ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ದರ್ಜೆ-03 ತಾಂತ್ರಿಕ ಸಹಾಯಕ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ತಾತ್ಕಾಲಿಕ ನೇಮಕಾತಿ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಇದೀಗ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಈ ಕುರಿತು ಕೆಎಸ್ಆರ್ ಟಿಸಿಯ ಆಯ್ಕೆ ಸಮಿತಿಯ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ತಾಂತ್ರಿಕ ಸಹಾಯಕ ಹುದ್ದೆಗೆ ಆಯ್ಕೆಗೊಂಡಿದ್ದ ಅಭ್ಯರ್ಥಿಗಳ ಸಂಭವನೀಯ ಆಯ್ಕೆ ಪಟ್ಟಿಯನ್ನು ಈಗಾಗಲೇ ಪ್ರಕಟಿಸಲಾಗಿತ್ತು. ಅದಕ್ಕೆ ಆಕ್ಷೇಪಣೆಗಳನ್ನು ಸಲ್ಲಿಸಲು ದಿನಾಂಕ 12-01-2023ರವರೆಗೆ ಅವಕಾಶ ನೀಡಲಾಗಿತ್ತು ಎಂದಿದ್ದಾರೆ.
ಸ್ವೀಕರಿಸಿದ ಆಕ್ಷೇಪಣೆಗಳನ್ನು ಪರಿಶೀಲಿಸಿ, ಅರ್ಹ ಆಕ್ಷೇಪಣೆಗಳನ್ನು ಪರಿಗಣಿಸಿ, ಇದೀಗ ಅಂತಿಮ ಆಯ್ಕೆ ಪಟ್ಟಿಯನ್ನು ದಿನಾಂಕ 13-01-2024ರಂದು ನಿಗಮದ ಕೇಂದ್ರ ಕಚೇರಿಯ ಸೂಚನಾ ಫಲಕ ಮತ್ತು ನಿಗಮದ ಅಧಿಕೃತ ವೆಬ್ ಸೈಟ್ www.ksrtcjobs.com ನಲ್ಲಿ ಪ್ರಕಟಿಸಲಾಗಿದೆ ಎಂದು ತಿಳಿಸಿದ್ದಾರೆ.
‘ಆಸಿಡ್ ಸಂತ್ರಸ್ತ ಮಹಿಳೆ’ಯರ ಗಮನಕ್ಕೆ: ‘2.5 ಲಕ್ಷ’ದವರೆಗೆ ಸಹಾಯಧನ, ಸಾಲಸೌಲಭ್ಯಕ್ಕೆ ಅರ್ಜಿ ಆಹ್ವಾನ
ಲೋಕಸಭಾ ಚುನಾವಣೆ : ನನಗೆ ಯತಿಂದ್ರ ಸಿದ್ದರಾಮಯ್ಯ ಎದುರಾಳಿಯಾದ್ರೆ ಒಳ್ಳೆಯದು : ಪ್ರತಾಪ್ ಸಿಂಹ