ಹುಬ್ಬಳ್ಳಿ : ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷವಕ್ಕೆ ಸೇರ್ಪಡೆಗೊಂಡಿದ್ದರು. ಇದೀಗ ಮತ್ತೆ ಬಿಜೆಪಿಯಿಂದ ಜಗದೀಶ್ ಶೆಟ್ಟರ್ ಅವರನ್ನು ಬಿಜೆಪಿಗೆ ಕರೆತರುವ ಯತ್ನ ನಡೆಯುತ್ತಿದೆ ಎಂಬ ಮಾಹಿತಿ ಬಂದಿದ್ದು ಇದಕ್ಕೆ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಗೆ ಘರ್ ವಾಪ್ಸಿ ಪ್ರಶ್ನೆಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸ್ಪಷ್ಟಣೆ ನೀಡಿದರು.ಮತ್ತೆ ಬಿಜೆಪಿಗೆ ಸೇರಿಸಿಕೊಳ್ಳಬೇಕೆಂದು ಹಲವು ನಾಯಕರು ಒತ್ತಾಸೆ ಇದೆ. ನನಗೆ ಆಗಿರೋ ಅವಮಾನವನ್ನು ನಾನು ಇನ್ನೂ ಮರೆತಿಲ್ಲ. ಯಾವುದೇ ಕಾರಣಕ್ಕೂ ನಾನು ಬಿಜೆಪಿಗೆ ಮತ್ತೆ ವಾಪಸ್ ಆಗುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.
ನಾನು ಬಿಜೆಪಿ ತೊರೆದ ನಂತರ ಆದ ಹಾನಿ ಬಗ್ಗೆ ಅವರಿಗೆ ಮನವರಿಕೆಯಾಗಿದೆ.ಹೀಗಾಗಿ ಕೆಲವರು ನನ್ನ ಬಿಜೆಪಿಗೆ ವಾಪಸ್ ಕರೆ ತರಲು ಯತ್ನಿಸಿದ್ದಾರೆ.ವಾಪಸ್ ಕರೆಸಿಕೊಳ್ಳುವಂತೆ ಒತ್ತಡ ಹಾಕುತ್ತಿರುವ ಮಾಹಿತಿ ಇದೆ. ಯಾರು ಏನೇ ಪ್ರಯತ್ನ ಮಾಡಿದರೂ ನಾನು ಬಿಜೆಪಿಗೆ ವಾಪಸ್ ಆಗುವುದಿಲ್ಲ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸ್ಪಷ್ಟನೆ ನೀಡಿದರು.
ಧರ್ಮದಲ್ಲಿ ರಾಜಕಾರಣ ಬೆರಿಸುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿಯ ವಿರುದ್ಧ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಿಡಿ ಕಾರಿದ್ದಾರೆ. ಕಾಂಗ್ರೆಸ್ ಗೆ ಆಹ್ವಾನ ನೀಡಿರುವುದು ಟ್ರಸ್ಟ್ ನವರು ಕಾಂಗ್ರೆಸ್ ಆಹ್ವಾನ ನಿರಾಕರಿಸಿದಕ್ಕೆ ಟ್ರಸ್ಟ್ ಮಾತನಾಡಲಿ ಅದನ್ನು ಬಿಟ್ಟು ಬಿಜೆಪಿಯವರು ಏಕೆ ಮಾತಾಡ್ತಿದ್ದಾರೆ? ಎಂದು ಪ್ರಶ್ನಿಸಿದ್ದಾರೆ.ಬಿಜೆಪಿಗೂ ಶ್ರೀರಾಮ ಮಂದಿರಕ್ಕೂ ಏನು ಸಂಬಂಧ? ರಾಮ ಮಂದಿರ ವಿಚಾರ ರಾಜಕಾರಣ ಆಗಬಾರದು ಅಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.