ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಸಿದ್ದರಾಮಯ್ಯ ಅವರು ಸಿಹಿಸುದ್ದಿ ನೀಡಿದ್ದು,01-04-2006ಕ್ಕಿಂತ ಪೂರ್ವದಲ್ಲಿ ರಾಜ್ಯ ಸರ್ಕಾರದ ಅಧಿಸೂಚನೆಯನ್ವಯ ನೇಮಕಾತಿ ಹೊಂದಿರುವ ನೌಕರರು ಹಳೆ ಪಿಂಚಣಿ ಯೋಜನೆಗೆ ಪರಿಗಣಿಸಲು ಸಿಎಂ ಸಿದ್ದರಾಮಯ್ಯ ಅನುಮೋದನೆ ನೀಡಿದ್ದಾರೆ ಅಂತ ತಿಳಿದು ಬಂದಿದೆ.
ಈ ಬಗ್ಗೆ ಮಾಹಿತಿ ನೀಡಿರುವ ರಾಜ್ಯ ಸರ್ಕಾರಿ ನೌಕರರ ಸಂಘವು ಮಾಧ್ಯಮ ಹೇಳಿಕೆ ನೀಡಿರುವ ಪ್ರಕಾರ ಸಂಘದ ನಿರಂತರ ಪ್ರಯತ್ನದ ಫಲವಾಗಿ ಹಾಗೂ ದಿನಾಂಕ:10-01-2024ರಂದು ಆರ್ಥಿಕ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಶ್ರೀ ಎಲ್.ಕೆ. ಅತೀಕ್, ಭಾ.ಆ.ಸೇ. ರವರನ್ನು ಭೇಟಿ ಮಾಡಿ 2006ರ ಪೂರ್ವದಲ್ಲಿ ನೇಮಕಾತಿ ಅಧಿಸೂಚನೆಗೆ ಒಳಪಟ್ಟ NPS ನೌಕರರನ್ನು OPS ವ್ಯಾಪ್ತಿಗೆ ಪರಿಗಣಿಸಲು ಕೋರಲಾಗಿ ಮಾನ್ಯರು ಸಕಾರಾತ್ಮಕವಾಗಿ ಸ್ಪಂದಿಸಿ, ಮಾನ್ಯ ಮುಖ್ಯಮಂತ್ರಿಗಳ ಅನುಮೋದನೆ ಪಡೆದು ಶೀಘ್ರದಲ್ಲೇ ಆದೇಶ ಹೊರಡಿಸುವುದಾಗಿ ತಿಳಿಸಿದ್ದರು.
ಅದರಂತೆ ದಿ.11-1-2024 ರಂದು ರಾಜ್ಯದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಬಹುದಿನಗಳ ಬೇಡಿಕೆಯಾದ ದಿನಾಂಕ:31-03-2006 ಕ್ಕಿಂತ ಪೂರ್ವದಲ್ಲಿ ರಾಜ್ಯ ಸರ್ಕಾರದ ಅಧಿಸೂಚನೆಯನ್ವಯ ನೇಮಕಾತಿ ಹೊಂದಿ ದಿನಾಂಕ:01-04-2006ರ ನಂತರ ಕೆಲಸಕ್ಕೆ ಹಾಜರಾಗಿ ಪ್ರಸ್ತುತ ಎನ್.ಪಿ.ಎಸ್ ಯೋಜನೆ ಅಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಸರ್ಕಾರಿ ನೌಕರರಿಗೆ ಓ.ಪಿ.ಎಸ್ ನೌಕರರೆಂದು ಪರಿಗಣಿಸುವುದಕ್ಕೆ ಸಂಭಂದಿಸಿದ ಕಡತ ಸಂಖ್ಯೆ:ಎಫ್‌ಡಿ/99/ಪಿಇಎನ್/2023 ರ ಕಡತದಲ್ಲಿ ಅನುಮೋದನೆ ನೀಡಿರುತ್ತಾರೆ. ಹಾಗೂ ಕಡತ ಆರ್ಥಿಕ ಇಲಾಖೆಯಲ್ಲಿದ್ದು, ಶೀಘ್ರದಲ್ಲಿಯೇ ಆದೇಶ ಹೊರಬೀಳಲಿದೆ ಎಂದು ತಿಳಿಸಿದೆ.
ಇದೇ ವೇಳೆ ಈ ಯೋಜನೆಯಿಂದ ರಾಜ್ಯದ 11,366 ಬಾದಿತ NPS ಸರ್ಕಾರಿ ನೌಕರರು OPS ಸೌಲಭ್ಯ ಪಡೆಯಲಿದ್ದಾರೆ. ಇದರಿಂದ ಬಹಳ ವರ್ಷಗಳ ಕನಸು ಈಡೇರಿದ್ದು, ಅವರಿಗೆ ಹಾಗೂ ಅವಲಂಬಿತರಿಗೆ ಇದರಿಂದ ಅನುಕೂಲವಾಗಲಿದೆ.
ಬಹು ದಿನಗಳ ಸಾವಿರಾರು ನೌಕರರ ಬೇಡಿಕೆ ಈಡೇರಿಸಿದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರಿಗೆ ಸಮಸ್ತ ರಾಜ್ಯದ 6.00 ಲಕ್ಷ ಸರ್ಕಾರಿ ನೌಕರರ ಹಾಗೂ ಸಂಘದ ಪರವಾಗಿ ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸುತ್ತೇವೆ ಎಂದು ತಿಳಿಸಿದ್ದಾರೆ.