ಬೆಂಗಳೂರು : ಇಂದು ವರ್ಷದ ಮೊದಲ ಸುಗ್ಗಿ ಹಬ್ಬವಾದ ಮಕರ ಸಂಕ್ರಾಂತಿ ನಾಳಿನಲ್ಲಿಡೆ ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಗುತ್ತಿದ್ದು ಅದೇ ರೀತಿಯಾಗಿ ಬೆಂಗಳೂರಿನ ಗವಿ ಗಂಗಾಧರೇಶ್ವರ ದೇವಸ್ಥಾನವು ಇಂದು ವಿಶೇಷ ವಿಸ್ಮಯಕ್ಕೆ ಕಾರಣವಾಗಲಿದೆ.
ಏಕೆಂದರೆ ಸಂಕ್ರಾಂತಿ ಹಬ್ಬದ ದಿನದಂದು ಸೂರ್ಯನು ದಕ್ಷಿಣ ಪಥದಿಂದ ಉತ್ತರಪದಕೆತನ ದಿಕ್ಕನ್ನು ಬದಲಿಸುವ ವೇಳೆ ಈ ಒಂದು ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿರುವ ಶಿವನ ಮೂರ್ತಿಗೆ ಸೂರ್ಯನ ಕಿರಣಗಳು ಸ್ಪರ್ಶಿಸಲಿವೆ. ವರ್ಷಕ್ಕೆ ಸಂಕ್ರಾಂತಿ ಹಬ್ಬದ ದಿನದಂದೇ ಈ ಒಂದು ವಿಸ್ಮಯ ಹಾಗೂ ಕೌತುಕ ಘಟನೆ ಜೋಳದಲ್ಲಿದ್ದು ಇದನ್ನು ಕಣ್ತುಂಬಿಕೊಳ್ಳಲು ಅಪಾರ ಪ್ರಮಾಣದ ಭಕ್ತಾದಿಗಳು ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.
ಇಂದು ಸಂಜೆ 5.20 ರಿಂದ 5.23 ನಿಮಿಷದ ವರೆಗೆ ಸೂರ್ಯರಶ್ಮಿ ಶಿವನಿಗೆ ನಮಿಸಲಿದೆ. ಲಿಂಗಭಾಗದಲ್ಲಿ ಎಷ್ಟು ಸಮಯ ಸೂರ್ಯರಶ್ಮಿ ಇರುತ್ತೆ ಅನ್ನೋದರ ಮೇಲೆ ಭವಿಷ್ಯ ಹೇಳಲಾಗುವುದು. ಇನ್ನು ದೇವಸ್ಥಾನದಲ್ಲಿ ಬೆಳಿಗ್ಗೆ 5 ಗಂಟೆಗೆ ವಿಶೇಷಪೂಜೆ, ಅಲಂಕಾರ ಮಾಡಲಾಗುವುದು. ಬೆಳಿಗ್ಗೆ 5 ಗಂಟೆಯಿಂದ ಮಧ್ಯಾಹ್ನ 12.30 ರವರೆಗೆ ದೇವಸ್ಥಾನ ತೆರೆದಿರಲಿದೆ. ನಂತರ ದೇವರ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶವಿರುವುದಿಲ್ಲ. ಸಂಜೆ ಸೂರ್ಯರಶ್ಮಿ ಲಿಂಗವನ್ನ ಸ್ಪರ್ಶಿಸುವುದರ ನಂತರ ಭಕ್ತಾಧಿಗಳಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತೆ.
ಭಕ್ತಾಧಿಗಳು ವಿಸ್ಮಯವನ್ನು ಕಣ್ತುಂಬಿಕೊಳ್ಳಲು ದೇವಾಲಯದ ಹೊರಭಾಗದಲ್ಲಿ ಎಲ್ಇಡಿ ವ್ಯವಸ್ಥೆ ಮಾಡಲಾಗಿದೆ. 2 ಎಲ್ಇಡಿ ಹಾಗೂ 5 ಟಿವಿಗಳ ವ್ಯವಸ್ಥೆ ಇರಲಿದೆ. ಇನ್ನು ದೇವರನ್ನ ಸೂರ್ಯರಶ್ಮಿ ಸ್ಪರ್ಶಿಸುವ ವೇಳೆ ಅರ್ಚಕರನ್ನ ಬಿಟ್ಟರೆ ಇನ್ನುಳಿದ ಯಾರಿಗೂ ದೇವಸ್ಥಾನ ಪ್ರವೇಶ ಇರುವುದಿಲ್ಲ ಎಂದು ಗವಿಗಂಗಾಧರೇಶ್ವರ ದೇವಾಲಯದ ಪ್ರಧಾನ ಅರ್ಚಕರು ತಿಳಿಸಿದ್ದಾರೆ.