ಬೆಂಗಳೂರು : ಹಾವೇರಿ ಜಿಲ್ಲೆ, ಹಾನಗಲ್ ತಾಲೂಕಿನಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಐಜಿಪಿ ಅಲೋಕ್ ಮೋಹನ್ ಪ್ರತಿಕ್ರಿಯೆ ನೀಡಿದ್ದು ನೈತಿಕ ಪೊಲೀಸ್ ಗಿರಿ ಯಾರೆ ನಡೆಸಿದರು ಮುಲಾಜಿ ಇಲ್ಲದೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಇಂತಹ ಘಟನೆ ಎಲ್ಲಿ ನಡೆದರೂ ತಕ್ಷಣ ಕ್ರಮ ಕೈಗೊಳ್ಳುತ್ತಿದ್ದೇವೆ.ಸಮಾಜದಲ್ಲಿ ಎಲ್ಲರಿಗೂ ಕಾನೂನು ಒಂದೇ ಎಂದು ಬೆಂಗಳೂರು ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ತಿಳಿಸಿದರು.
ಘಟನೆ ಹಿನ್ನೆಲೆ
ಹಾವೇರಿಯಲ್ಲಿ ನೈತಕ ಪೊಲೀಸ್ ಗಿರಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಜ.08ರಂದು ಸೋಮವಾರ ಅನ್ಯಕೋಮಿನ ಇಬ್ಬರು ವಿವಾಹಿತರು ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ನಾಕ್ಲಕ್ರಾಸ್ ಬಳಿ ಇರುವ ಖಾಸಗಿ ಹೋಟೆಲ್ ನಲ್ಲಿ ತಂಗಿರುತ್ತಾರೆ. ಇದನ್ನು ಕಂಡ ಕೆಲ ಮುಸ್ಲಿಂ ಯುವಕರು ಏಕಾಏಕಿ ಹೋಟೆಲ್ ಗೆ ನುಗ್ಗಿ ದಾಂದಲೇ ಮಾಡಿ ಮಹಿಳೆ ಮತ್ತು ಪುರುಷನ ಮೇಲೆ ಹಲ್ಲೆ ನಡೆಸಿದ್ದರು. ಅಲ್ಲದೇ ಹಲ್ಲೆ ಮಾಡುವಾಗ ವಿಡಿಯೋ ಮಾಡಿಕೊಂಡಿದ್ದರು. ಈಗಾ ಈ ಘಟನೆಯ 2 ವಿಡಿಯೋ ವೈರಲ್ ಆಗಿದೆ.
ಈ ದುರುಳರು ಮುಸ್ಲಿಂ ಮಹಿಳೆಯರು, ಹುಡುಗಿಯರನ್ನ ಟಾರ್ಗೆಟ್ ಮಾಡಿಕೊಂಡಿದ್ದರು. ಹಿಂದೂ ಹುಡಗರ ಜೊತೆ ಕಾಣಿಸಿಕೊಂಡ ಮುಸ್ಲಿಂ ಹುಡುಗಿಯರು, ಮಹಿಳೆಯರನ್ನ ಟಾರ್ಗೆಟ್ ಮಾಡ್ತಿದ್ದರು. ಜೋಡಿ ಹಕ್ಕಿಗಳ ಮೇಲೆ ಅಟ್ಯಾಕ್ ಮಾಡಿ ಹುಡುಗಿಯರನ್ನ ಎಳೆದೊಯ್ಯುತ್ತಿದ್ದರು. ಇದೀಗ ಎರಡನೇ ವಿಡಿಯೋ ವೈರಲ್ ಆಗುತ್ತಿದ್ದಂತೆ ಹಾನಗಲ್ ಜನರು ಬೆಚ್ಚಿ ಬಿದ್ದಿದ್ದಾರೆ. ಆರೋಪಿಗಳು ಮುಸ್ಲಿಂ ಮಹಿಳೆಯನ್ನು ಕಾರಿನಲ್ಲಿ ಎಳೆದೊಯ್ದು ಚಿತ್ರಹಿಂಸೆ ನೀಡಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗಿದೆ.
ಇನ್ನೂ ಪ್ರಖರಣ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಹಾವೇರಿ ಎಸ್. ಪಿ ಅಂಶುಕುಮಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದೆವೆ. ಮಹಿಳೆ ಎಲ್ಲೂ ನನ್ನ ಮೇಲೆ ಗ್ಯಾಂಗ್ ರೇಪ್ ಆಗಿದೆ ಎಂದು ಹೇಳಿಲ್ಲ. ವೈಧ್ಯಕೀಯ ತಪಾಸಣೆ ಮಾಡಿಸಿದ್ದೆವೆ. ಮಹಿಳೆಯ ದೂರಿನ ಮೇರಿಗೆ ತನಿಖೆ ಮುಂದುವರೆಸುತ್ತೇವೆ ಎಂದು ತಿಳಿಸಿದ್ದಾರೆ.