ಬೆಂಗಳೂರು : ಕಳೆದ ಎರಡು ವರ್ಷದಿಂದ ಯುವತಿಯನ್ನು ಪ್ರೀತಿಸುತ್ತಿದ್ದ ಯುವಕನು ಯುವತಿಗೆ ಬೇರೊಬ್ಬರ ಜೊತೆಗೆ ಮದುವೆ ಆಗಿದ್ದರಿಂದ ಕೂಡಲೇ ಇದರಿಂದ ಮನನೊಂದ ಯುವಕನೊಬ್ಬ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸುಭಾಷ್ ನಗರದಲ್ಲಿ ನಡೆದಿದೆ.
ಮನೆಯಲ್ಲಿ ಯಾರು ಇಲ್ಲದ ವೇಳೆ ಫ್ಯಾನ್ ಗೆ ನೇಣು ಬಿಗಿದುಕೊಂಡು ಪ್ರವೀಣ್ (30) ಎನ್ನುವ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಕಳೆದ ಎರಡು ವರ್ಷಗಳಿಂದ ಪ್ರವೀಣ್ ಯುವತಿಯೋರ್ವಳನ್ನು ಪ್ರೀತಿಸುತ್ತಿದ್ದ ಎಂದು ಹೇಳಲಾಗುತ್ತಿದೆ.
ಪ್ರೀತಿಸುತ್ತಿದ್ದ ಯುವತಿ ಬೇರೊಬ್ಬರ ಜೊತೆ ವಿವಾಹವಾಗಿತ್ತು.ಇದಕ್ಕೆ ಮನನೊಂದು ಪ್ರವೀಣ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಘಟನೆ ಕುರಿತಂತೆ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪ್ರಕರಣದ ಕುರಿತಂತೆ ತನಿಖೆಯನ್ನು ಕೈಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.