ಮಂಡ್ಯ : ನಟ ದರ್ಶನ್ ನಟಿಸಿರುವ ಕಾಟೇರ ಚಲನಚಿತ್ರವು ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನ ಒರಾಯನ್ ಮಾಲ್ ಎದುರುಗಡೆ ಇರುವ ಜೆಟ್ ಲಾಗ್ ಪಬ್ನಲ್ಲಿ ಅವರಿಗೂ ಮೇರಿ ಪಾರ್ಟಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಶಾಸಕ ರವಿ ಗಾಣಿಗ ಪ್ರತಿಕ್ರಿಯೆ ನೀಡಿದ್ದು ಸ್ಟಾರ್ ನಟರಿಗೆ ಪೊಲೀಸರು ನೋಟಿಸ್ ನೀಡಿದ್ದರಿಂದ ಅವರೇ ತಪ್ಪಿತಸ್ಥರಾಗಿದ್ದಾರೆ ಎಂದು ಆರೋಪಿಸಿದರು.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಬ್ನಲ್ಲಿ ರಾತ್ರಿ ಒಂದು ಗಂಟೆವರೆಗೆ ಮಾತ್ರ ಅವಕಾಶವಿದೆ ಆದರೆ ಪೊಲೀಸರು 3:00 ಗಂಟೆಗೆ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ಹಾಗಾದರೆ 3 ಗಂಟೆವರೆಗೂ ಅನುಮತಿ ಕೊಟ್ಟಿದ್ದು ಯಾಕೆ ಎಂದು ಪ್ರಶ್ನಿಸಿದ್ದಾರೆ.
ರೋಲ್ ಕಾಲ್ ಮಾಡಿ ಪಬ್ಬನ್ನು ಓಪನ್ ಮಾಡಲು ಬಿಟ್ಟಿದ್ದಾರಾ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಪಿ ಹಾಗೂ ಡಿಸಿಪಿ ಇದಕ್ಕೆ ಉತ್ತರ ಕೊಡಬೇಕು ದರ್ಶನ್ ಡಾಲಿ ರಾಕ್ಲೈನ್ ವೆಂಕಟೇಶ್ ಸೇರಿದಂತೆ ಸ್ಟಾರ್ ನಟರನ್ನು ಪೊಲೀಸ್ ಠಾಣೆಗೆ ಕರೆಸಿದ್ದು ತಪ್ಪಾಗಿದ್ದು ಈ ಪ್ರಕರಣದಲ್ಲಿ ಪೊಲೀಸರು ತಪ್ಪಿತಸ್ಥರು ಎಂದು ಮಂಡ್ಯ ಶಾಸಕ ರವಿ ಗಾಣಿಗ ಹೇಳಿಕೆ ನೀಡಿದ್ದಾರೆ.
ಏನಿದು ಘಟನೆ
ಕಾಟೇರ ಸಿನಿಮಾ ರಿಲೀಸ್ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಇದರ ಸಕ್ಸಸ್ ಸೆಲೆಬ್ರೇಷನ್ ಬಳಿಕ ದರ್ಶನ್, ಅಭಿಷೇಕ್ ಅಂಬರೀಷ್, ಧನಂಜಯ್ ಸೇರಿ ಅನೇಕರು ಬೆಂಗಳೂರಿನ ಒರಾಯನ್ ಮಾಲ್ ಬಳಿ ಇರುವ ಜೆಟ್ ಲ್ಯಾಗ್ ಪಬ್ನಲ್ಲಿ ಪಾರ್ಟಿ ಮಾಡಿದ್ದರು. ಜನವರಿ 3 ರಂದು ಮಧ್ಯರಾತ್ರಿ ಕಳೆದು ಮರುದಿನ ಬೆಳಗಿನ ಜಾವ 3:15ರ ವರೆಗೆ ಪಾರ್ಟಿ ಮಾಡಿದ್ದರು.
ಇತ್ತೀಚೆಗಷ್ಟೇ ಆ ಸ್ಟಾರ್ ನಟನ ಚಿತ್ರ ಬಿಡುಗಡೆಯಾಗಿತ್ತು. ಅದರ ಸಕ್ಸಸ್ ಸೆಲೆಬ್ರೇಷನ್ ಬಳಿಕ ಪಬ್ನಲ್ಲಿ ಸ್ಟಾರ್ಸ್ ಪಾರ್ಟಿಗೆ ಸೇರಿದ್ದರು. ಬೆಂಗಳೂರಿನ ಒರಾಯನ್ ಮಾಲ್ ಬಳಿ ಇರುವ ಜೆಟ್ ಲ್ಯಾಗ್ ಪಬ್ನಲ್ಲಿ ಪಾರ್ಟಿ ನಡೆದಿತ್ತು. ನಟ, ನಿರ್ದೇಶಕ, ನಿರ್ಮಾಪಕ ಸೇರಿದಂತೆ ಹಲವು ಸೆಲೆಬ್ರಿಟಿಗಳು ಪಾರ್ಟಿಯಲ್ಲಿ ಭಾಗಿ ಆಗಿದ್ದರು. ಜನವರಿ 3ರಂದು ರಾತ್ರಿ ಪಬ್ಗೆ ಸಿನಿಮಾ ತಂಡ ಆಗಮಿಸಿದ ಸಿಸಿಟಿವಿ ದೃಶ್ಯ ವೈರಲ್ ಆಗಿತ್ತು.
ನಿಯಮಗಳ ಪ್ರಕಾರ ರಾತ್ರಿ 1 ಗಂಟೆಗೆ ಪಬ್ ಕ್ಲೋಸ್ ಆಗಬೇಕಿತ್ತು. ಒಂದು ಗಂಟೆ ಆಗುತ್ತಿದ್ದಂತೆ ಪಾರ್ಟಿ ಪೂರ್ಣಗೊಳಿಸಬೇಕಿತ್ತು. ಆದರೆ, ಮುಂಜಾನೆವರೆಗೂ ಪಾರ್ಟಿ ನಡೆದಿದೆ. ಬೀಟ್ನಲ್ಲಿದ್ದ ಪೊಲೀಸರಿಗೆ ಈ ಬಗ್ಗೆ ಮಾಹಿತಿ ಇರಲಿಲ್ಲವೇ? ಮಾಹಿತಿ ಇದ್ದೂ ಸುಮ್ಮನಾದರೇ ಎನ್ನುವ ಪ್ರಶ್ನೆ ಮೂಡಿದೆ.