ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಏಕವಚನ ಬಳಸಿ ಆಕ್ಷೇಪಾರ್ಹ ಹೇಳಿಕೆ ನೀಡಿದ ಸಂಸದ ಅನಂತ್ ಕುಮಾರ್ ಹೆಗ್ಗಡೆ ವಿರುದ್ದ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆದಿದೆ.
ಬೆಂಗಳೂರಿನ ರೇಸ್ಕೋರ್ಸ್ ರಸ್ತೆಯಲ್ಲಿನ ಪಕ್ಷದ ಕಛೇರಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದ ಕಾಂಗ್ರೆಸಿಗರು ಸಂಸದ ಅನಂತ್ ಕುಮಾರ್ ಹೆಗ್ಗಡೆಯವರನ್ನು ಗಡಿಪಾರು ಮಾಡನೇಕೆಂದು ಒತ್ತಾಯಿಸಿದರು.
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂಸದ ಅನಂತ್ ಕುಮಾರ್ ಹೆಗ್ಗಡೆಯವರ ಹೇಳಿಕೆಯನ್ನು ಖಂಡಿಸಿದ್ದಾರೆ.ಅವರು ಇಷ್ಟು ದಿನ ವಿಶ್ರಾಂತಿಯಲ್ಲಿದ್ದರು.ಈಗ ಬಂದು ಏನೇನೋ ಮಾತಾಡುತ್ತಿದ್ದಾರೆ.ಅವರಿಗೆ ಜನರೇ ಉತ್ತರ ನೀಡುತ್ತಾರೆ ಎಂದು ಡಿಕೆಶಿ ಹೇಳಿದರು.
ಇನ್ನು ಸಂಸದರ ವಿರುದ್ದ ಕುಮುಟಾ ಪೋಲಿಸರಿಂದ ಸುಮೋಟೋ ಕೇಸ್ ದಾಖಲಾಗಿದೆ.