ನವದೆಹಲಿ:ದೆಹಲಿಯ ಬವಾನಾ ಕೈಗಾರಿಕಾ ಪ್ರದೇಶದಲ್ಲಿನ ಕಾರ್ಖಾನೆಯೊಂದರಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ಭಾನುವಾರ ವರದಿ ಮಾಡಿದೆ. ಘಟನಾ ಸ್ಥಳಕ್ಕೆ 29 ಅಗ್ನಿಶಾಮಕ ದಳಗಳು ಧಾವಿಸಿವೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳು ಮಾಹಿತಿ ನೀಡಿವೆ.
ಬೆಂಕಿಯನ್ನು ಅಂತಿಮವಾಗಿ ನಿಯಂತ್ರಣಕ್ಕೆ ತರಲಾಯಿತು ಎಂದು ಅಗ್ನಿಶಾಮಕ ದಳ ಹೇಳಿದೆ.
“ಯಾವುದೇ ಸಾವುನೋವುಗಳು ಅಥವಾ ಗಾಯಗಳು ವರದಿಯಾಗಿಲ್ಲ” ಎಂದು ದೆಹಲಿ ಅಗ್ನಿಶಾಮಕ ಸೇವೆ ತಿಳಿಸಿದೆ. ಬೆಂಕಿ ಹೊತ್ತಿಕೊಂಡ ವಿಡಿಯೋವನ್ನು ಎಎನ್ಐ ಪ್ರಕಟಿಸಿದೆ. ಏತನ್ಮಧ್ಯೆ, ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಡೇರಾ ಕಿ ಗಲಿ ಬಳಿಯ ಅರಣ್ಯ ಪ್ರದೇಶದಲ್ಲಿ ದೊಡ್ಡ ಬೆಂಕಿ ಕಾಣಿಸಿಕೊಂಡಿದೆ. ಭಾನುವಾರ ನಸುಕಿನ ವೇಳೆ ಈ ಘಟನೆ ನಡೆದಿದೆ.
ಭಾರತೀಯ ಸೇನೆಯ ನೆರವಿನಿಂದ ಬೆಂಕಿಯನ್ನು ನಂದಿಸಲಾಯಿತು ಎಂದು ರಕ್ಷಣಾ ಸಾರ್ವಜನಿಕ ಸಂಪರ್ಕ ಅಧಿಕಾರಿ (PRO) ಜಮ್ಮು ಮಾಹಿತಿ ನೀಡಿದ್ದಾರೆ.
ರಕ್ಷಣಾ ಸಿಬ್ಬಂದಿ ಜ್ವಾಲೆಯನ್ನು ನಂದಿಸುವ ಕಾರ್ಯದಲ್ಲಿ ತೊಡಗಿರುವ ಕಾರ್ಯಾಚರಣೆಯ ಕಿರು ವೀಡಿಯೋ ಕ್ಲಿಪ್ ಅನ್ನು ಸಹ PRO ಡಿಫೆನ್ಸ್ ಹಂಚಿಕೊಂಡಿದ್ದಾರೆ.
ಇದಕ್ಕೂ ಮುನ್ನ ಡಿಸೆಂಬರ್ನಲ್ಲಿ ಹಿಮಾಚಲ ಪ್ರದೇಶದ ಕುಲುವಿನ ಪಾಟ್ಲಿಕುಹಲ್ ಅರಣ್ಯ ಪ್ರದೇಶದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಕೋಟ್ಯಂತರ ರೂಪಾಯಿ ಮೌಲ್ಯದ ಅರಣ್ಯ ಸಂಪತ್ತು ನಾಶವಾಗಿತ್ತು. ಅರಣ್ಯ ಪ್ರದೇಶದಿಂದ ದೊಡ್ಡ ಪ್ರಮಾಣದ ಬೆಂಕಿಯ ಜ್ವಾಲೆಗಳು ಹೊರಹೊಮ್ಮುತ್ತಿರುವುದು ಕಂಡುಬಂದಿದೆ.
Prompt & speedy response of #IndianArmy saved many lives & infrastructure, when massive forest fire broke near #DeraKiGali &endangered Civil &Army Infrastructure.With coordinated & synergistic efforts of civ agencies &security forces fire was brought under control in #DeraKiGali pic.twitter.com/pWvDbW7g1R
— PRO Defence Jammu (@prodefencejammu) January 14, 2024