ಚಿಕಮಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿಯ ಸಂಸದ ಅನಂತ್ ಕುಮಾರ್ ಹೆಗಡೆ ಅವರು ಏಕವಚನದಲ್ಲಿ ವಾಗ್ದಾಳಿ ನಡೆಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಶಾಸಕ ಸಿ ಟಿ ರವಿ ಪ್ರತಿಕ್ರಿಯೆ ನೀಡಿದ್ದು, ಸಂಸದ ಅನಂತ್ ಕುಮಾರ್ ಹೆಗಡೆ ಅವರ ಹೇಳಿಕೆಯನ್ನು ನಾನು ಸಮರ್ಥಿಸುವುದಿಲ್ಲ ಎಂದು ತಿಳಿಸಿದರು.
ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ವಿರುದ್ಧ ಏಕವಚನ ಪದ ಬಳಕೆಗೆ ಅಸಮಾಧಾನ ಹಿರಿಯರಿಗೆ ಮತ್ತು ಆಸ್ಥಾನಕ್ಕೆ ಗೌರವ ಕೊಡಬೇಕು.ಅನಂತ್ ಕುಮಾರ್ ಹೇಳಿಕೆಯನ್ನು ನಾನು ಸಮರ್ಥಿಸುವುದಿಲ್ಲ ಎಂದು ಚಿಕ್ಕಮಗಳೂರಲ್ಲಿ ಮಾಜಿ ಸಚಿವ ಸಿಟಿ ರವಿ ಹೇಳಿಕೆ ನೀಡಿದ್ದಾರೆ. ಏಕವಚನದಲ್ಲಿ ಮಾತನಾಡಿರುವುದನ್ನು ನಾನು ಸಮರ್ಥಿಸುವುದಿಲ್ಲ ದೇಗುಲ ಗಂಸ ಮಾಡಿ ಮಸೀದಿ ನಿರ್ಮಿಸಿದ್ದು ನಿಜ ಎಂದು ಅವರು ಹೇಳಿದರು.
ಲೋಕಸಭಾ ಟಿಕೆಟ್ ಬಗ್ಗೆ ನಿರ್ಧಾರ ಮಾಡುವುದು ಹೈಕಮಾಂಡ್, ಟಿಕೆಟ್ ಕುರಿತಂತೆ ಪಕ್ಷ ಸೂಕ್ತ ನಿರ್ಣಯ ತೆಗೆದುಕೊಳ್ಳುತ್ತದೆ. ಯಾರೇ ಅಭ್ಯರ್ಥಿಯಾದ ನಾವು ಅವರಿಗೆ ಬೆಂಬಲ ನೀಡುತ್ತೇವೆ. ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಮಂತ್ರಿ ಆಗುವುದು ನಿಶ್ಚಿತ. ಅಭಿವೃದ್ಧಿ ಮತ್ತು ದೇಶದ ಭದ್ರತೆಯನ್ನು ಮುಂದಿಟ್ಟು ಮತ ಕೇಳುತ್ತೇವೆ ಎಂದು ಮಾಜಿ ಶಾಸಕ ಸಿ ಟಿ ರವಿ ತಿಳಿಸಿದರು.