ನವದೆಹಲಿ: ಹಿಟ್-ಅಂಡ್-ರನ್ ಪ್ರಕರಣಗಳಿಗೆ ಕಠಿಣ ದಂಡವನ್ನು ಹಿಂಪಡೆಯುವಂತೆ ಒತ್ತಾಯಿಸಿ ಟ್ರಕ್ಕರ್ಗಳು ಮತ್ತು ಸಾಗಣೆದಾರರು ದೇಶಾದ್ಯಂತ ನಡೆಸಿದ ಮುಷ್ಕರವು ಕರ್ನಾಟಕದಲ್ಲಿ ನಾಳೆ ಶುರುವಾಗಲಿದೆ. ಮುಷ್ಕರದಿಂದ ಸಾರ್ವಜನಿಕ ಸೇವೆಗಳು ಮತ್ತು ಪೂರೈಕೆ ಸರಪಳಿಯಲ್ಲಿ ಅಡಚಣೆಯನ್ನು ಉಂಟುಮಾಡಲಿದೆ. ಸೋಮವಾರದಿಂದ ನಡೆಯುತ್ತಿರುವ ಮುಷ್ಕರವು ಸಂಚಾರ ಅಸ್ತವ್ಯಸ್ತತೆ, ಎಲ್ಪಿಜಿ ಸಿಲಿಂಡರ್ಗಳ ಕೊರತೆ, ತರಕಾರಿ ಬೆಲೆ ಏರಿಕೆ ಮತ್ತು ಸಾರ್ವಜನಿಕ ಸಾರಿಗೆಯಲ್ಲಿ ವಿಳಂಬ, ಇಂಧನ ಮತ್ತು ಅಗತ್ಯ ವಸ್ತುಗಳ ಮೇಲೆ ಪರಿಣಾಮ ಬೀರಲಿದೆ.
ಜನವರಿ 17 ರಿಂದ ಕರ್ನಾಟಕದಾದ್ಯಂತ ಟ್ರಕ್ ಚಾಲಕರು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆ ಎಂದು ಕರ್ನಾಟಕ ಲಾರಿ ಮಾಲೀಕರ ಸಂಘ ಹೇಳಿದೆ. ಹೊಸ ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) ಅಡಿಯಲ್ಲಿ ಹಿಟ್ ಅಂಡ್ ರನ್ ಪ್ರಕರಣಗಳಿಗೆ ಕಠಿಣ ಕಾನೂನುಗಳ ವಿರುದ್ಧ ಪ್ರತಿಭಟಿಸಲು ಮುಷ್ಕರ ನಡೆಸಲು ತೀರ್ಮಾನಿಸಲಾಗಿದೆ. ಹೊಸ ಕಾನೂನು ಪ್ರಕಾರ, ರಸ್ತೆಯಲ್ಲಿ ಚಲಿಸುವಾಗ ನಮ್ಮ ವಾಹನಗಳಿಗೆ ಯಾರಾದರೂ ಬಂದು ಅಕಸ್ಮಾತಾಗಿ ಡಿಕ್ಕಿ ಹೊಡೆದರೆ ಹಾಗೂ ನಮ್ಮ ಚಾಲಕರು ವಾಹನದಲ್ಲಿ ಏನಾದರೂ ತೊಂದರೆ ಉಂಟಾಗಿ ಎದುರಿನ ವಾಹನಕ್ಕೆ ಡಿಕ್ಕಿ ಹೊಡೆದು ಅದರಲ್ಲಿದ್ದ ಪ್ರಯಾಣಿಕರು ಮೃತಪಟ್ಟರೆ, ಚಾಲಕರನ್ನು 10 ವರ್ಷಗಳ ವರೆಗೆ ಜೈಲು ಶಿಕ್ಷೆಗೆ ಗುರಿಪಡಿಸುವುದು ಹಾಗೂ 7 ಲಕ್ಷ ರೂ.ವರೆಗೆ ದಂಡ ಪಾವತಿಸಬೇಕಾಗುತ್ತದೆ.