ಮಂಗಳೂರು : ಪಡಿತರ ಚೀಟಿಯಲ್ಲಿ ತನ್ನ ಹೆಸರು ಸೇರಿಸಲು ಆಗದೆ ಹಾಗೂ ಸರ್ಕಾರದ ವಿವಿಧ ಯೋಜನೆಗಳನ್ನು ಲಾಭವನ್ನು ಪಡೆದುಕೊಳ್ಳಲು ಸಾಧ್ಯವಾಗಿದೆ ಇರುವುದರಿಂದ ಕೋಪಗೊಂಡ ಯುವಕನೊಬ್ಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹರಿಬಿಟ್ಟಿದ್ದ ಯುವಕನನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.
ಇದೀಗ ಉತ್ತರ ಕನ್ನಡ ಮೂಲದ ಅನಿಲ್ ಕುಮಾರ್ ಎನ್ನುವ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ ಕಳೆದ 12 ವರ್ಷದಿಂದ ದಕ್ಷಿಣ ಕನ್ನಡ ಜಿಲ್ಲೆಯh ಸೂರತ್ ನಲ್ಲಿ ಅನಿಲ್ ವಾಸವಿದ್ದ ಕ್ಯಾಬ್ ಡ್ರೈವರ್ ಆಗಿ ಆರೋಪಿ ಅನಿಲ್ ಕುಮಾರ್ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗುತ್ತಿದ್ದು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಬಗ್ಗೆ ಅನಿಲ್ ಕುಮಾರ್ ಅಶ್ಲೀಲವಾಗಿ ನಿಂದಿಸಿದ್ದ
ಸಾಮಾಜಿಕ ಜಾಲತಾಣದಲ್ಲಿ ಸಿಎಂ ಹಾಗೂ ಡಿಸಿಎಂ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಪೋಸ್ಟ್ ಹರಿದಾಡುತ್ತಿದ್ದಂತೆ ಅವಹೇಳನ ಮಾಡಿದವನ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ NSUI ಘಟಕದ ಅಧ್ಯಕ್ಷ ಸುಹಾನ್ ಆಳ್ವಾ ಅವರು ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ದೂರು ಸಲ್ಲಿಸಿದ್ದಾರೆ. ಡಿಸಿಪಿ ಸಿದ್ದಾರ್ಥ್ ಗೋಯಲ್ ಅವರು ಎನ್ಎಸ್ಯುಐ ದೂರು ಸ್ವೀಕರಿಸಿದ್ದಾರೆ. ಈ ಸಂಬಂಧ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.