ಬೆಂಗಳೂರು: ನಗರದಲ್ಲಿ ಬಿಎಂಟಿಸಿ ಮಹಿಳಾ ಕಂಡಕ್ಟರ್ ಮೇಲೆ ಚಾಕುವನಿಂದ ಹಲ್ಲೆ ನಡೆಸಿರುವಂತ ಘಟನೆ ನಡೆದಿದೆ. ಮಹಿಳಾ ಪ್ರಯಾಣಿಕರೇ ಚಾಕುವಿನಿಂದ ಹಲ್ಲೆ ನಡೆಸಿದ್ದು, ಕಂಡಕ್ಟರ್ ಗಾಯಗೊಂಡಿದ್ದಾರೆ ಎನ್ನಲಾಗುತ್ತಿದೆ.
ಬೆಂಗಳೂರಿನ ದಾಸರಹಳ್ಳಿಯಲ್ಲಿ ಡಿಪೋ ನಂ.40ಕ್ಕೆ ಸೇರಿದಂತೆ ಬಿಎಂಟಿಸಿ ಬಸ್ಸಿನಲ್ಲಿ ಮಹಿಳಾ ಕಂಡಕ್ಟರ್ ಮೇಲೆ ಮಹಿಳಾ ಪ್ರಯಾಣಿಕರು ಚಾಕುವಿನಿಂದ ಹಲ್ಲೆ ನಡೆಸಿರೋ ಘಟನೆ ನಡೆದಿದೆ.
ಬಸ್ಸಿನಲ್ಲಿ ಟಿಕೆಟ್ ಪಡೆಯದೇ ಕುಳಿತಿದ್ದಂತವನ್ನು ಬಿಎಂಟಿಸಿ ಮಹಿಳಾ ಕಂಡಕ್ಟರ್ ಸುಕನ್ಯಾ ಪ್ರಶ್ನಿಸಿದ್ದಾರೆ. ಈ ವೇಳೆ ಪರಸ್ಪರ ವಾಗ್ವಾದ ನಡೆದು, ಆ ಬಳಿಕ ಮಹಿಳಾ ಬಿಎಂಟಿಸಿ ಕಂಡಕ್ಟರ್ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ ಎಂಬುದಾಗಿ ತಿಳಿದು ಬಂದಿದೆ.
ಮಹಿಳಾ ಪ್ರಯಾಣಿಕರಿಂದ ಚಾಕುವಿನಿಂದ ಹಲ್ಲೆಗೆ ಒಳಗಾದಂತ ಬಿಎಂಟಿಸಿ ಬಸ್ ಕಂಡಕ್ಟರ್ ಅನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
‘ಏರ್ಟೆಲ್’,’ಜಿಯೊ’ 5 ಜಿ ಬಳಕೆದಾರರಿಗೆ ಶಾಕಿಂಗ್ ನ್ಯೂಸ್ : ಶೀಘ್ರದಲ್ಲೇ ‘ಅನ್ಲಿಮಿಟೆಡ್ ಪ್ಲಾನ್’ ಬಂದ್
ಹಿಂದೂ ಧರ್ಮ ನಿಮ್ಮಪ್ಪನ ಮನೆ ಆಸ್ತಿನಾ?: ಅನಂತಕುಮಾರ್ ಹೆಗಡೆಗೆ ಹಿಗ್ಗಾಮುಗ್ಗ ಬೈದ ಪ್ರದೀಪ್