ಬೆಂಗಳೂರು: ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವವರಿಗೆ ಸರ್ಕಾರ ಜಾರಿಗೆ ತಂದಿರುವಂತ ಯೋಜನೆಯಲ್ಲಿ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯೂ ಒಂದಾಗಿದೆ. ಈ ಯೋಜನೆಯಡಿ ಇದೀಗ ಚಿಕಿತ್ಸೆ ಪಡೆಯುತ್ತಿರೋರ ಸಂಖ್ಯೆ ಕೂಡ ಹೆಚ್ಚಳವಾಗಿರೋದಾಗಿ ತಿಳಿದು ಬಂದಿದೆ.
ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಖಾಸಗಿ ವೈದ್ಯಕೀಯ ವ್ಯವಸ್ಥೆಯಡಿ ಮಂಡಿ ಚಿಪ್ಪು, ಹೃದಯದ ಕವಾಟ ಬದಲಾವಣೆಯಂತಹ ಶಸ್ತ್ರ ಚಿಕಿತ್ಸೆಗಳು ದುಬಾರಿ ಆಗಿರುವುದರಿಂದ ‘ಆಯುಷ್ಮಾನ್ ಭಾರತ – ಆರೋಗ್ಯ ಕರ್ನಾಟಕ’ ಯೋಜನೆಯಡಿ ಚಿಕಿತ್ಸೆ ಪಡೆಯುವವರ ಸಂಖ್ಯೆ ರಾಜ್ಯದಲ್ಲಿ ಹೆಚ್ಚಳವಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯದ ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಸೇವೆ ಹಾಗೂ ಚಿಕಿತ್ಸೆ ಒದಗಿಸುವುದು ನಮ್ಮ ಆದ್ಯತೆ, ದುಬಾರಿ ಚಿಕಿತ್ಸೆಗಳನ್ನೂ ಯೋಜನೆಯಡಿ ಉಚಿತವಾಗಿ ಒದಗಿಸುತ್ತಿದ್ದೇವೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ನಾಳೆ ದಾವೋಸ್ ‘ವಿಶ್ವ ಆರ್ಥಿಕ ಶೃಂಗಸಭೆ’ಗೆ ಎಂ.ಬಿ ಪಾಟೀಲ ನೇತೃತ್ವದ ನಿಯೋಗ ಪ್ರಯಾಣ
‘ಆಸಿಡ್ ಸಂತ್ರಸ್ತ ಮಹಿಳೆ’ಯರ ಗಮನಕ್ಕೆ: ‘2.5 ಲಕ್ಷ’ದವರೆಗೆ ಸಹಾಯಧನ, ಸಾಲಸೌಲಭ್ಯಕ್ಕೆ ಅರ್ಜಿ ಆಹ್ವಾನ