ಬೆಂಗಳೂರು: “ಅಂಬಲಿ ಕುಡಿಯುವವನಿಗೆ ಮೀಸೆ ತಿಕ್ಕುವವನೊಬ್ಬ” ಎಂಬ ಗಾದೆ ಮಾತಿನಂತೆ ಈಗಾಗಲೇ ಅವೈಜ್ಞಾನಿಕ ಗ್ಯಾರೆಂಟಿಗಳ ಭಾರವನ್ನ ಹೊರಲಾಗದೆ ಬೆನ್ನು ಮೂಳೆ ಮುರಿದಂತಾಗಿರುವ ಸರ್ಕಾರಕ್ಕೆ, ಗ್ಯಾರೆಂಟಿ ಜಾರಿ ಸಮತಿ ಎಂಬ ಮತ್ತೊಂದು ಹೊರೆ ಹೊರಿಸಲು ಹೊರಟಿದ್ದಾರೆ ಸಿಎಂ ಸಿದ್ಧರಾಮಯ್ಯ ಎಂಬುದಾಗಿ ಪ್ರತಿಪಕ್ಷ ನಾಯಕ ಆರ್ ಅಶೋಕ್ ಲೇವಡಿ ಮಾಡಿದ್ದಾರೆ.
ಈ ಬಗ್ಗೆ ಎಕ್ಸ್ ಮಾಡಿರುವಂತ ಅವರು, ಗ್ಯಾರೆಂಟಿ ಜಾರಿಗೆ ಮುಖ್ಯಮಂತ್ರಿ ಆದಿಯಾಗಿ, 34 ಕ್ಯಾಬಿನೆಟ್ ಸಚಿವರು, ಆರ್ಥಿಕ,ರಾಜಕೀಯ, ಮಾಧ್ಯಮ ಸಲಹೆಗಾರರು, ಜಿಲ್ಲಾಡಳಿತಗಳು ಸೇರಿದಂತೆ ಇಡೀ ಆಡಳಿತ ಯಂತ್ರವೇ ಇರುವಾಗ ಪ್ರತ್ಯೇಕ ಸಮಿತಿಯ ಅಗತ್ಯ ಏನಿದೆ? ಎಂದು ಪ್ರಶ್ನಿಸಿದ್ದಾರೆ.
ಸಂಪುಟ ದರ್ಜೆ ಸ್ಥಾನಮಾನದ ಅಧ್ಯಕ್ಷರು, ರಾಜ್ಯ ಸಚಿವ ಸ್ಥಾನಮಾನದ ಐವರು ಉಪಾಧ್ಯಕ್ಷರು ಸೇರಿದಂತೆ 31 ಸದಸ್ಯರ ಸಮಿತಿಯ ಸಂಬಳ ಸಾರಿಗೆ ಖರ್ಚಿನಿಂದ ರಾಜ್ಯ ಸರ್ಕಾರಕ್ಕೆ 16 ಕೋಟಿ ರೂಪಾಯಿ ಹೊರೆಯಾಗಲಿದೆ ಎಂದು ಹೇಳಿದ್ದಾರೆ.
ತಮ್ಮ ಪಕ್ಷದ ಅತೃಪ್ತ ಶಾಸಕರನ್ನ, ಪ್ರಮುಖ ಕಾರ್ಯಕರ್ತರನ್ನು ಲೋಕಸಭಾ ಚುನಾವಣೆಯ ಕೆಲಸಕ್ಕೆ ಬಳಸಿಕೊಳ್ಳಲು ರಾಜ್ಯದ ಸಾರ್ವಜನಿಕ ಹಣ ಏಕೆ ದುರ್ಬಳಕೆ ಮಾಡುತ್ತೀರಿ ಸಿಎಂ ಸಿದ್ಧರಾಮಯ್ಯನವರೇ? ಗ್ಯಾರೆಂಟಿ ಜಾರಿಯೇ ಹೊರೆಯಾಗಿ ಅಭಿವೃದ್ಧಿಗೆ ಹಣ ಇಲ್ಲದಿರುವಾಗ ಕಂಡ ಕಂಡವರಿಗೆ ಗೂಟದ ಕಾರು ಕೊಡಲು ರಾಜ್ಯದ ಖಜಾನೆ ಏನು ಕಾಂಗ್ರೆಸ್ ಪಕ್ಷದ ಆಸ್ತಿ ಎಂದುಕೊಂಡಿದ್ದೀರಾ? ಸಚಿವರು, ಆಡಳಿತ ಯಂತ್ರದ ಮೂಲಕ ಗ್ಯಾರೆಂಟಿ ಜಾರಿ ಮಾಡಲು ಆಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ. ಅದು ಬಿಟ್ಟು ಸುಮ್ಮನೆ ರಾಜ್ಯದ ಬೊಕ್ಕಸವನ್ನ ಪೋಲು ಮಾಡಬೇಡಿ ಎಂದು ಗುಡುಗಿದ್ದಾರೆ.
ಗ್ಯಾರೆಂಟಿ ಜಾರಿ ಸಮಿತಿ ಅಲ್ಲ ಅತೃಪ್ತ ಶಾಸಕರಿಗೆ ಗೂಟದ ಕಾರು ಗ್ಯಾರೆಂಟಿ ನೀಡುವ ಸಮಿತಿ
"ಅಂಬಲಿ ಕುಡಿಯುವವನಿಗೆ ಮೀಸೆ ತಿಕ್ಕುವವನೊಬ್ಬ" ಎಂಬ ಗಾದೆ ಮಾತಿನಂತೆ ಈಗಾಗಲೇ ಅವೈಜ್ಞಾನಿಕ ಗ್ಯಾರೆಂಟಿಗಳ ಭಾರವನ್ನ ಹೊರಲಾಗದೆ ಬೆನ್ನು ಮೂಳೆ ಮುರಿದಂತಾಗಿರುವ ಸರ್ಕಾರಕ್ಕೆ, ಗ್ಯಾರೆಂಟಿ ಜಾರಿ ಸಮತಿ ಎಂಬ ಮತ್ತೊಂದು ಹೊರೆ ಹೊರಿಸಲು ಹೊರಟಿದ್ದಾರೆ ಸಿಎಂ… pic.twitter.com/qKYoqHeJRK
— R. Ashoka (ಆರ್. ಅಶೋಕ) (@RAshokaBJP) January 11, 2024
https://x.com/RAshokaBJP/status/1745294279793402212?s=08
ರೈತರ ಪರಿಹಾರಕ್ಕೆ ದುಡ್ಡಿಲ್ಲ, ಕಾಂಗ್ರೆಸ್ ಚೇಲಾಗಳಿಗೆ ಬಿರಿಯಾನಿ ಊಟಕ್ಕೆ 150 ಕೋಟಿ ರೂ. ಇದೆ – ಆರ್.ಅಶೋಕ್ ಕಿಡಿ
ಕರ್ನಾಟಕದ ‘ರಾಮನ ಭಕ್ತ’ರಿಗೆ ಶಾಕ್: ‘ಬೆಂಗಳೂರು-ಅಯೋಧ್ಯೆ’ ವಿಮಾನ ಪ್ರಯಾಣ ದರ ಶೇ.400ರಷ್ಟು ಏರಿಕೆ