ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಭಾಗವಹಿಸಿ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದ ಮೊಬೈಲ್ ಲ್ಯಾಬ್, ವಿಧಿ ವಿಜ್ಞಾನ ಮೊಬೈಲ್ ಲ್ಯಾಬ್ ವಾಹನ ಮೊಬೈಲ್ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್ ವಾಹನ ದ ಉನ್ನತೀಕರಣದ ಕಾರ್ಯಕ್ಷಮತೆಯನ್ನು ಪರಿಶೀಲಿಸಿದರು.
ಅಂದ ಹಾಗೇ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ‘ಪೊಲೀಸ್ ಮಿತ್ರ ಚಾಟ್ ಬಾಟ್’ ಎಂಬ ಸೇವೆಯನ್ನು ಅನುಷ್ಠಾನಗೊಳಿಸುತ್ತಿದೆ. ಇದು ಸಾರ್ವಜನಿಕರ ವಿವಿಧ ಪ್ರಶ್ನೆಗಳಿಗೆ ಶೀಘ್ರ ಮತ್ತು ಸ್ಪಷ್ಟವಾಗಿ ಉತ್ತರವನ್ನು ನೀಡುತ್ತದೆ. ಈ ಡಿಜಿಟಲ್ ಸಂಪರ್ಕ ಸಂವಹನವನ್ನು ರಾಜ್ಯ ಪೊಲೀಸ್ ಅಧಿಕೃತ ಜಾಲತಾಣ KSP ಮೊಬೈಲ್ ಅಪ್ಲಿಕೇಶನ್ ನಲ್ಲಿ ಸಂಯೋಜಿಸಲಾಗಿದ್ದು, ನಾಗರಿಕರು ಸದ್ಬಳಕೆ ಮಾಡಿಕೊಳ್ಳಬಹುದು. ಜನರ ಸಮಸ್ಯೆಗಳಿಗೆ ಉತ್ತರವಾಗಿ ‘ಪೊಲೀಸ್ ಮಿತ್ರ ಚಾಟ್ ಬಾಟ್’ ಲಭ್ಯವಿದೆ.