ಹಾವೇರಿ: ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣದ ನಂತ್ರ, ಅದು ಗ್ಯಾಂಗ್ ರೇಪ್ ಆಗಿ ಮಾರ್ಪಟ್ಟಿತ್ತು. ಸಂತ್ರಸ್ತ ಮಹಿಳೆಯ ದೂರಿನ ಆಧಾರದ ಮೇಲೆ ಹಲವರ ವಿರುದ್ಧ ಎಫ್ಐಆರ್ ದಾಖಲಾಗಿ, ಬಂಧನ ಕೂಡ ಆಗಿದೆ. ಈ ಬೆನ್ನಲ್ಲೇ ಹಾನಗಲ್ ನಲ್ಲಿ ಗ್ಯಾಂಗ್ ರೇಪ್ ಪ್ರಕರಣದ ಬಳಿಕ ಇದೀಗ ಯುವತಿಯೊಬ್ಬಳನ್ನು ಕಿಡ್ನಾಪ್ ಮಾಡಿರೋ ಪ್ರಕರಣ ಬೆಳಕಿಗೆ ಬಂದಿದೆ.
ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದಲ್ಲಿ ಗ್ಯಾಂಗ್ ರೇಪ್ ಪ್ರಕರಣದ ಬಳಿಕ, ಈಗ ಅನ್ಯಕೋಮಿನ ಯುವಕರು, ಯುವತಿಯೊಬ್ಬಳನ್ನು ಅಪಹರಿಸಿದ್ದಾರೆಂಬುದಾಗಿ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರು ಆಧರಿಸಿ ಎಫ್ಐಆರ್ ಕೂಡ ದಾಖಲಾಗಿದೆ.
ಹಾನಗಲ್ ಪಟ್ಟಣದ ನಿವಾಸಿ ಅಫ್ತಾಬ್ ವಿರುದ್ಧ ಯುವತಿಯ ತಂದೆ ಹಾನಗಲ್ ಪೊಲೀಸ್ ಠಾಣೆಯಲ್ಲಿ ಮಗಳನ್ನು ಅಪಹರಿಸಿರೋದಾಗಿ ದೂರು ನೀಡಿದ್ದಾರೆ. ಈ ದೂರು ಆಧರಿಸಿ ಅಫ್ತಾಬ್ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಲೋಕಸಭಾ ಚುನಾವಣೆ : ನನಗೆ ಯತಿಂದ್ರ ಸಿದ್ದರಾಮಯ್ಯ ಎದುರಾಳಿಯಾದ್ರೆ ಒಳ್ಳೆಯದು : ಪ್ರತಾಪ್ ಸಿಂಹ
BIG BREAKING: ‘ಇಂಡಿಯಾ ಬ್ಲಾಕ್ ಮುಖ್ಯಸ್ಥ’ರಾಗಿ ‘ಮಲ್ಲಿಕಾರ್ಜುನ ಖರ್ಗೆ’ ನೇಮಕ