ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಹಾಗೂ ಸಂಗೊಳ್ಳಿ ರಾಯಣ್ಣ ಮೂರ್ತಿ ಉದ್ಘಾಟನೆಗೊಳಿಸಿ ಮಾತನಾಡಿದ ಅವರು ರಾಯಣ್ಣ ಸೈನಿಕ ಶಾಲೆಯಲ್ಲಿ ಶೇ 65ರಷ್ಟು ಸೀಟು ಕನ್ನಡಿಗರಿಗೆ ಮೀಸಲು ಇಡಲು ಚಿಂತನೆ ನಡೆಸಿದ್ದೇವೆ ಎಂದು ತಿಳಿಸಿದ್ದಾರೆ.
ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಕ್ರಾಂತಿವೀರ ರಾಯಣ್ಣ ಸೈನಿಕ ಶಾಲೆಯಲ್ಲಿ ಶೇ 65ರಷ್ಟು ಸೀಟು ಕನ್ನಡಿಗರಿಗೆ ಮೀಸಲು ಇಡಲು ಚಿಂತನೆ ನಡೆಸಿದ್ದೇವೆ. ಇನ್ನುಳಿದ 35ರಷ್ಟು ಸೀಟು ಬೇರೆ ಭಾಷೆ ಮಕ್ಕಳಿಗೆ ಮೀಸಲು ಮಾಡುವ ಚಿಂತನೆ ಇದೆ. ವಿಜಯಪುರದ ಸೈನಿಕ ಶಾಲೆಯ ಮಾದರಿ ಇಲ್ಲಿಯೂ ವ್ಯವಸ್ಥೆ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯ ಉದ್ಘಾಟನೆ ಹಾಗೂ ಸಂಗೊಳ್ಳಿ ರಾಯಣ್ಣ ಮೂರ್ತಿ ಅನಾವರಣಗೊಳಿಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸೈನಿಕ ಶಾಲೆಗೆ ಅನುದಾನ ಕೊಟ್ಟಿದ್ದು ನಾನೇ. ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಗೆ 110 ಎಕರೆ ಭೂಮಿಯನ್ನು ಮಂಜೂರು ಮಾಡಿಸಿದ್ದೇನು. ಈಗ ನಾನೇ ಈ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಉದ್ಘಾಟಿಸುತ್ತಿರುವುದು ಖುಷಿಯ ಸಂಗತಿ. ಗುಣಮಟ್ಟದ ಶಿಕ್ಷಣದೊಂದಿಗೆ ದೇಶಪ್ರೇಮವನ್ನು ಸೈನಿಕ ಶಾಲೆಯ ಮಕ್ಕಳಿಗೆ ಬೆಳೆಸಲಾಗುವುದು. ಇಲ್ಲಿ ಕಲಿತವರು ಸೇನೆಗೆ ಸೇರುವ ಅವಕಾಶವಿದೆ ಎಂದು ತಿಳಿಸಿದರು.
ಲೋಕಸಭೆ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನ ಗೆದ್ದರೆ ಸಿದ್ದರಾಮಯ್ಯನವರೇ ಪೂರ್ಣಾವಧಿ ಸಿಎಂ ಎಂಬ ಡಾ. ಯತೀಂದ್ರ ಅವರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿಎಂ, ಮುಖ್ಯಮಂತ್ರಿಯಾಗಿ ಮುಂದುವರೆಯುವ ಬಗ್ಗೆ ತೀರ್ಮಾನವನ್ನು ನಾನು ಮಾಡಲ್ಲ. ಅವರು (ಯತೀಂದ್ರ) ಮಾಡಲ್ಲ. ಸಿಎಂ ಸ್ಥಾನದಲ್ಲಿ ಮುಂದುವರಿಕೆ ಕುರಿತ ತೀರ್ಮಾನವನ್ನು ಹೈಕಮಾಂಡ್ ತೆಗೆದುಕೊಳ್ಳಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಮಹಾರಾಷ್ಟ್ರದ ಆರೋಗ್ಯ ವಿಮೆ ಕರ್ನಾಟಕದ 865 ಗ್ರಾಮಗಳಲ್ಲಿ ಜಾರಿಗೊಳಿಸಿರುವ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಈಗಾಗಲೇ ಮಹಾರಾಷ್ಟ್ರದ ಆರೋಗ್ಯ ವಿಮೆ ಯೋಜನೆ ಜಾರಿ ತಡೆಗೆ ಕ್ರಮ ವಹಿಸಲಾಗಿದೆ. ಮುಖ್ಯ ಕಾರ್ಯದರ್ಶಿ ಜೊತೆಗೆ ಚರ್ಚಿಸಿರುವೆ ಎಂದು ಸ್ಪಷ್ಟಪಡಿಸಿದರು.
ಮುಖ್ಯಮಂತ್ರಿ @siddaramaiah ಅವರು ಇಂದು ಬೈಲಹೊಂಗಲ ತಾಲ್ಲೂಕಿನಲ್ಲಿ ಸೈನಿಕ ಶಾಲೆ ಉದ್ಘಾಟನೆ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದರು.
ಕರ್ನಾಟಕದ ಗಡಿ ಭಾಗದ 865 ಗ್ರಾಮಗಳಲ್ಲಿ ಮಹಾರಾಷ್ಟ್ರ ಸರ್ಕಾರ ಆರೋಗ್ಯ ವಿಮೆ ಜಾರಿ ಮಾಡಲು ಮುಂದಾಗಿರುವ ಬಗ್ಗೆ ರಾಜ್ಯ ಸರ್ಕಾರವು ಅಗತ್ಯ ಕ್ರಮ ಕೈಗೊಂಡಿದೆ. ಮಹಾರಾಷ್ಟ್ರ… pic.twitter.com/K9zKMcIAYY
— CM of Karnataka (@CMofKarnataka) January 17, 2024