ಬೆಂಗಳೂರು: ಇಷ್ಟು ದಿನ ಅಡ್ರೆಸ್ ಇಲ್ಲದಂತೆ ಕಳೆದು ಹೋಗಿದ್ದ ತಾವು ಈಗ ಚುನಾವಣೆ ಸಮಯದಲ್ಲಿ ಮತ ಗಳಿಸಲು ರೋಷ, ಆವೇಶದ ಮಾತುಗಳನ್ನು ಆಡುತ್ತಿದ್ದೀರಿ ಎಂಬುದನ್ನು ಅರ್ಥ ಮಾಡಿಕೊಳ್ಳದೆ ಇರುವಷ್ಟು ಜನ ದಡ್ಡರಲ್ಲ. ಈ ಬಾರಿ ತಮಗೆ ತಕ್ಕ ಪಾಠ ಕಲಿಸುತ್ತಾರೆ. ನಿಮ್ಮನ್ನು ಶಾಶ್ವತವಾಗಿ ಅಡ್ರೆಸ್ ಗೆ ಇಲ್ಲದಂತೆ ಮಾಡುತ್ತಾರೆ. ನೋಡ್ತಾ ಇರಿ ಎಂಬುದಾಗಿ ಸಚಿವ ರಾಮಲಿಂಗಾರೆಡ್ಡಿ ಅವರು ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ.
ಈ ಕುರಿತಂತೆ ಇಂದು ಎಕ್ಸ್ ಮಾಡಿರುವಂತ ಅವರು, ಲೋಕಸಭಾ ಸದಸ್ಯರಾದ ಅನಂತ್ ಕುಮಾರ್ ಹೆಗಡೆಯವರೇ, “ಕುಲವಂ ಪೇಳ್ವುದು ನಾಲ್ಗೆ” ಎಂಬ ಮಾತಿನಂತೆ ನಿಮ್ಮ ಸಂಸ್ಕಾರ ಏನು ಎಂಬುದನ್ನು ನೀವಾಡಿರುವ ಮಾತು ಪ್ರತಿಬಿಂಬಿಸುತ್ತಿದೆ. ಇದೇ ಏನು ಬಿಜೆಪಿ, ಆರ್ ಎಸ್ ಎಸ್, ನಿಮ್ಮ ತಂದೆ-ತಾಯಿ ನಿಮಗೆ ಕಲಿಸಿರುವ ಸಂಸ್ಕೃತಿ. ಇದೇ ಏನು ನಿಮ್ಮ ಆಚಾರ-ವಿಚಾರ? ಎಂದು ಪ್ರಶ್ನಿಸಿದ್ದಾರೆ.
“ಆಚಾರವಿಲ್ಲದ ನಾಲಿಗೆ, ನಿನ್ನ ನೀಚ ಬುದ್ದಿಯ ಬಿಡು ನಾಲಿಗೆ’ ಎಂಬ ದಾಸರವಾಣಿಯನ್ನು ಪರಿಪಾಲಿಸಬೇಕಾದ ಸ್ಥಿತಿಗೆ ನೀವು ಬಂದು ನಿಂತಿರುವುದು ದುರಂತ. “ಮಾತು ಆಡಿದರೆ ಹೋಯಿತು, ಮುತ್ತು ಉದುರಿದರೆ ಹೋಯಿತು” ಎಂಬಂತೆ ನೀವು ಮುಖ್ಯಮಂತ್ರಿಗಳ ಬಗ್ಗೆ ಬಳಸಿರುವ ಪದ 6.50 ಕೋಟಿ ಕರ್ನಾಟಕದ ಜನತೆಯನ್ನು ಕುರಿತು ಆಡಿದ ಮಾತಾಗಿರುತ್ತದೆ. ಅವರಿಗೆ ಮಾಡಿದ ಅವಮಾನವಾಗಿತ್ತದೆ ಎಂದು ಗುಡುಗಿದ್ದಾರೆ.
ನೀವು ಆಡಿರುವ ಮಾತು, ಬಳಸಿರುವ ಪದ ನಿಮ್ಮ ಮಾನಸಿಕ ಸ್ಥಿತಿಯ ಪ್ರತೀಕ. ಸಣ್ಣ ಮಾತು ಆಡುವುದರಿಂದ ನೀವು ದೊಡ್ಡವರಾಗುವುದಿಲ್ಲ. ಕೇಂದ್ರ ಸಚಿವರಾಗಿದ್ದಾಗ ಸಂವಿಧಾನ ಬದಲಿಸುತ್ತೇವೆ, ಅದಕ್ಕಾಗಿಯೇ ಅಧಿಕಾರಕ್ಕೆ ಬಂದಿರುವುದು ಎಂದು ಹೇಳಿದ್ದೀರಿ. ಈಗ ಇಂತಹ ಮಾತು. ನಿಮಗಿದು ಮರ್ಯಾದೆ ತರುವುದಿಲ್ಲ. ಬಿಜೆಪಿ ಪಕ್ಷಕ್ಕೆ ಕಿಂಚಿತ್ತಾದರೂ ಮಾನ-ಮರ್ಯಾದೆ, ಆಚಾರ ವಿಚಾರ ಇದ್ದರೆ ನಿಮ್ಮ ಮೇಲೆ ಶಿಸ್ತು ಕ್ರಮ ಜರುಗಿಸಬೇಕು. ನೀವು ನಾಡಿನ ಜನರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.
ನಿಮಗೆ ಸಂಸದರಲ್ಲ, ಯಾವುದೇ ಚುನಾಯಿತ ಪ್ರತಿನಿಧಿ ಆಗುವ ಯೋಗ್ಯತೆಯೂ ಇಲ್ಲ. ಬೇರೆಯವರಿಗೂ ಮಾತಾಡಲು ಬರುತ್ತದೆ. ಆದರೆ ನಿಮ್ಮ ಮಟ್ಟಕ್ಕೆ ಇಳಿಯುವುದು ಅನಾಗರಿಕತೆ ಆಗುತ್ತದೆ ಎಂಬುದಾಗಿ ವಾಗ್ಧಾಳಿ ನಡೆಸಿದ್ದಾರೆ.
ಲೋಕಸಭಾ ಸದಸ್ಯರಾದ ಶ್ರೀ @AnantkumarH ರವರೇ,
"ಕುಲವಂ ಪೇಳ್ವುದು ನಾಲ್ಗೆ" ಎಂಬ ಮಾತಿನಂತೆ ನಿಮ್ಮ ಸಂಸ್ಕಾರ ಏನು ಎಂಬುದನ್ನು ನೀವಾಡಿರುವ ಮಾತು ಪ್ರತಿಬಿಂಬಿಸುತ್ತಿದೆ.
ಇದೇ ಏನು @BJP4India, @RSSorg , ನಿಮ್ಮ ತಂದೆ-ತಾಯಿ ನಿಮಗೆ ಕಲಿಸಿರುವ ಸಂಸ್ಕೃತಿ. ಇದೇ ಏನು ನಿಮ್ಮ ಆಚಾರ-ವಿಚಾರ?
"ಆಚಾರವಿಲ್ಲದ ನಾಲಿಗೆ, ನಿನ್ನ ನೀಚ ಬುದ್ದಿಯ… pic.twitter.com/uFhXl7lnhx
— Ramalinga Reddy (@RLR_BTM) January 14, 2024
ಹಿಂದೂ ಧರ್ಮ ನಿಮ್ಮಪ್ಪನ ಮನೆ ಆಸ್ತಿನಾ?: ಅನಂತಕುಮಾರ್ ಹೆಗಡೆಗೆ ಹಿಗ್ಗಾಮುಗ್ಗ ಬೈದ ಪ್ರದೀಪ್
‘ಹಿಂದೂ ಧರ್ಮ’ ನಿಮ್ಮಪ್ಪನ ಮನೆ ಸ್ವತ್ತ.? ನಮ್ಮ ಎದೆ ಸೀಳಿದ್ರೆ ‘ಶ್ರೀರಾಮ’ ಕಾಣಿಸ್ತಾನೆ – ಶಾಸಕ ಪ್ರದೀಪ್ ಈಶ್ವರ್