ಬೆಂಗಳೂರು: ಕೆಳ ದಿನಗಳ ಹಿಂದಷ್ಟೇ ಬೆಂಗಳೂರಿನ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಬಾಂಬ್ ಬೆದರಿಕೆಯನ್ನು ಹಾಕಲಾಗಿತ್ತು. ಕೂಡಲೇ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ ಇದೊಂದು ಹುಸಿ ಬಾಂಬ್ ಬೆದರಿಕೆ ಎಂಬುದಾಗಿ ತಿಳಿದು ಬಂದಿತ್ತು. ಇಂತಹ ಪ್ರಕರಣವನ್ನು ರಾಜ್ಯ ಸರ್ಕಾರ ಸಿಸಿಬಿ ತನಿಖೆಗೆ ವಹಿಸಿ ಆದೇಶಿಸಿದೆ.
ಜನವರಿ.6ರಂದು ಬೆಂಗಳೂರಿನ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇ-ಮೇಲ್ ಮುಖಾಂತರ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂದೇಶ ಕಳುಹಿಸಿದ ಕಿಡಿಗೇಡಿಗಳ ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದರು.
ಇಮೇಲ್ ಬೆದರಿಕೆ ಸಂದೇಶ ಕಳಿಸಿದ್ದ ಕಿಡಿಗೇಡಿಗಳ ವಿರುದ್ಧ ಎಫ್ ಐ ಆರ್ ದಾಖಲಿಸಿಕೊಂಡು ತನಿಖೆಯನ್ನು ಕೈಗೊಂಡಿದ್ದರು. ಈ ಪ್ರಕಣವನ್ನು ಪೊಲೀಸರು ತನಿಖೆ ನಡೆಸುತ್ತಿದ್ದರು. ಇಂತಹ ಹುಸಿ ಬಾಂಬ್ ಬೆದರಿಕೆ ಪ್ರಕರಣವನ್ನು ಈಗ ರಾಜ್ಯ ಸರ್ಕಾರ ಸಿಸಿಬಿ ತನಿಖೆಗೆ ವಹಿಸಿ ಆದೇಶಿಸಿದೆ.
ಏನಿದಿ ಪ್ರಕರಣ
ಜನವರಿ.6ರಂದು ಬೆಂಗಳೂರು ನಗರದಲ್ಲಿರುವಂತ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಯನ್ನು ಹಾಕಲಾಗಿದೆ. ಈ ಮೂಲಕ ಮತ್ತೊಮ್ಮೆ ರಾಜ್ಯ ರಾಜಧಾನಿ ಬೆಂಗಳೂರು ಬೆಚ್ಚಿ ಬೀಳಿವಂತೆ ಮಾಡಲಾಗಿತ್ತು.
ಈ ಹಿಂದೆ ಸಾಲು ಸಾಲು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿತ್ತು. ಆ ಪ್ರಕರಣದ ಬಗ್ಗೆ ಇನ್ನೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಬೆನ್ನಲ್ಲೇ ಬೆಂಗಳೂರಿನ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿತ್ತು.
ಬೆಂಗಳೂರಿನ ಹೃದಯ ಭಾಗದಲ್ಲಿರುವಂತ ವಿಶ್ವೇಶ್ವರಯ್ಯ ಮ್ಯೂಸಿಯಂ ಅನ್ನು ಬಾಂಬ್ ಇಟ್ಟು ಸ್ಪೋಟಿಸೋದಾಗಿ ಇ-ಮೇಲ್ ನಲ್ಲಿ ಬೆದರಿಕೆ ಹಾಕಲಾಗಿತ್ತು. ಈ ಬೆದರಿಕೆ ಇ-ಮೇಲ್ ಬಂದ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು, ಈ ಸಂಬಂಧ ಪೊಲೀಸರು ತನಿಖೆ ಕೈಗೊಂಡಿದ್ದರು.
BREAKING : ಹಾಸನದಲ್ಲಿ ಜಾಲಿ ರೈಡ್ ವೇಳೆ ಜಮೀನಿಗೆ ಉರುಳಿದ ಕಾರು : ಇಬ್ಬರು ಯುವಕರ ದಾರುಣ ಸಾವು
ಕಲಬುರ್ಗಿಯಲ್ಲಿ ‘KSRTC ಬಸ್-ಬೈಕ್’ ನಡುವೆ ಭೀಕರ ಅಪಘಾತ: ‘ಇಬ್ಬರು ಸವಾರ’ರು ಸ್ಥಳದಲ್ಲೇ ಸಾವು