ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಹೆಚ್ಡಿ ಕುಮಾರಸ್ವಾಮಿ ಸ್ಪರ್ಧೆ ಮಾಡುವ ಬಗ್ಗೆ ನಿರ್ಧಾರ ಮಾಡಿಲ್ಲ. ಗಾಳಿ ಸುದ್ದಿಗಳ ಬಗ್ಗೆ ನಾನು ಮಾತನಾಡಲ್ಲ. ಮೋದಿ ಅವರು ಏನಾದರೂ ಹೇಳಿದರೇ, ಅಗ ನಾವೆಲ್ಲಾ ಕುಳಿತು ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ.ಆದರೆ ನಾನು ಈ ಸಲ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ. ಇನ್ನೂ ಎರಡು ವರ್ಷಗಳ ಕಾಲ ರಾಜ್ಯಸಭಾ ಸದಸ್ಯ ಅವಧಿ ಇದೆ. ಎಂದು ತಿಳಿಸಿದರು.
ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,ನಾನು ಈ ಸಲ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ. ಇನ್ನೂ ಎರಡು ವರ್ಷಗಳ ಕಾಲ ರಾಜ್ಯಸಭಾ ಸದಸ್ಯ ಅವಧಿ ಇದೆ. ನನಗೆ 91 ವರ್ಷ ವಯಸ್ಸಾಗಿದೆ. ಜ್ಞಾಪಕ ಶಕ್ತಿ ಇದೆ, ಓಡಾಡಲು ಕಷ್ಟವಾಗುತ್ತದೆ. ಆದರೂ ಜೆಡಿಎಸ್, ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತೇನೆ ಎಂದು ಎಂದು ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಅವರು ಹೇಳಿದರು.
ಹಾಸನ ಲೋಕಸಭಾ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ ಅಥವಾ ಡಾ.ಮಂಜುನಾಥ್ ಯಾರು ಸ್ಪರ್ಧೆ ಮಾಡುತ್ತಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಯಾಕೆ ಆ ಸಮಸ್ಯೆಗಳು? ಪ್ರಜ್ವಲ್ಗೆ ಪ್ರಧಾನಿ ಮೋದಿ ಅವರು ಆಶೀರ್ವಾದ ಮಾಡಿದ್ದಾರೆ. ಹೆಚ್ಡಿ ಕುಮಾರಸ್ವಾಮಿ ಅವರು ಕೂಡಾ ಆಶೀರ್ವಾದ ಮಾಡುತ್ತಾರೆ. ನಾನೂ ಆಶೀರ್ವಾದ ಮಾಡುತ್ತೇನೆ, ಜನರು ಆಶೀರ್ವಾದ ಮಾಡುತ್ತಾರೆ ಎಂದು ಹೇಳುವ ಮೂಲಕ ಹಾಸನದಿಂದ ಮತ್ತೆ ಪ್ರಜ್ವಲ್ ರೇವಣ್ಣ ಸ್ಪರ್ಧೆ ಮಾಡುತ್ತಾರೆ ಎಂಬ ಸುಳಿವು ಬಿಟ್ಟುಕೊಟ್ಟರು.