ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಅವರ ಪತ್ನಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದಂತವರ ವಿರುದ್ಧ ಕಾಂಗ್ರೆಸ್ ನಿಂದ ದೂರು ನೀಡಲಾಗಿತ್ತು. ಈ ದೂರು ಆಧರಿಸಿ, ಪೋಸ್ಟ್ ಮಾಡಿದವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಕಾಂಗ್ರೆಸ್ ಮುಖಂಡ ಸಂಜಯ್ ಯಾದವ್ ಎಂಬುವರು ಸಿಎಂ ಸಿದ್ಧರಾಮಯ್ಯ ಹಾಗೂ ಪತ್ನಿ ವಿರುದ್ಧ ಕಿಡಿಗೇಡಿಗಳು ಸೋಷಿಯಲ್ ಮೀಡಿಯಾದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಕಾಂಗ್ರೆಸ್ ಮುಖಂಡ ನೀಡಿದಂತ ದೂರಿನ ಹಿನ್ನಲೆಯಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸಿಎಂ, ಅವರ ಪತ್ನಿ ವಿರುದ್ಧ ಪೋಸ್ಟ್ ಹಾಕಿದಂತ ಕಿಡಿಗೇಡಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಮೂಲಕ ಅವಹೇಳನಕಾರಿ ಪೋಸ್ಟ್ ಹಾಕಿದಂತ ಕಿಡಿಗೇಡಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
BREAKING: ‘KSRTC’ ದರ್ಜೆ-03 ‘ತಾಂತ್ರಿಕ ಸಹಾಯಕ ಹುದ್ದೆ’ಯ ‘ಅಂತಿಮ ಆಯ್ಕೆ ಪಟ್ಟಿ’ ಪ್ರಕಟ
ಲೋಕಸಭಾ ಚುನಾವಣೆ : ನನಗೆ ಯತಿಂದ್ರ ಸಿದ್ದರಾಮಯ್ಯ ಎದುರಾಳಿಯಾದ್ರೆ ಒಳ್ಳೆಯದು : ಪ್ರತಾಪ್ ಸಿಂಹ