ಬೆಂಗಳೂರು: ಲೋಕಸಭಾ ಸದನದಲ್ಲಿ ಭದ್ರತಾ ವೈಫಲ್ಯದ ಬಳಿಕ ಮಾಧ್ಯಮಗಳಿಂದ ದೂರವೇ ಉಳಿದಿದ್ದಂತ ಸಂಸದ ಪ್ರತಾಪ್ ಸಿಂಹ ಅವರು, ಇಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರನ್ನು ಭೇಟಿಯಾಗಿದ್ದು ತೀವ್ರ ಕುತೂಹಲ ಮೂಡಿಸಿದೆ.
ಇಂದು ಜೆಪಿ ನಗರದಲ್ಲಿರುವಂತ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರ ನಿವಾಸಕ್ಕೆ ತೆರಳಿದಂತ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ, ಹೆಚ್ ಡಿಕೆ ಭೇಟಿಯಾಗಿ ಕೆಲ ಕಾಲ ಚರ್ಚೆ ನಡೆಸಿದರು.
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆ ಸಂಬಂಧ ಹಲವು ವಿಷಯಗಳನ್ನು ಅವರೊಂದಿಗೆ ಚರ್ಚಿಸಿದ್ದಾರೆ ಎನ್ನಲಾಗಿದೆ. ಅಲ್ಲದೇ ಅವರ ಸಹೋದರನ ವಿರುದ್ಧದ ಅರಣ್ಯಾಧಿಕಾರಿಗಳ ಕ್ರಮದ ಬಗ್ಗೆಯೂ ಚರ್ಚಿಸಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಈ ಬಗ್ಗೆ ಮತ್ತಷ್ಟು ಮಾಹಿತಿ ತಿಳಿಯಬೇಕಿದೆ.
ಹಾಸನದಲ್ಲಿ ಬರ್ತ್ ಡೇ ಬಳಿಕ ‘ಜಾಲಿ ರೈಡ್’ ವೇಳೆ ಭೀಕರ ಅಪಘಾತ: ಸ್ಥಳದಲ್ಲೇ ‘ಇಬ್ಬರು’ ಸಾವು
ರಾಮ ಮಂದಿರ ‘ಪ್ರಾಣ’ ಪ್ರತಿಷ್ಠಾಪನೆ: 11 ದಿನಗಳ ವಿಶೇಷ ಸಂದೇಶ ಬಿಡುಗಡೆ ಮಾಡಿದ ‘ಪ್ರಧಾನಿ ಮೋದಿ’