ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್, ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಕನ್ಸಲ್ಟೆಂಟ್- COO ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಜನವರಿ 20, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಹಾಕಬೇಕಾಗಿದೆ.
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಬ್ಲಿಕ್ ಪಾಲಿಸಿ & ಮ್ಯಾನೇಜ್ಮೆಂಟ್/ ಎಕನಾಮಿಕ್ಸ್/ ಅಡ್ಮಿನಿಸ್ಟ್ರೇಶನ್ನಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು. ಅಭ್ಯರ್ಥಿಗಳ ವಯಸ್ಸು ಗರಿಷ್ಠ 55 ವರ್ಷ ಮೀರಿರಬಾರದು. ವಾರ್ಷಿಕ ಪ್ಯಾಕೇಜ್ 25 ಲಕ್ಷ ವೇತನವಿರುತ್ತದೆ. ಉದ್ಯೋಗದ ಸ್ಥಳ ಬೆಂಗಳೂರು ಆಗಿದೆ. ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದಾ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್ನ್ನು ಈ ಕೆಳಗೆ ನೀಡಲಾಗಿದೆ. https://fa-erno-saasfaprod1.fa.ocs.oraclecloud.com/hcmUI/CandidateExperience/en/sites/CX_1 online ಮೂಲಕ ಅಪ್ಲೈ ಮಾಡಬಹುದು.