ಉತ್ತರ ಕನ್ನಡ : ಸಿಎಂ ವಿರುದ್ಧ ಅನಂತಕುಮಾರ್ ಹೆಗಡೆ ಏಕವಚನದಲ್ಲಿ ವಾಗ್ದಾಳಿ ವಿಚಾರವಾಗಿ ಕಾಂಗ್ರೆಸ್ ಶಾಸಕ ಭೀಮಣ್ಣ ನಾಯಕ್ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಆಕ್ರೋಶ ಹೊರಹಾಕಿದ್ದು ಅಧಿಕಾರಕ್ಕೆ ಬರಲು ಸಮಯಕ್ಕೆ ತಕ್ಕಂತೆ ಹಿಂದುತ್ವ ಬಳಸಿಕೊಳ್ಳುತ್ತಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಈ ವಿಷಯವಾಗಿ ಸುದ್ದಿಗಾರರು ಕೇಳಿರುವ ಪ್ರಶ್ನೆಗೆ ಪ್ರತಿಕ್ರಿಸಿದ ಅವರು ಕಾಂಗ್ರೆಸ್ ನಾಯಕರುಗಳ ಬಗ್ಗೆ ಮಾತನಾಡುವ ನೈತಿಕತೆ ಅವರಿಗಿಲ್ಲ. ಅನಂತ್ ಕುಮಾರ್ ಹೆಗಡೆ ಕ್ಷೇತ್ರಕ್ಕೆ ಏನು ಕೊಡುಗೆ ಕೊಟ್ಟಿದ್ದಾರೆ? ಸಿದ್ದರಾಮಯ್ಯ ಸರ್ಕಾರ ಎದುರಿಸಲು ಬಿಜೆಪಿಯವರಿಗೆ ಆಗುತ್ತಿಲ್ಲ. ಎದುರಿಸಲು ಆಗದಿದ್ದಾಗ ಇಂತಹ ಮಾತುಗಳು ಬರುವುದು ಸಹಜ ಎಂದರು.
ಲೋಕಸಭಾ ಚುನಾವಣೆಯ ವೇಳೆ ಇಲ್ಲ ಸಲ್ಲದ ಹೇಳಿಕೆಗಳನ್ನು ಕೊಡುತ್ತಾರೆ. ಮೇಸ್ತ ವಿಷಯ ಇಟ್ಟುಕೊಂಡು ಜಿಲ್ಲೆಯಲ್ಲಿ ದಂಗೆ ಎಬ್ಬಿಸಿದ್ದರು. ಅನೇಕರು ಇಂದಿಗೂ ಕೋರ್ಟ್ ಕಚೇರಿ ಅಂತ ಅಲೆದಾಡುತ್ತಿದ್ದಾರೆ ಅಧಿಕಾರಕ್ಕೆ ಬರಲು ಸಮಯಕ್ಕೆ ತಕ್ಕಂತೆ ಹಿಂದುತ್ವ ಬಳಸಿಕೊಳ್ಳುತ್ತಾರೆ ಚುನಾವಣೆ ಸಮೀಪವಿದ್ದಾಗ ಹಿಂದುತ್ವದ ಬಗ್ಗೆ ಎಲ್ಲಿಲ್ಲದ ಅಭಿಮಾನ ಮೂಡುತ್ತದೆ. ಹಿಂದೂ ಧರ್ಮ ಕಾಪಾಡುವುದು ದೇಶದ ಪ್ರತಿಯೊಬ್ಬರ ಕರ್ತವ್ಯವಾಗಿದೆ. ಎಂದು ಶಾಸಕ ಭೀಮಣ್ಣ ನಾಯಕ್ ವಾಗ್ದಾಳಿ ನಡೆಸಿದರು.
ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಕಾಂಗ್ರೆಸ್ ಪಕ್ಷ ಸೂಚಿಸಿದರೆ ನಾನು ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಸ್ಪರ್ಧಿಸಲು ಸಿದ್ಧನಿದ್ದೇನೆ ಎಂದು ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಶಾಸಕ ಭೀಮಣ್ಣ ನಾಯಕ್ ಹೇಳಿಕೆ ನೀಡಿದ್ದಾರೆ.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪಕ್ಷ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ಬದ್ಧನಾಗಿದ್ದೇನೆ.ನಾನು ಬಿಜೆಪಿಯವರಿಗೆ ಶರಣಾಗಿದ್ದೇನೆ ಎಂಬುವುದು ಊಹಾಪೋಹವಾಗಿದೆ.ಶಾಸಕ ಸ್ಥಾನ ಬಿಟ್ಟು ಲೋಕಸಭೆಗೆ ಸ್ಪರ್ಧಿಸಲು ಸೂಚನೆ ನೀಡಿದರೆ ಸ್ಪರ್ಧಿಸುತ್ತೇನೆ.ಮೂರು ಚುನಾವಣೆಯಲ್ಲಿ ನಾನು ಸೋತರು ಪಕ್ಷವನ್ನು ಸಂಘಟನೆ ಮಾಡಿದ್ದೇನೆ ಎಂದು ಶಾಸಕ ಭೀಮಣ್ಣ ನಾಯಕ್ ಹೇಳಿದರು.