ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ( Karnataka Government Employees ) ಬಹು ದಿನಗಳ ಬೇಡಿಕೆಯಲ್ಲಿ ಹೊಸ ಪಿಂಚಣಿ ಯೋಜನೆ ( NPS ) ರದ್ದುಗೊಳಿಸಿ, ಹಳೇ ಪಿಂಚಣಿ ಯೋಜನೆ(OPS) ಜಾರಿಗೊಳಿಸುವುದು ಬಹುಮುಖ್ಯ ಬೇಡಿಕೆಯಾಗಿದೆ. ಈ ಬೇಡಿಕೆ ಈಡೇರಿಕೆಗೆ ಸಿಎಂ ಸಿದ್ಧರಾಮಯ್ಯ ( CM Siddaramaiah ) ಅನುಮೋದಿಸಿದ್ದಾರೆ. ಈ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ನೀಡಿದ್ದಾರೆ.
ಈ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಕ್ಷರಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 01-04-2006ಕ್ಕಿಂತ ಪೂರ್ವದಲ್ಲಿ ರಾಜ್ಯ ಸರ್ಕಾರದ ಅಧಿಸೂಚನೆಯನ್ವಯ ನೇಮಕಾತಿ ಹೊಂದಿರುವ ನೌಕರರು ಹಳೇ ಪಿಂಚಣಿ ಯೋಜನೆಗೆ ( Old Pension Scheme -OPS ) ಪರಿಗಣಿಸಲು ಸಿಎಂ ಸಿದ್ಧರಾಮಯ್ಯ ಅನುಮೋದನೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
2006ರ ಪೂರ್ವದಲ್ಲಿ ನೇಮಕಾತಿ ಅಧಿಸೂಚನೆಗೆ ಒಳಪಟ್ಟ ಹೊಸ ಪಿಂಚಣಿ ಯೋಜನೆ ( New Pension Scheme – NPS ) ನೌಕರರನ್ನು ಹಳೇ ಪಿಂಚಣಿ ವ್ಯಾಪ್ತಿಗೆ ಪರಿಗಣಿಸಲು ಕೋರಲಾಗಿದ್ದಂತ ಮನವಿಗೆ ಸಕಾರಾತ್ಮಕವಾಗಿ ಸಿಎಂ ಸಿದ್ಧರಾಮಯ್ಯ ಸ್ಪಂದಿಸಿದ್ದಾರೆ. ಸಿಎಂ ಅನುಮೋದನೆ ಪಡೆದು ಶೀಘ್ರದಲ್ಲೇ ಆದೇಶ ಹೊರಡಿಸೋದಾಗಿ ತಿಳಿಸಿದ್ದಾರೆ ಎಂದಿದ್ದಾರೆ.
ಈ ಯೋಜನೆಯಿಂದ ರಾಜ್ಯದ 11,366 ಬಾದಿತ NPS ಸರ್ಕಾರಿ ನೌಕರರು OPS ಸೌಲಭ್ಯ ಪಡೆಯಲಿದ್ದಾರೆ. ಇದರಿಂದ ಬಹಳ ವರ್ಷಗಳ ಬೇಡಿಕೆ ಈಡೇರಿದಂತೆ ಆಗಲಿದೆ. ಬಹು ದಿನಗಳ ಸಾವಿರಾರು ನೌಕರರ ಬೇಡಿಕೆ ಈಡೇಸಿದಂತ ಸಿಎಂ ಸಿದ್ಧರಾಮಯ್ಯ ಅವರಿಗೆ ಸರ್ಕಾರಿ ನೌಕರರ ಸಂಘದ ಪರವಾಗಿ ಅಭಿನಂದನೆಗಳು, ಧನ್ಯವಾದಗಳನ್ನು ತಿಳಿಸಿದ್ದಾರೆ.