ಬೆಂಗಳೂರು: ಸಾಲ ಪಾವತಿಸದೇ ಸಹಕಾರಿ ಬ್ಯಾಂಕ್ ಗೆ ವಂಚನೆ ಆರೋಪ ಪ್ರಕರಣವನ್ನು ರದ್ದುಗೊಳಿಸುವಂತೆ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರು ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಲಿಮಿಟೆಡ್ ಕಂಪನಿಗಾಗಿ ಅಪೆಕ್ಸ್ ಬ್ಯಾಂಕ್ ನಿಂದ 232 ಕೋಟಿ 88 ಲಕ್ಷ ಸಾಲ ಪಡೆದಿದ್ದರು. ಆದ್ರೇ ಅದನ್ನು ಮರು ಪಾವತಿಸಿರಲಿಲ್ಲ.
ಈ ಸಂಬಂಧ ಅಪೆಕ್ಸ್ ಬ್ಯಾಂಕ್ ದೂರಿನ ಹಿನ್ನಲೆಯಲ್ಲಿ ಅವರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಬ್ಯಾಂಕ್ ನ ಪರವಾಗಿ ಸಾಲಕ್ಕೆ ಗ್ಯಾರಂಟರ್ ಆಗಿದ್ದ ರಮೇಶ್ ಜಾರಕಿಹೊಳಿ ವಿರುದ್ಧ ಎಫ್ಐಆರ್ ದಾಖಲಾಗಿತ್ತು.
ಕಂಪನಿಯ ಹುದ್ದೆಗಳಿಗೆ ರಾಜೀನಾಮೆ ನೀಡಿ ಹೊಸಬರ ನೇಮಕವಾಗಿ ಎಲ್ ಸಿ ಎಲ್ ಟಿ ಯಲ್ಲಿ ವಾಚರಣೆ ಇರುವಾಗ ಕ್ರಿಮಿನಲ್ ಕೇಸ್ ದಾಖಲಾಗಿತ್ತು. ಈ ಕ್ರಿಮಿನಲ್ ಪ್ರಕರಣ ರದ್ದುಕೋರಿ ರಮೇಶ್ ಜಾರಕಿಹೊಳಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಹಾವೇರಿ ನೈತಿಕ ಪೊಲೀಸ್ ಗಿರಿ ತನಿಖೆಗೆ ವಿಶೇಷ ತಂಡ ರಚನೆಗೆ ಬಸವರಾಜ ಬೊಮ್ಮಾಯಿ ಆಗ್ರಹ
ನಮ್ಮ ಸರ್ಕಾರ ನುಡಿದಂತೆ ನಡೆದು ಇಡೀ ದೇಶಕ್ಕೆ ಮಾದರಿಯಾಗಿದೆ- ಡಿಸಿಎಂ ಡಿ.ಕೆ. ಶಿವಕುಮಾರ್