ಕೂಡಲಸಂಗಮ : ರಾಜಕೀಯ ಉದ್ದೇಶದಿಂದ ಕಾರವಾರ ಸಂಸದ ಅನಂತಕುಮಾರ ಹೆಗ್ಡೆಯವರು ರಾಜ್ಯದ ಮುಖ್ಯಮಂತ್ರಿಗಳಿಗೆ ಅಶ್ಲೀಲ ಪದಗಳನ್ನು ಬಳಸಿದ್ದರೆ, ಆ ಭಾಷೆ ಅವರ ಸಂಸ್ಕೃತಿಯನ್ನು ಬಿಂಬಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಕೂಡಲಸಂಗಮ ಹೆಲಿಪ್ಯಾಡ್ ನಲ್ಲಿ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿ, ಕಾರವಾರ ಸಂಸದ ಅನಂತಕುಮಾರ ಹೆಗ್ಡೆಯವರು ಅಯೋಧ್ಯೆ ಕಾರ್ಯಕ್ರಮಕ್ಕೆ ಆಹ್ವಾನವಿದ್ದರೂ ಮುಖ್ಯಮಂತ್ರಿಗಳು ತೆರಳುತ್ತಿಲ್ಲವೆಂದು ಏಕವಚನದಲ್ಲಿ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಇಂತಹ ಹೇಳಿಕೆಗಳು ಅವರ ಸಂಸ್ಕೃತಿಯನ್ನು ಬಿಂಬಿಸುತ್ತದೆ. ಕೇಂದ್ರದ ಮಂತ್ರಿಯಾಗಿದ್ದಾಗ, ಸಂವಿಧಾನವನ್ನೇ ಬದಲಾಯಿಸುತ್ತೇನೆ ಎಂದು ಹೇಳಿದ್ದ ಅನಂತ ಕುಮಾರ್ ಹೆಗ್ಡೆಯವರಿಂದ ಉತ್ತಮ ಸಂಸ್ಕೃತಿಯನ್ನು ಅಪೇಕ್ಷಿಸಲು ಸಾಧ್ಯವಿಲ್ಲ. ಅವರ ಭಾಷೆ ಸುಸಂಸ್ಕೃತವಾಗಿಲ್ಲ. ಈ ಭಾಷೆ ಅವರ ಘನತೆಗೆ ಕುಂದು ಬರುತ್ತದೆ ಎಂದು ತಿಳಿಸಿದರು.
ಸಮಾಜವನ್ನು ವಿಂಗಡಿಸಿ ಸ್ವಾರ್ಥಕ್ಕಾಗಿ ಲಾಭ ಗಳಿಸುವ ಪ್ರಯತ್ನವನ್ನು ಒಂದು ವರ್ಗ ಮಾಡಿತ್ತು ಎಂದು ಮರೆಯಬಾರದು
ಸಮಾಜದಲ್ಲಿ ಅವಕಾಶ ದೊರೆತವರು ಮುಂದುವರೆದರು ಮೇಲ್ಜಾತಿಯವರಾದರು. ಅವಕಾಶ ವಂಚಿತರು ಹಿಂದುಳಿದು ಕೆಳಜಾತಿಯವರಾದರು. ಚಾತುರ್ವಣ ವ್ಯವಸ್ಥೆಯನ್ನು ದೇವರು ಮಾಡಲಿಲ್ಲ. ಮನುಷ್ಯನ ಸ್ವಾರ್ಥದಿಂದಾಗಿ ನಾವು ಮಾಡಿಕೊಂಡಿದ್ದೇವೆ. ಮಹಿಳೆಯರೂ ಅವಕಾಶ ವಂಚಿತರಾಗಿದ್ದರು. ಅಂಬೇಡ್ಕರ್ ಅವರು ಎಲ್ಲರಿಗೂ ಶಿಕ್ಷಣ ಕಡ್ಡಾಯ ಎಂದು ಸಂವಿಧಾನದಲ್ಲಿ ಹೇಳಿದ್ದಾರೆ. ಅಕ್ಷರ ಸಂಸ್ಕೃತಿ ಯಿಂದ ವಂಚಿತರಾದವರು ಶೂದ್ರರಾದರು. ಸಮಾಜವನ್ನು ವಿಂಗಡಿಸಿ ಸ್ವಾರ್ಥಕ್ಕಾಗಿ ಲಾಭ ಗಳಿಸುವ ಪ್ರಯತ್ನವನ್ನು ಒಂದು ವರ್ಗ ಮಾಡಿತ್ತು ಎಂದು ಮರೆಯಬಾರದು. ಇದರ ಲಾಭ ಪಡೆದವರು ಈಗಲೂ ಆ ಪ್ರಯತ್ನ ವನ್ನು ಮಾಡುತ್ತಿದ್ದಾರೆ. ಶೋಷಣೆಗೆ ಒಳಪಟ್ಟವರು ಈ ಬಗ್ಗೆ ಎಚ್ಚರಿಕೆಯಿಂದ ಇರಬೇಕು . ಕುರುಬರೂ ಇದರಲ್ಲಿ ಸೇರಿದ್ದಾರೆ ಎಂದರು.
ಶಿಕ್ಷಣದಿಂದ ಸ್ವಾವಲಂಬಿಗಳಾಗು ಸಾಧ್ಯ
ಮೇಲು , ಕೀಳೆಂದು ಜಾತಿಬೇಧ ಮಾಡುವುದು ನಿರರ್ಥಕ ಎಂದು ಬಸವಾದಿ ಶರಣರು, ಕನಕದಾಸರು ತಿಳಿಸಿದ್ದರು. ಕಾಯಕ ಮತ್ತು ದಾಸೋಹ ದಂತಹ ಮೌಲ್ಯಗಳನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಕೇವಲ ರಾಜಕೀಯ ಪ್ರಜಾಪ್ರಭುತ್ವ ಅಲ್ಲದೇ ಆರ್ಥಿಕ ಹಾಗೂ ಸಾಮಾಜಿಕ ಪ್ರಜಾಪ್ರಭುತ್ವ ಸ್ಥಾಪಿತವಾಗಬೇಕು ಎಂದು ಡಾ. ಅಂಬೇಡ್ಕರ್ ಪ್ರತಿಪಾದಿಸಿದ್ದರು. ಹಿಂದುಳಿದವರು ಕೈಗಾರಿಕೆ, ಶಿಕ್ಷಣ ಕ್ಷೇತ್ರ ಸೇರಿದಂತೆ ಎಲ್ಲ ಕ್ಷೇತ್ರದಲ್ಲಿಯೂ ಅಭಿವೃದ್ಧಿ ಹೊಂದಿ ಮುಖ್ಯ ವಾಹಿನಿಗೆ ಬರಬೇಕು. ಶಿಕ್ಷಣ ಪಡೆದಾಗ ಮಾತ್ರ ದೌರ್ಜನ್ಯಗಳನ್ನು ಎದುರಿಸಿ ಸ್ವಾವಲಂಬಿಗಳಾಗಲು ಸಾಧ್ಯ ಎಂದರು.
‘ಆಸಿಡ್ ಸಂತ್ರಸ್ತ ಮಹಿಳೆ’ಯರ ಗಮನಕ್ಕೆ: ‘2.5 ಲಕ್ಷ’ದವರೆಗೆ ಸಹಾಯಧನ, ಸಾಲಸೌಲಭ್ಯಕ್ಕೆ ಅರ್ಜಿ ಆಹ್ವಾನ
BREAKING: ‘KSRTC’ ದರ್ಜೆ-03 ‘ತಾಂತ್ರಿಕ ಸಹಾಯಕ ಹುದ್ದೆ’ಯ ‘ಅಂತಿಮ ಆಯ್ಕೆ ಪಟ್ಟಿ’ ಪ್ರಕಟ