ಬೆಂಗಳೂರು: ನಾಡಿನಾದ್ಯಂತ ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿ ಸಂಭ್ರಮ ಜೋರಾಗಿದೆ. ಈ ನಡುವೆ ನಾಡಿನ ಜನತಗೆ ರಾಜಕಾರಣಿಗಳು, ಸಿನಿಮಾಮಂದಿ ಸೇರಿದಂತೆ ಹಲವು ಮಂದಿ ಶುಭಕೋರುತ್ತಿದ್ದಾರೆ. ಈ ನಡುವೆ ಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಕನ್ನಡದಲ್ಲೇ ಶುಭಾಶಯ ಕೋರಿದ್ದಾರೆ.
ಹಬ್ಬದ ಶುಭ ಸಂದೇಶ ಹಂಚಿಕೊಂಡಿರುವ ಪ್ರಧಾನಿ ಮೋದಿ, ದೇಶದ ಜನತೆಗೆ ಸಂಕ್ರಾಂತಿ ಹಬ್ಬದ ಶುಭಾಶಯಗಳು. ಪವಿತ್ರ ಸಂಕ್ರಾಂತಿ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸಂತಸ ಮತ್ತು ಅಮೃದ್ಧಿಯನ್ನು ತರಲಿ. ಸುಗ್ಗಿಯ ಕಾಲವು ಸಮೃದ್ಧಿ ಮತ್ತು ಸಂತೋಷದಿಂದ ತುಂಬಲಿ ಎಂದು ಹಾರೈಸುತ್ತೇನೆ. ಮುಂಬರುವ ದಿನಗಳಲ್ಲಿ ನಿಮ್ಮ ಎಲ್ಲಾ ಆಕಾಂಕ್ಷೆಗಳು ಈಡೇರಲಿ ಎಂದು ಬರೆದುಕೊಂಡಿದ್ದಾರೆ. ಇದರೊಂದಿಗೆ ರಾಜ್ಯದ ಗಣ್ಯಮಾನ್ಯರೂ ಹಬ್ಬಕ್ಕೆ ಶುಭಹಾರೈಸಿದ್ದಾರೆ.
ಸಂಕ್ರಾಂತಿಯ ಶುಭಾಶಯಗಳು. pic.twitter.com/6F3gZT7qmD
— Narendra Modi (@narendramodi) January 15, 2024