ಬೆಂಗಳೂರು: ಕೋವಿಡ್-19 ಸೋಂಕಿನಿಂದ ಮರಣ ಹೊಂದಿದವರ ಅಂತ್ಯಕ್ರಿಯೆ ನಡೆಸುವ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶವನ್ನು ಹೊರಡಿಸಿದೆ.
ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯಿಂದ ಸುತ್ತೋಲೆ ಹೊರಡಿಸಿದ್ದು, ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಗಳ ಅನ್ವಯ ರಾಜ್ಯದ ಜಿಲ್ಲೆಗಳಲ್ಲಿ ಹಾಗೂ ಬಿ ಬಿ ಎಂ ಪಿ ವ್ಯಾಪ್ತಿಯಲ್ಲಿ ಕೋವಿಡ್ 19 ಸೋಂಕಿನಿಂದ ಮರಣ ಹೊಂದಿದವರ ಅಂತ್ಯಕ್ರಿಯೆಯನ್ನು ಸಾಮಾನ್ಯ ಚಿತಾಗಾರ / ಸ್ಮಶಾನ/ ರುದ್ರಭೂಮಿಯಲ್ಲಿ ನಡೆಸುವಂತೆ ಸೂಚಿಸಿದೆ.
ಮುಂದುವರೆದು, ಕೋವಿಡ್ 19 ಸೋಂಕಿನಿಂದ ಮರಣ ಹೊಂದಿದವರ ಅಂತ್ಯಕ್ರಿಯೆಯನ್ನು ‘ನಡೆಸಲು ಬಿ ಬಿ ಎಂ ಪಿ ವ್ಯಾಪ್ತಿಯಲ್ಲಿ ಹಾಗೂ ಜಿಲ್ಲೆಗಳ ವ್ಯಾಪ್ತಿಯಲ್ಲಿ ಬರುವ ಚಿತಾಗಾರ / ಸ್ಮಶಾನ/ ರುದ್ರಭೂಮಿಗಳಲ್ಲಿ ಅಂತ್ಯಕ್ರಿಯೆಗೆ ತರುವ ಮೃತದೇಹಗಳನ್ನು ಚಿತಾಗಾರ / ಸ್ಮಶಾನದ ಸಿಬ್ಬಂದಿಯು ನಿರಾಕರಿಸದೆ, ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು (N -95 ಮಾಸ್ಕ್, ಗೊವ್ ಹಾಗೂ ಪಿಪಿಇ ಕಿಟ್ ಧರಿಸುವುದು ಮತ್ತು ಅಂತ್ಯಕ್ರಿಯೆ ನಡೆಸಿದ ನಂತರ ಅವುಗಳನ್ನು ಮಾರ್ಗಸೂಚಿಯಂತೆ ವಿಲೇವಾರಿ ಮಾಡುವುದು) ಅಂತ್ಯಕ್ರಿಯೆಯನ್ನು ನಡೆಸಲು ತಿಳಿಸುವಂತೆ ಈ ಮೂಲಕ ಸೂಚಿಸಿದೆ.
ಈ ನಿಟ್ಟಿನಲ್ಲಿ, ಬಿ, ಬಿ.ಎಂ.ಪಿ ವ್ಯಾಪ್ತಿಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಜಿಲ್ಲಾಡಳಿತಗಳು ಅಗತ್ಯ ಕ್ರಮಕೈಗೊಳ್ಳುವಂತೆ ತಿಳಿಸಿದೆ.
ಜ.14 ರಿಂದ 25 ರವರೆಗೆ ಅಯೋಧ್ಯೆಯಲ್ಲಿ ‘ರಾಮ್ ನಾಮ್ ಮಹಾ ಯಜ್ಞ’ |’Ram Naam Maha Yagna’
ಜ.31ರಿಂದ ‘ಸಂಸತ್ತಿನ ಬಜೆಟ್’ ಅಧಿವೇಶನ ಆರಂಭ, ಫೆ.1ರಂದು ‘ಮಧ್ಯಂತರ’ ಬಜೆಟ್ ಮಂಡನೆ