ಬೆಂಗಳೂರು: ಜ.22ರ ಬಳಿಕ ಅಯೋಧ್ಯೆಗೆ ತೆರಳಿ ಶ್ರೀರಾಮಚಂದ್ರನ ದರ್ಶನ ಮಾಡಿಕೊಂಡು ಬರುತ್ತೇನೆ ಅಂತ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಅವರು ಶುಕ್ರವಾರ ಶಿವಮೊಗ್ಗದಲ್ಲಿ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು. ಇದೇ ವೇಳೆ ಅವರು ಮಾತನಾಡಿ, ರಾಮ ಮಂದಿರ ಉದ್ಘಾಟನೆಗೆ ನಮಗೆ ಆಹ್ವಾನ ಬಂದಿಲ್ಲ. ಆದರೂ ಜ.22ರ ಬಳಿಕ ಅಯೋಧ್ಯೆಗೆ ಹೋಗುವುದಾಗಿ ಹೇಳಿದರು. ಇದೇ ವೇಳೆ ಅವರು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಿ ಬಿಜೆಪಿ ಮುಖಂಡರು
ರಾಜಕೀಯ ಮಾಡಲು ಹೊರಟಿದ್ದಾರೆ. ದೇವರನ್ನು ರಾಜಕೀಯವಾಗಿ ಬಳಸಿಕೊಳ್ಳುವ ಬಿಜೆಪಿಯ ಕ್ರಮವನ್ನು ನಾವು ವಿರೋಧಿ ಸುತ್ತೇವೆಯೇ ಹೊರತು ರಾಮನನ್ನು ಅಲ್ಲ, ನಮ್ಮ ಕಾರ್ಯಕರ್ತರು ದೇವಸ್ಥಾನಗಳಿಗೆ ತೆರಳಿ ಶ್ರೀರಾಮನಿಗೆ ಪೂಜೆ ಸಲ್ಲಿಸುತ್ತಾರೆ ಅಂತಹೇಳಿದರು.