ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ ಎಂದು ತಿಳಿದುಬಂದಿದೆ.
ವಿಧಾನಸೌಧದಲ್ಲಿ ಇಂದು ಸಿಎಂ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಂಪುಟ ಸಭೆಯಲ್ಲಿ ಇಂದು ಒಳ ಮೀಸಲಾತಿ ಬಗ್ಗೆ ಚರ್ಚೆ ಸಾಧ್ಯತೆ ಎನ್ನಲಾಗುತ್ತಿದೆ. ಅಲ್ಲದೆ ಸಂವಿಧಾನದ ಅನುಚ್ಛೇದ 341 ಕ್ಕೆ ತಿದ್ದುಪಡಿ ತರುವ ಬಗ್ಗೆ ಚರ್ಚೆ ನಡೆಸಲಾಗುತ್ತದೆ.ಕೇಂದ್ರಕ್ಕೆ ಶಿಫಾರಸು ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಅಲ್ಲದೆ ಸಂಪುಟ ಸಭೆಯಲ್ಲಿ ಬಸವಣ್ಣ ಕರ್ನಾಟಕದ ಸಂಸ್ಕೃತಿಕ ರಾಯಭಾರಿಯಾಗಿ ಘೋಷಣೆ ಸಾಧ್ಯತೆ ಇದೆ ಎನ್ನಲಾಗುತ್ತಿದೆ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯದ ಕುರಿತಾಗಿ ಚರ್ಚೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ ಸಚಿವರೊಂದಿಗೆ ಚರ್ಚಿಸಿ ಈ ವಿಷಯ ಘೋಷಣೆ ಮಾಡಲಿರುವ ರಾಜ್ಯ ಸರ್ಕಾರ ಎಂದು ಹೇಳಲಾಗುತ್ತಿದೆ