ಬೆಂಗಳೂರು: ಗಣರಾಜ್ಯೋತ್ಸವ ಪರೇಡ್ ನಲ್ಲಿ ರಾಜ್ಯದ ಸ್ತಬ್ಧ ಚಿತ್ರಕ್ಕೆ ಅವಕಾಶ ನೀಡದೇ ಇರೋದರ ಬಗ್ಗೆ ಕನ್ನಡಿಗರ ಆಕ್ರೋಶ ಮುಗಿಲೆದ್ದಿದೆ. ಈ ನಡುವೆ ಸಿಎಂ ಸಿದ್ಧರಾಮಯ್ಯ ಕೇಂದ್ರ ರಕ್ಷಣಾ ಸಚಿವರಿಗೆ ಪತ್ರ ಬರೆದಿದ್ದು, ಕರ್ನಾಟಕದ ಸ್ತಬ್ಧ ಚಿತ್ರಕ್ಕೆ ಅವಕಾಶ ನೀಡುವಂತೆ ಕೋರಿದ್ದಾರೆ.
ಈ ಕುರಿತಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದಿದ್ದಾರೆ. ಸಿಎಂ ಬರೆದಿರುವಂತ ಪತ್ರದಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ನಡೆಯುವ ಪರೇಡ್ ನಲ್ಲಿ ಕರ್ನಾಟಕ ರಾಜ್ಯದ ಸ್ತಬ್ಧ ಚಿತ್ರವನ್ನು ಅಳವಡಿಸದೇ ಇರೋ ಕ್ರಮವನ್ನು ತೀವ್ರವಾಗಿ ಖಂಡಿಸಿದ್ದಾರೆ.
ಇನ್ನೂ ರಾಜ್ಯದ ಏಳು ಕೋಟಿ ಕನ್ನಡಿಗರ ಭಾವನಾತ್ಮಕ ವಿಷಯವು ಸ್ತಬ್ಧ ಚಿತ್ರ ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗವಹಿಸೋದಾಗಿದೆ. ಕರ್ನಾಟಕದ ಸ್ತಬ್ಧ ಚಿತ್ರವನ್ನು ಪರೇಡ್ ನಲ್ಲಿ ನಿರಾಕರಿಸುವುದು ಕೇವ ಪ್ರಮಾದವಲ್ಲ, ಇದು ನಮ್ಮ ರಾಜ್ಯದ ಹೆಮ್ಮಗೆ ಧಕ್ಕೆಯಾದಂತೆ ಆಗಿದೆ. ನಮ್ಮ ಸಾಧನೆಗಳು ರಾಷ್ಟ್ರೀಯ ವೇದಿಕೆಗೆ ಅರ್ಹವಾಗಿ ಎಂಬುದಾಗಿ ಪತ್ರದಲ್ಲಿ ವಿವರಿಸಿದ್ದಾರೆ.
ಈ ಬಗ್ಗೆ ಎಕ್ಸ್ ಮಾಡಿರುವಂತ ಸಿಎಂ ಸಿದ್ಧರಾಮಯ್ಯ, ಗಣರಾಜ್ಯೋತ್ಸವದ ಮೆರವಣಿಗೆಯಲ್ಲಿ ಕರ್ನಾಟಕದ ಸ್ತಬ್ಧಚಿತ್ರವನ್ನು ಸೇರಿಸುವಂತೆ ಕೋರಿ ನಾನು ರಕ್ಷಣಾ ಸಚಿವ ಶ್ರೀ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದಿದ್ದೇನೆ ಎಂದಿದ್ದಾರೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಬರೆದ ಪತ್ರದಲ್ಲಿ ನಾನು 7 ಕೋಟಿ ಕನ್ನಡಿಗರ ಆಳವಾದ ಭಾವನೆಯನ್ನು ವ್ಯಕ್ತಪಡಿಸಿದ್ದೇನೆ. ಗಣರಾಜ್ಯೋತ್ಸವದ ಮೆರವಣಿಗೆಯಲ್ಲಿ ಕರ್ನಾಟಕದ ಸ್ತಬ್ಧಚಿತ್ರವನ್ನು ನಿರಾಕರಿಸುವುದು ಕೇವಲ ಮೇಲ್ವಿಚಾರಣೆಯಲ್ಲ. ಇದು ನಮ್ಮ ರಾಜ್ಯದ ಹೆಮ್ಮೆಗೆ ಹೊಡೆತ. ನಮ್ಮ ಸಾಧನೆಗಳು ರಾಷ್ಟ್ರೀಯ ವೇದಿಕೆಗೆ ಅರ್ಹವಾಗಿವೆ ಎಂದು ಹೇಳಿದ್ದಾರೆ.
I have written to Defence Minister Shri @rajnathsingh, requesting the inclusion of Karnataka's tableau in the Republic Day parade.
In my letter to Defence Minister Shri Rajnath Singh, I've expressed the deep sentiment of 7 crore Kannadigas. Denying Karnataka's tableau in the… pic.twitter.com/ozAd2OfiqK
— Siddaramaiah (@siddaramaiah) January 11, 2024
‘ಯುವನಿಧಿ ಯೋಜನೆ’ ನಗದು ವರ್ಗಾವಣೆ ಕಾರ್ಯಕ್ರಮಕ್ಕೆ ‘ಶಿವಮೊಗ್ಗ ಸಜ್ಜು’
BREAKING : ರಾಮ ಮಂದಿರ ಉದ್ಘಾಟನೆ ವೇಳೆ ಉಗ್ರ ದಾಳಿಗೆ ಸ್ಕೆಚ್ : ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ