ಬೆಂಗಳೂರು: ಪರಿಶಿಷ್ಟ ಸಮುದಾಯದವರು ಎಂ.ಎಸ್.ಎಂ.ಇ ಘಟಕಗಳನ್ನು ಸ್ಥಾಪಿಸಲು ಕೆ.ಎಸ್.ಎಫ್.ಸಿ ಹಾಗೂ ರಾಷ್ಟ್ರೀಕೃತ/ಜಿಲ್ಲಾ ಸಹಕಾರಿ/ಅಪೆಕ್ಸ್ ಬ್ಯಾಂಕುಗಳಿಂದ ಪಡೆಯುವ ಸಾಲಕ್ಕೆ ಶೇ.4 ರಷ್ಟು ಬಡ್ಡಿ ಸಹಾಯಧನ ನೀಡಲಾಗುತ್ತದೆ.
ಸಮಾಜ ಕಲ್ಯಾಣ ಇಲಾಖೆಯಿಂದ 50 ಪರಿಶಿಷ್ಟ ಜಾತಿಯ ಮಹಿಳಾ ಪದವೀಧರರಿಗೆ ಉದ್ಯಮಗಳನ್ನು ಸ್ಥಾಪಿಸಲು ಪೂರಕವಾಗುವಂತೆ ಪ್ರತಿಷ್ಠಿತ ಐ.ಐ.ಎಂ ಬೆಂಗಳೂರು, ಇವರ ಮೂಲಕ ಉದ್ಯಮಶೀಲತಾ ತರಬೇತಿಗಾಗಿ ಅರ್ಜಿಗಳನ್ನು ಇಲಾಖೆಯ ಅಧಿಕೃತ ಜಾಲತಾಣ: WWW.sw.kar.nic.in ನಲ್ಲಿ ಆನ್‌ಲೈನ್ ಮೂಲಕ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಪಲಶಿಷ್ಟ ಜಾತಿಗೆ ಸೇಲದ್ದು, ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಉದ್ಯಮಗಳನ್ನು ಸ್ಥಾಪಿಸುವ ಉದ್ದೇಶವಿರುವವರು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು.
* ವಯೋಮಿತಿ ಕನಿಷ್ಠ – 21 ವರ್ಷಗಳು ಗಲಷ್ಠ – 45 ವರ್ಷಗಳು.
* ತರಬೇತಿಯ ಅವಲ – 5 ಲಂದ 6 ತಿಂಗಳು.
* 8 ದಿನದ ತರಬೇತಿಯು ಐ.ಐ.ಎಂ-ಬೆಂಗಳೂರು ಸಂಸ್ಥೆ ಕ್ಯಾಂಪಸ್‌ನಲ್ಲಿ ಹಾಗೂ MOOC ಮುಖಾಂತರ ನೀಡಲಾಗುವುದು. * ಐ.ಐ.ಎಂ – ಬೆಂಗಳೂರು ರವರು ನಡೆಸುವ ಸ್ತ್ರೀನಿಂಗ್ ಟೆಸ್ಟ್ ಮುಖಾಂತರ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. + ಶೇ. 100 ರಷ್ಟು ಹಾಜರಾತಿ ಕಡ್ಡಾಯ.
ಸ್ಟ್ರೀನಿಂಗ್ ಟೆಸ್ಟ್ ಏನಾಂಕ 11.02.2024 ರಂದು ಐ.ಐ.ಎಂ-ಬೆಂಗಳೂರು ಕ್ಯಾಂಪಸ್‌ನಲ್ಲಿ ನಡೆಸಲಾಗುವುದು. ತರಬೇತಿ ಪಡೆಯಲು ಇಚ್ಚಿಸುವವರು ಆನ್‌ಲೈನ್ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ದಿನಾಂಕ: 17.01.2024 ರಿಂದ ದಿನಾಂಕ: 31.01.2024 ರ ಸಂಜೆ 5 ಗಂಟೆಯ ವರಗೆ ಸಲ್ಲಿಸತಕ್ಕದ್ದು. ಆನ್‌ಲೈನ್ ಅರ್ಜಿಯು ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ಜಾಲತಾಣ WWw.sw.kar.nic.in ನಲ್ಲಿ ಲಭ್ಯವಿರುತ್ತದೆ.