿಸಿತು 3 ವರ್ಷಗಳಿಂದ ಗಡ್ಡ-ಕೂದಲು ಬಿಟ್ಟು ಕಾಯುತ್ತಿದ್ದ ಅಪ್ಪಟ ಅಭಿಮಾನಿಯ ಹರಕೆ.!

ಏಷ್ಯನ್ U20 ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ : ಮಹಿಳಾ ಹೈಜಂಪ್‌ನಲ್ಲಿ ಚಿನ್ನದ ಪದಕ ಗೆದ್ದು, ದಾಖಲೆ ಬರೆದ 18 ವರ್ಷದ ಪೂಜಾ ಸಿಂಗ್!

BIG NEWS : ಮನೆ ಮಾಲೀಕ ಮಾಡಿದ ಸಾಲಕ್ಕೆ ಬಾಡಿಗೆದಾರರು ಹೊಣೆಯಲ್ಲ : ಹೈಕೋರ್ಟ್ ಮಹತ್ವದ ತೀರ್ಪು

State News
KARNATAKA

BIG NEWS : ರಾಜ್ಯದ ಸರ್ಕಾರಿ ಶಾಲೆಗಳ ಬಿಸಿಯೂಟಕ್ಕೆ `LPG ಸಿಲಿಂಡರ್’ ಕೊರತೆಯಾಗದಂತೆ ನೋಡಿಕೊಳ್ಳಿ : ಸರ್ಕಾರದಿಂದ ಮಹತ್ವದ ಆದೇಶ

By kannadanewsnow57 KARNATAKA 1 Min Read

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಜೂನ್ 1ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗುತ್ತಿದ್ದು, ವಿದ್ಯಾರ್ಥಿಗಳ ಬಿಸಿಯೂಟ (ಮಧ್ಯಾಹ್ನದ ಉಪಹಾರ) ಯೋಜನೆಗೆ…

ಡಿಕೆಶಿ ಸಿಎಂ ಆಗೋವರೆಗೂ ಕಟಿಂಗ್, ಶೇವಿಂಗ್ ಇಲ್ಲ : ಕೊನೆಗೂ ಫಲಿಸಿತು 3 ವರ್ಷಗಳಿಂದ ಗಡ್ಡ-ಕೂದಲು ಬಿಟ್ಟು ಕಾಯುತ್ತಿದ್ದ ಅಪ್ಪಟ ಅಭಿಮಾನಿಯ ಹರಕೆ.!

BIG NEWS : ಮನೆ ಮಾಲೀಕ ಮಾಡಿದ ಸಾಲಕ್ಕೆ ಬಾಡಿಗೆದಾರರು ಹೊಣೆಯಲ್ಲ : ಹೈಕೋರ್ಟ್ ಮಹತ್ವದ ತೀರ್ಪು

BIG NEWS : ಡಿಕೆ ಶಿವಕುಮಾರ್ ಜಾತಕದ ಪ್ರಕಾರ, ಸಿಎಂ ಪದಗ್ರಹಣಕ್ಕೆ ಜೂನ್ 3ರಂದೆ ಶುಭ ಮುಹೂರ್ತ ನೀಡಿದ ಅಜ್ಜಯ್ಯ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.