*ಉಮಾ
ಬೆಂಗಳೂರು: ರಾಜ್ಯದ ಪೊಲೀಸರಿಗೆ ಸಿಹಿ ಸುದ್ದಿಯನ್ನು ಸಿಎಂ ಸಿದ್ದರಾಮಯ್ಯ ಅವರು ನೀಡಿದ್ದಾರೆ. ಅವರು ಇಂದು ನಗರದಲ್ಲಿ ಕರ್ನಾಟಕ ಏಕೀಕರಣದ ಸುವರ್ಣ ಮಹೋತ್ಸವದ ಅಂಗವಾಗಿ ಪೊಲೀಸ್ ಇಲಾಖೆಗೆ ಮುಖ್ಯಮಂತ್ರಿಗಳಿಂದ ಮಹತ್ವದ ಘೋಷಣೆ ಮಾಡಿದ್ದು ರಾಜ್ಯದ ಎಲ್ಲಾ ಪೊಲೀಸ್ ಸಿಬ್ಬಂದಿಗೆ ಬೆಳ್ಳಿ ಪದಕ ನೀಡಲಾಗುವುದು. ಇದಲ್ಲದೇ ರಾಜ್ಯದ ಎಲ್ಲಾ ಪೊಲೀಸರ ವೈದ್ಯಕೀಯ ವೆಚ್ಚ 1000 ದಿಂದ 1500 ಕ್ಕೆ ಹೆಚ್ಚಿಸಲಾಗುವುದು ಅಂತ ತಿಳಿಸಿದರು.
ಇನ್ನೂ CEN ಠಾಣಾಧಿಕಾರಿಗಳ ಹುದ್ದೆಯನ್ನು ACP ಮತ್ತು DCP ಮಟ್ಟಕ್ಕೆ ಉನ್ನತೀಕರಣ ಮಾಡಲಾಗುವುದು ಅಂತ ತಿಳಿಸಿದರು. ಇದೇ ವೇಳೇ ಅವರು ಮಾತನಾಡಿ, ಬೆಂಗಳೂರು ನಗರದಲ್ಲಿ 8 ಅಡಿಷನಲ್ DCP ಹುದ್ದೆಗಳನ್ನು ಹೆಚ್ಚುವರಿಯಾಗಿ ಸೃಜಿಸಲಾಗುವುದು ಕೈಗೊಳ್ಳಲಾಗುವುದು ಅಂತ ತಿಳಿಸಿದರು. ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯದ ಪ್ರಕರಣಗಳಿಗೆ ಸಂಪೂರ್ಣ ಕಡಿವಾಣ ಹಾಕಿ. ಶಿಕ್ಷೆ ಪ್ರಮಾಣ ಹೆಚ್ಚಾಗಬೇಕು. ಇಲ್ಲದಿದ್ದರೆ ಡಿಸಿಪಿ ಗಳನ್ನೇ ಈ ವೈಫಲ್ಯಕ್ಕೆ ಹೊಣೆ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಎಚ್ವರಿಸಿದರು. ಕರ್ನಾಟಕ ನಾಮಕರಣಗೊಂಡು, ಏಕೀಕರಣದ 50 ವರ್ಷದ ನೆನಪಿಗಾಗಿ ಸುವರ್ಣ ಪೊಲೀಸ್ ಭವನ ಕಟ್ಟಡ ನಿರ್ಮಾಣಕ್ಕೆ ಬಜೆಟ್ ನಲ್ಲಿ ಹಣ ನೀಡಲಾಗುವುದು. ಖಾಲಿ ಇರುವ ಪೊಲೀಸ್ ಹುದ್ದೆಗಳನ್ನೂ ಭರ್ತಿ ಮಾಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.