ಮಂಡ್ಯ: ಜಿಲ್ಲೆಯಲ್ಲಿ ನಿಷೇಧಾಜ್ಞೆಯ ನಡುವೆಯೂ ಬೈಕ್ Rally ನಡೆಸಿದಂತ 17 ಬಿಜೆಪಿ ಕಾರ್ಯಕರ್ತರಿಗೆ ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ. ಈ ಮೂಲಕ ಬಿಜೆಪಿ ಕಾರ್ಯಕರ್ತರಿಗೆ ಕೋರ್ಟ್ ಬಿಗ್ ಶಾಕ್ ನೀಡಿದೆ.
2017ರಲ್ಲಿ ನಿಷೇಧಾಜ್ಞೆಯನ್ನು ಉಲ್ಲಂಘಿಸಿ ಬಿಜೆಪಿಯಿಂದ ಬೈಕ್ Rally ನಡೆಸಲಾಗಿತ್ತು. ಈ ಸಂಬಂಧ ಪಾಂಡವಪುರ ಜೆಎಂಎಫ್ ಸಿ ಕೋರ್ಟ್ 17 ಮಂದಿ ಬಿಜೆಪಿ ಕಾರ್ಯಕರ್ತರಿಗೆ ಸಮನ್ಸ್ ಜಾರಿಗೊಳಿಸಿದೆ.
ಅಂದಹಾಗೇ ನಿಷೇಧಾಜ್ಞೆ ಉಲ್ಲಂಘಿಸಿ ಬೈಕ್ Rally ನಡೆಸಿದ್ದಂತ ಬಿಜೆಪಿ ಕಾರ್ಯಕರ್ತರು ಎಸ್ ಡಿ ಪಿಐ, ಪಿಎಫ್ಐ ಸಂಘಟನೆಗಳ ವಿರುದ್ಧ ಪ್ರತಿಭಟನೆಗೆ ಮಂಗಳೂರಿಗೆ ತೆರಳಿದ್ದರು. ಪಾಂಡವಪುರದಿಂದ ಮಂಗಳೂರಿಗೆ ಬೈಕ್ ನಲ್ಲಿ Rally ಮೂಲಕ ತೆರಳುತ್ತಿದ್ದರು. ಈ ವೇಳೆ ಪಾಂಡವಪುರದಲ್ಲಿ ಪ್ರತಿಭಟನಾಕಾರರನ್ನು ತಡೆದಿದ್ದಂತ ಪೊಲೀಸರು, ಅವರ ವಿರುದ್ಧ ಎಫ್ಐಆರ್ ದಾಖಲಿಸಿ, ನಂತರ ಚಾರ್ಜ್ ಶೀಟ್ ಸಲ್ಲಿಸಿದ್ದರು. ಈ ಹಿನ್ನಲೆಯಲ್ಲಿ 17 ಬಿಜೆಪಿ ಕಾರ್ಯಕರ್ತರಿಗೆ ಸಮನ್ಸ್ ಜಾರಿಗೊಳಿಸಲಾಗಿದೆ.
ರಾಮ ಮಂದಿರ ‘ಪ್ರಾಣ’ ಪ್ರತಿಷ್ಠಾಪನೆ: 11 ದಿನಗಳ ವಿಶೇಷ ಸಂದೇಶ ಬಿಡುಗಡೆ ಮಾಡಿದ ‘ಪ್ರಧಾನಿ ಮೋದಿ’
BIG NEWS: ಲಷ್ಕರ್-ಎ-ತೊಯ್ಬಾ ಸಂಸ್ಥಾಪಕ, ಹಫೀಜ್ ಸಯೀದ್‌ನ ಸಹಾಯಕನ ಸಾವನ್ನು ದೃಢಪಡಿಸಿದ UNSC