ಸೂರ್ಯನ ಸಂಕ್ರಾಂತಿಗಳಲ್ಲಿ ಮಕರ ಸಂಕ್ರಾಂತಿ ಅತ್ಯಂತ ಶ್ರೇಷ್ಠ ಪುಣ್ಯ ಕಾಲವಾಗಿರುತ್ತದೆ ಹಾಗೂ ಸೂರ್ಯನು ದಕ್ಷಿಣ ದಿಕ್ಕಿನಿಂದ ಉತ್ತರ ದಿಕ್ಕಿಗೆ ತನ್ನ ಪಥ ಬದಲಾಯಿಸುವ ದಿವಸವಾಗಿರುವುದರಿಂದ ಮಕರ ಸಂಕ್ರಾಂತಿಯ ಪುಣ್ಯ ಕಾಲದ ಜತೆಗೆ ಉತ್ತರಾಯಣ ಪುಣ್ಯ ಕಾಲವು ಸೇರುವುದರಿಂದ ಅತ್ಯಂತ ಶುಭ ಪುಣ್ಯ ಕಾಲವಾಗಿರುತ್ತದೆ.
ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ
ನಂ:- 9686268564.
ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಈ ಸಂಕ್ರಾಂತಿಯಲ್ಲಿ ಸೂರ್ಯನು ಮಕರ ರಾಶಿಗೆ ಪ್ರವೇಶಿಸಿದ ನಂತರ ಹಗಲು ಪೂರ್ತಿ ಅಂದರೆ ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಪುಣ್ಯ ಕಾಲವಿರುತ್ತದೆ. ಈ ಪುಣ್ಯ ಕಾಲದ ವೇಳೆಯಲ್ಲಿ ನದಿಗಳಲ್ಲಿ ಎಳ್ಳು ಮತ್ತು ಎಕ್ಕದ ಎಲೆಗಳೊಂದಿಗೆ ಸ್ನಾನ ಮಾಡಿ, ದೇವತೆಗಳಿಗೆ, ಪಿತೃಗಳಿಗೆ ತರ್ಪಣ, ಉಪವಾಸ, ಹೋಮ ಮತ್ತು ದಾನ ಇವು ಪುಣ್ಯಕಾಲದಲ್ಲಿ ವಿಧ್ಯುಕ್ತವಾಗಿ ನಡೆಸಬೇಕಾದ ಕಾರ್ಯಗಳು.
ಮಕರ ಸಂಕ್ರಾಂತಿ ಪ್ರಸಿದ್ಧವಾಗಿರುವ ಸುಗ್ಗಿಯ ಕಾಲದ ಹಬ್ಬ. ಇದನ್ನು ‘ಪೊಂಗಲ್’ ಎಂದು ಕರೆಯಲಾಗುತ್ತದೆ. ಪೊಂಗಲ್ ಎಂದರೆ ಅಕ್ಕಿ, ತುಪ್ಪ, ಹಾಲು, ಸಕ್ಕರೆ ಅಥವಾ ಬೆಲ್ಲಗಳಿಂದ ಮಾಡಿದ ಸಿಹಿ ತಿಸಿಸು. ಸುಗ್ಗಿಯ ಉತ್ಪನ್ನಗಳಿಂದ ಮಾಡಿದ ಇದನ್ನು ಸೂರ್ಯದೇವನಿಗೆ ನೈವೇದ್ಯಮಾಡಲಾಗುವುದು.
ಎಳ್ಳು -ಬೆಲ್ಲ ಸಕ್ಕರೆ ಅಚ್ಚುಗಳನ್ನು ನೆರೆಹೊರೆಯವರಿಗೆ, ಬಂಧುಮಿತ್ರರಿಗೆ ಹಂಚುವ ಸಾಮಾಜಿಕ ಸಂಪ್ರದಾಯ ಈ ಸಂಕ್ರಾಂತಿಯ ವಿಶೇಷ.
ಸೂರ್ಯನು ಒಂದು ರಾಶಿಯಿಂದ ಮತ್ತೊಂದು ರಾಶಿಯನ್ನು ಪ್ರವೇಶಿಸುವ ಸಂಧಿಕಾಲಕ್ಕೆ ‘ಸಂಕ್ರಾಂತಿ’ ಅಥವಾ ‘ಸಂಕ್ರಮಣ’ ಎಂದು ಹೆಸರು ಸೌರಮಾನದ ಪ್ರಕಾರ ಸೂರ್ಯನು ಮೇಷಾದಿ ಹನ್ನೆರಡು ರಾಶಿಗಳನ್ನು ಪ್ರವೇಶಿಸುವಾಗಲೂ ಸಂಕ್ರಾಂತಿ ಬರುತ್ತದೆ. ಆದರೆ ಅವುಗಳಲ್ಲಿ ಕರ್ಕಾಟಕ ಸಂಕ್ರಾಂತಿ ಹಾಗೂ ಮಕರ ಸಂಕ್ರಾಂತಿಗಳು ದಕ್ಷಿಣಾಯನ, ಉತ್ತರಾಯಣಗಳ ಪ್ರಾರಂಭದ ದಿನಗಳಾದ್ದರಿಂದ ವಿಶೇಷ ಮಹತ್ವ ಉಳ್ಳವುಗಳಾಗಿವೆ. ಸಂಕ್ರಾಂತಿ ಒಂದು ವಿಧದಲ್ಲಿ ಸೂರ್ಯಾರಾಧನೆ. ‘ಸೂರ್ಯ ಆತ್ಮಾ ಜಗತಃ ತಸ್ಥುಷಶ್ಚ’ ಸೂರ್ಯದೇವ ವಿಶ್ವದ ಆತ್ಮ; ಜಗತ್ತಿನ ಕಣ್ಣು; ಮಳೆ ಬೀಳಲು, ಬೆಳೆ-ಬೆಳೆಯಲು, ಇಳೆ ಬೆಳಗಲು ಸೂರ್ಯನೇ ಕಾರಣ ಆ ಸವಿತೃ ದೇವನ ದಿವ್ಯ ತೇಜಸ್ಸು ನಮಗೆ ಸಿದ್ಧಿ ಬುದ್ಧಿ ಸಮೃದ್ಧಿಗಳನ್ನು ನೀಡಬಲ್ಲದು.
ಈ ಸಂಕ್ರಾಂತಿಯನ್ನು ಹಗಲು ಜಾಸ್ತಿಯಾಗಿ ಕತ್ತಲು ಕಡಿಮೆಯಾಗಿ ದೇವತೆಗಳಿಗೆ ಹಗಲು, ರಾಕ್ಷಸರಿಗೆ ರಾತ್ರಿ ಪ್ರಾರಂಭವೆಂದು ಪುರಾಣದಲ್ಲಿದೆ. ದಕ್ಷಿಣಾಯಣದಲ್ಲಿ ಮುಚ್ಚಿದ ಸ್ವರ್ಗದ ಬಾಗಿಲು ಈ ಉತ್ತರಾಯಣದಲ್ಲಿ ತೆರೆಯುತ್ತದೆ. ಅದಕ್ಕಾಗಿಯೇ ಮಹಾಭಾರತದ ಭೀಷ್ಮ ದೇಹ ತ್ಯಜಿಸಲು ಉತ್ತರಾಯಣಕಾಲದವರೆಗೂ ಶರ ಶಯ್ಯೆಯಲ್ಲಿ ಹರಿಸ್ಮರಣೆ ಮಾಡುತ್ತಾ ಕಾದಿದ್ದರು. ಉತ್ತರಾಯಣ ದೇವತೆಗಳ ಕಾಲ, ದಕ್ಷಿಣಾಯಣ ಪಿತೃಗಳ ಕಾಲವಾಗಿರುತ್ತದೆ. ಉತ್ತರಾಯಣ ಕಾಲವು ಯಜ್ಞಯಾಗಾದಿಗಳಿಗೆ ಸಮಸ್ತ ದೇವತಾ ಕಾರ್ಯ ಶುಭಕಾರ್ಯಗಳಿಗೆ ಶ್ರೇಷ್ಠ ಕಾಲವಾಗಿರುತ್ತದೆ.
ಈ ದಿನ ಶ್ರೀರಾಮ ರಾವಣನನ್ನು ಸಂಹರಿಸಿ ಸೀತೆಯನ್ನು ತಂದ ದಿನವೆಂದು ಹೇಳುತ್ತಾರೆ. ಅಲ್ಲದೆ ಸ್ವರ್ಗಸ್ಥರಾದ ಪಿತೃಗಳು ಅದೃಶರಾಗಿ ಈ ದಿನ ತಮ್ಮ-ತಮ್ಮ ಮನೆಯಂಗಳಕ್ಕೆ ಬರುತ್ತಾರೆಂದು ಹೇಳಲಾಗುತ್ತದೆ.
ಈ ಹಬ್ಬಕ್ಕೂ ಎಳ್ಳಿಗೂ ನಿಕಟ ಸಂಬಂಧವಿದೆ. ಸಂಕ್ರಾಂತಿ ಹಬ್ಬದಂದು ಎಳ್ಳು ಬೆಲ್ಲ ಹಾಕಿ ಮಾಡಿದ ಎಳ್ಳು ನೀರು ಅಪ್ಯಾಯಮಾನವಾಗಿರುತ್ತದೆ. ಶೀತ-ವಾತ ಜನ್ಯವಾದ ಜಡ್ಡು ಅಲಸ್ಯಗಳನ್ನು ದೂರ ಮಾಡುವ ಸ್ನೇಹ ದ್ರವ್ಯಗಳ ಹಂಚಿಕೆ, ಸೇವೆನೆ, ದಾನ-ಧರ್ಮ ಈ ಹಬ್ಬದ ವೈಶಿಷ್ಟ್ಯ.
ಎಳ್ಳು-ಬೆಲ್ಲ ಹಂಚುವುದು, ಮನಸ್ಸಿನ ಕಹಿ ಭಾವನೆ ಮರೆತು ಸಿಹಿ ಭಾವ ತುಂಬಿ ಅಮೃತ ಪುತ್ರರಾಗೋಣ ಎಂಬುದರ ದ್ಯೋತಕವಾಗಿದೆ.
ಕರ್ನಾಟಕದಲ್ಲಿ ಸಂಕ್ರಾಂತಿಗೆ ಸಂಬಂಧಪಟ್ಟ ಆಚರಣೆಗಳಲ್ಲಿ ಮುಖ್ಯವಾಗಿ ಕಂಡುಬರುವುದು “ಎಳ್ಳು ಬೆಲ್ಲ”. ಮನೆಯಲ್ಲಿ ಎಳ್ಳು ಬೆಲ್ಲವನ್ನು ತಯಾರಿಸಿ ಸುತ್ತಲಿನ ಮನೆಗಳಿಗೆ “ಎಳ್ಳುಹಂಚುವುದು” ಸಂಕ್ರಾಂತಿಯ ಸಂಪ್ರದಾಯ. ಎಳ್ಳಿನ ಜೊತೆಗೆ ಸಕ್ಕರೆ ಅಚ್ಚುಗಳು, ಹಣ್ಣು ಮತ್ತು ಕಬ್ಬಿನ ತುಂಡುಗಳನ್ನು ಸಹ ಬೀರುವುದುಂಟು.ಸಣ್ಣ ಸಣ್ಣ ಚೂರುಗಳಾಗಿ ಕತ್ತರಿಸಿದ ಬೆಲ್ಲ, ಒಣ ]]ಕೊಬ್ಬರಿ]], ಹುರಿಗಡಲೆ, ಸಿಪ್ಪೆ ತೆಗೆದ ಕಡಲೇಕಾಯಿ ಬೀಜ ಹಾಗೂ ಹುರಿದ ಬಿಳಿ ಎಳ್ಳನ್ನು ಸೇರಿಸಿ “ಎಳ್ಳು ಬೆಲ್ಲ” ತಯಾರಿಸಲಾಗುತ್ತದೆ.
ಕರ್ನಾಟಕದ ರೈತರಿಗೆ ಸುಗ್ಗಿ (ಸುಗ್ಗಿ) ಅಥವಾ ಸುಗ್ಗಿಯ ಹಬ್ಬ. ಈ ಮಂಗಳಕರ ದಿನದಂದು, ಯುವ ಹೆಣ್ಣುಮಕ್ಕಳು (ಮಕ್ಕಳು ಮತ್ತು ಹದಿಹರೆಯದವರು) ಹೊಸ ಬಟ್ಟೆಗಳನ್ನು ಧರಿಸಿ ಒಂದು ತಟ್ಟೆಯಲ್ಲಿ ಎಳ್ಳುಬೆಲ್ಲದೊಂದಿಗೆ ಹತ್ತಿರದ ಜನರನ್ನು ಮತ್ತು ಸಂಬಂಧಿಗಳನ್ನು ಭೇಟಿಯಾಗಿ ಎಳ್ಳುಬೆಲ್ಲವನ್ನು ವಿನಿಮಯ ಮಾಡಿಕೊಳ್ಳುತ್ತಾರೆ. “ಎಳ್ಳು ಬೆಲ್ಲ ತಿಂದು ಒಳ್ಳೆಯ ಮಾತಾಡೋಣ” ಎಂದು ಹೇಳಿಕೊಳ್ಳುತ್ತಾರೆ.
ವೈಜ್ಞಾನಿಕ ರೀತಿಯಲ್ಲಿ ನೋಡಿದಾಗ ಸಂಕ್ರಾಂತಿಯ ಸಮಯದಲ್ಲಿ ಚಳಿ ಹೆಚ್ಚು ಇರುತ್ತದೆ. ಎಳ್ಳು ಬೇವು ಬೆಲ್ಲ ಸೇವನೆಯಿಂದ ದೇಹದ ಉಷ್ಣತೆ ಹೆಚ್ಚು ಆಗುತ್ತದೆ ಹಾಗೂ ಚರ್ಮದ ಕಾಂತಿಯೂ ಹೆಚ್ಚುತ್ತದೆ. ಈ ಹಬ್ಬವು ಅತ್ಯಂತ ಪ್ರಾಚೀನ ಕಾಲದಿಂದಲೂ ಆಚರಣೆಗೆ ಬಂದಿದೆ.ಮಕರ ಸಂಕ್ರಮಣದಂದು ಆದಿತ್ಯ ಹೃದಯ ಸ್ತ್ರೋತ್ರದ ಪಾರಾಯಣ ಮಾಡುತ್ತಾರೆ ಅಂದು ಸೂರ್ಯ ನಾರಾಯಣನನ್ನು* ಅರ್ಚಿಸುವುದರ ಮೂಲಕ ಆಯುಷ್ಯ, ಆರೋಗ್ಯ, ಸಂಪತನ್ನು ಪಡೆಯಬಹುದು.ಎನ್ನುವುದು ಉದ್ದೇಶ.
ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ
ನಂ:- 9686268564.
ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಶಾಸ್ತ್ರ ದೃಷ್ಟಿಯಲ್ಲಿ ಸಂಕ್ರಾಂತಿ
ನಿರ್ಣಯಸಿಂಧುವಿನಲ್ಲಿ ಈ ಹಬ್ಬದ ವಿಚಾರವಾಗಿ ಹೀಗೆ ಹೇಳಿದೆ. ಸಂಕ್ರಾಂತಿಯಂದು ಕಪ್ಪು ಎಳ್ಳಿನೊಂದಿಗೆ ಸ್ನಾನ ಮಾಡಿ, ಬ್ರಾಹ್ಮಣರಿಗೆ ಎಳ್ಳು ದಾನ ಕೊಡಬೇಕು. ದೇವಾಲಯಗಳಲ್ಲಿ ಎಳ್ಳೆಣ್ಣೆಯ ದೀಪ ಬೆಳಗಬೇಕು.
ಧರ್ಮ ಸಿಂಧುವಿನಲ್ಲಿ ಹೀಗೆ ಹೇಳಿದೆ. ಉತ್ತರಾಯಣದ ಪುಣ್ಯ ಕಾಲದಂದು ನಾವು ಮಾಡಿದ ದಾನ ಧರ್ಮಗಳು ಜನ್ಮ ಜನ್ಮದಲ್ಲೂ ಸದಾ ನಮಗೆ ಸಿಗುವಂತೆ ಸೂರ್ಯನು ಅನುಗ್ರಹಿಸುತ್ತಾನೆ. ಈ ಶುಭದಿನ ತಿಲ ದಾನ, ತಿಲ ಹೋಮ, ತಿಲ ಭಕ್ಷ್ಯಗಳಿಗೆ ವಿಶೇಷ ಪ್ರಾಶಸ್ತ್ಯವಿದೆ.