ಕಲಬುರಗಿ: ಇಲ್ಲಿನ ಮಾಲಗತ್ತಿ ರಸ್ತೆಯಲ್ಲಿರುವ ಮೌಲಾನಾ ಆಜಾದ್ ಮಾಡೆಲ್ ಆಂಗ್ಲ ಮಾಧ್ಯಮ ಶಾಲೆಯ ಹಾಗೂ ಪ್ರಾಂಶುಪಾಲ ಜೋಹರ ಜಬೀನ ಅವರ ವಿರುದ್ಧ ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನಿಂಗ್ ಮಾಡಿಸಿದ ಆರೋಪ ಕೇಳಿ ಬಂದಿದೆ.
1 ವರ್ಷದಿಂದ ಪ್ರಾಂಶುಪಾಲರು ಮಕ್ಕಳನ್ನು ಮನೆಗೆಲಸಕ್ಕೆ ಕರೆದೊಯ್ದಿದ್ದಾರೆ. ಕೆಲಸ ಮಾಡದಿದ್ದರೆ ಗದರುವುದು, ಹೊಡೆಯುವುದು ಮಾಡುತ್ತಿದ್ದಾರೆ ಅಂಥ ಪ್ರಾಂಶುಪಾಲ ಜೋಹರ ಜಬೀನ ಅವರ ವಿರುದ್ಧ ಪೋಷಕರು ಆರೋಪಿಸಿದ್ದು, ಪೊಲೀಸರಿಗೆ ದೂರು ನೀಡಿದ್ದಾರೆ. ವಿದ್ಯಾರ್ಥಿಗಳನ್ನು ಶೌಚಾಲಯ ಕ್ಲಿನಿಂಗ್ ಮಾಡಲು ಬಳಸಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ತಮ್ಮ ಮನೆಯ ಕೆಲಸಕ್ಕೂ ಶಾಲಾ ಮಕ್ಕಳನ್ನು ಬಳಸಿಕೊಂಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.