ಬೆಂಗಳೂರು: ರೈಲ್ವೆ ಪ್ರಯಾಣಿಕರ ಅನುಕೂಲಕ್ಕಾಗಿ ಡೆಮು ರೈಲುಗಳು ಮೆಮು ರೈಲುಗಳಾಗಿ ಪರಿವರ್ತನೆ ಮಾಡಲಾಗಿದೆ. ಅಲ್ಲದೇ ಕೆಲ ರೈಲುಗಳ ಸೇವೆಯಲ್ಲಿ ಬದಲಾವಣೆ ಮಾಡಲಾಗಿದೆ.
ಈ ಕುರಿತಂತೆ ನೈರುತ್ಯ ರೈಲ್ವೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ರೈಲು ಸಂಖ್ಯೆ 06511/06512 ಬಾಣಸವಾಡಿ-ತುಮಕೂರು-ಬಾಣಸವಾಡಿ ಕಾಯ್ದಿರಿಸದ ಡೆಮು ಎಕ್ಸ್ಪ್ರೆಸ್ ವಿಶೇಷ ಮತ್ತು ರೈಲು ಸಂಖ್ಯೆ 06513/06514 ತುಮಕೂರು-ಶಿವಮೊಗ್ಗ ಟೌನ್ ಕಾಯ್ದಿರಿಸದ ಡೆಮು ಎಕ್ಸ್ ಪ್ರೆಸ್ ವಿಶೇಷ ರೈಲುಗಳನ್ನು ಮೆಮು (ಮೇನ್ ಲೈನ್ ಎಲೆಕ್ಟ್ರಿಕ್ ಮಲ್ಟಿಪಲ್ ಯೂನಿಟ್) ರೈಲುಗಳಾಗಿ ಪರಿವರ್ತಿಸಲು ನಿರ್ಧರಿಸಲಾಗಿದೆ. ಈ ಪರಿವರ್ತನೆಯು ಜನವರಿ 15, 2024 ರಿಂದ ಜಾರಿಗೆ ಬರಲಿದೆ ಮತ್ತು ಈ ರೈಲುಗಳು ಮೆಮು ವಿಶೇಷ ಎಕ್ಸ್ ಪ್ರೆಸ್ ಎಂದು ಕಾರ್ಯನಿರ್ವಹಿ ಸಲಿವೆ ಎಂದಿದೆ.
ಈ ಮೆಮು ಎಕ್ಸ್ ಪ್ರೆಸ್ ವಿಶೇಷ ರೈಲುಗಳ ಪರಿಷ್ಕೃತ ಸಂಯೋಜನೆಯು 6 ಟ್ರೈಲರ್ ಕಾರುಗಳು (ಟಿಸಿ) ಮತ್ತು 2 ಮೋಟಾರು ಕಾರುಗಳು (ಎಂಸಿ) ಅನ್ನು ಒಳಗೊಂಡಿರುತ್ತದೆ, ಒಟ್ಟು 8 ಮೆಮು ಕಾರುಗಳು ಹೊಂದಿರುತ್ತವೆ.
ರೈಲುಗಳ ಸೇವೆಯಲ್ಲಿ ಬದಲಾವಣೆ
ಯಲವಿಗಿ, ಸವಣೂರು ಮತ್ತು ಕರಜಗಿ ನಿಲ್ದಾಣಗಳಲ್ಲಿ ಸುರಕ್ಷತಾ ಸಂಬಂಧಿತ ನಿರ್ವಹಣಾ ಕಾಮಗಾರಿ ನಡೆಯುತ್ತಿರುವ ಸಲುವಾಗಿ ಕೆಲವು ರೈಲುಗಳ ಸೇವೆಯಲ್ಲಿ ಬದಲಾವಣೆ ಮಾಡಲಾಗುತ್ತಿದೆ. ಅವುಗಳ ಮಾಹಿತಿ ಈ ಕೆಳಗಿನಂತಿವೆ:
1. ರೈಲು ಸಂಖ್ಯೆ 16214 ಎಸ್ಎಸ್ಎಸ್ ಹುಬ್ಬಳ್ಳಿ-ಅರಸೀಕೆರೆ ಎಕ್ಸ್ ಪ್ರೆಸ್ ರೈಲು ಜನವರಿ 16, 2024 ರಂದು ಹುಬ್ಬಳ್ಳಿ ನಿಲ್ದಾಣದಿಂದ 120 ನಿಮಿಷ ತಡವಾಗಿ ಹೊರಡಲಿದೆ.
2. ರೈಲು ಸಂಖ್ಯೆ 17348 ಚಿತ್ರದುರ್ಗ-ಎಸ್ಎಸ್ಎಸ್ ಹುಬ್ಬಳ್ಳಿ ಎಕ್ಸ್ ಪ್ರೆಸ್ ರೈಲು ಜನವರಿ 23 & 27, 2024 ರಂದು 60 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತಿದೆ.
BREAKING: ದೇಶದ ಅತಿ ಉದ್ದದ ‘ಸಮುದ್ರ ಸೇತುವೆ’ ಉದ್ಘಾಟಿಸಿದ ‘ಪ್ರಧಾನಿ ಮೋದಿ’ | Atal Setu inauguration
BIG UPDATE: ‘ತಡರಾತ್ರಿ ಪಾರ್ಟಿ’ ಕೇಸ್: ಪೊಲೀಸರ ಮುಂದೆ ವಿಚಾರಣೆ ಹಾಜರಾದ ‘ಸ್ಯಾಂಡಲ್ ವುಡ್ ಸೆಲೆಬ್ರೆಟೀಸ್’