ಬೆಳಗಾವಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯಲ್ಲಿ ಶೇ 65ರಷ್ಟು ಸೀಟುಗಳನ್ನು ಕರ್ನಾಟಕದ ಮಕ್ಕಳಿಗೆ ಮೀಸಲಿಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಘೋಷಿಸಿದ್ದಾರೆ.
ತಾಲೂಕಿನ ಸಂಗೊಳ್ಳಿ ರಾಯಣ್ಣ ವಸತಿ ಶಾಲೆ ಉದ್ಘಾಟಿಸಿ ಮಾತನಾಡಿದ ಅವರು, ”ವಿಜಯಪುರ ಸೈನಿಕ ಶಾಲೆಯಲ್ಲಿ ಈಗಾಗಲೇ ಶೇ 65ರಷ್ಟು ಸೀಟುಗಳನ್ನು ರಾಜ್ಯದ ವಿದ್ಯಾರ್ಥಿಗಳಿಗೆ ಮೀಸಲಿಡಲಾಗಿದೆ ಎಂದರು.
ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಸಂಗೊಳ್ಳಿ ರಾಯಣ್ಣ ಉತ್ಸವದಲ್ಲಿ ಮಾತನಾಡಿದ ಅವರು, ಸಿಪಾಯಿ ದಂಗೆಗೂ ಮೊದಲು ಟಿಪ್ಪು ಸುಲ್ತಾನ್, ವೆಂಕಟಪ್ಪ ನಾಯಕ, ಕಿತ್ತೂರು ಚೆನ್ನಮ್ಮ, ರಾಯಣ್ಣ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದರು. ಇದನ್ನು ನಾವು ಯಾರೂ ಮರೆಯಲು ಸಾಧ್ಯವಿಲ್ಲ ಎಂದು ಪರೋಕ್ಷವಾಗಿ ಬಿಜೆಪಿಯವರ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.