ಬೆಂಗಳೂರು: ರಾಜ್ಯದಲ್ಲಿ ಇಂದು 163 ಜನರಿಗೆ ಕೊರೋನಾ ಸೋಂಕು ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಅಲ್ಲದೇ ಸೋಂಕಿತರಾದಂತ 162 ಮಂದಿ ಗುಣಮುಖರಾಗಿದ್ದಾರೆ.
ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಕಳೆದ 24 ಗಂಟೆಯಲ್ಲಿ 6396 ಜನರನ್ನು ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ ಬೆಂಗಳೂರಲ್ಲಿ 50, ಬೆಂಗಳೂರು ಗ್ರಾಮಾಂತರ 08, ಹಾಸನ 10, ಮಂಡ್ಯ 8, ಮೈಸೂರು 27 ಸೇರಿದಂತೆ 163 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ವರದಿಯಿಂದ ದೃಢಪಟ್ಟಿದೆ ಎಂದು ತಿಳಿಸಿದೆ.
ಕಳೆದ 24 ಗಂಟೆಯಲ್ಲಿ ಸೋಂಕಿತರಾದಂತ 162 ಜನರು ಗುಣಮುಖರಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಸದ್ಯ 994 ಸಕ್ರೀಯ ಸೋಂಕಿತರು ಇರುವುದಾಗಿ ತಿಳಿಸಿದೆ.
ನಮ್ಮ ಸರ್ಕಾರ ನುಡಿದಂತೆ ನಡೆದು ಇಡೀ ದೇಶಕ್ಕೆ ಮಾದರಿಯಾಗಿದೆ- ಡಿಸಿಎಂ ಡಿ.ಕೆ. ಶಿವಕುಮಾರ್
BREAKING: ದೇಶದ ಅತಿ ಉದ್ದದ ‘ಸಮುದ್ರ ಸೇತುವೆ’ ಉದ್ಘಾಟಿಸಿದ ‘ಪ್ರಧಾನಿ ಮೋದಿ’ | Atal Setu inauguration