ಬೆಳಗಾವಿ : ಅನಧಿಕೃತ ಮಸೀದಿಗಳನ್ನು ಕೆಡವಿ ದೇವಸ್ಥಾನ ಕಟ್ಟುತ್ತೇವೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿಕೆಗೆ ರಾಜ್ಯದಲ್ಲಿ ಭಾರಿ ವಿರೋಧ ವ್ಯಕ್ತವಾಗುತ್ತಿದ್ದು ಇದರ ಮಧ್ಯ ಅನಂತ್ ಕುಮಾರ್ ಹೆಗಡೆ ಅವರು ಮುಜುಗರ ಪಡುವಂತಹ ಘಟನೆ ನಡೆದಿದ್ದು, ಬೆಳಗಾವಿ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಸಭೆಯಲ್ಲಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಸಂಸದ ಅನಂತ್ ಕುಮಾರ್ ಹೆಗಡೆ ಬಿಜೆಪಿ ಕಾರ್ಯಕರ್ತರು ಕ್ಲಾಸ್ ತೆಗೆದುಕೊಂಡಿದ್ದು, ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ನಡೆದ ಸಭೆಯಲ್ಲಿ ತರಾಟೆಗೆ ತೆಗೆದುಕೊಂಡಿರುವ ಘಟನೆ ನಡೆದಿದೆ. ಕಳೆದ ಹಲವಾರು ವರ್ಷಗಳಿಂದ ಕಾರ್ಯಕರ್ತರ ಕೈಗೆ ನೀವು ಸಿಕ್ಕಿಲ್ಲ. ನಿಮ್ಮ ಪಿಎಗಳು ಕೂಡ ಸರಿಯಾಗಿ ಸ್ಪಂದಿಸಿಲ್ಲ ನಾವು ಹೇಗೆ ಮಾಡಬೇಕು ಎಂದು ಪ್ರಶ್ನಿಸಿದ್ದಾರೆ.
ನಮ್ಮ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳು ಕೂಡ ಕುಂಠಿತವಾಗಿವೆ. ಖಾನಾಪುರದಲ್ಲಿ ಸಂಸದರ ಕಾರ್ಯಾಲಯ ತೆರೆಯಲು ಇದೇ ವೇಳೆ ಒತ್ತಾಯಿಸಲಾಯಿತ್ತು. ಖಾನಾಪುರ ಜನ ಬೆಳಗಾವಿಗೆ ಹೋದರೆ ಕಾರವಾರಕ್ಕೆ ಹೋಗಿ ಅಂತ ಹೇಳುತ್ತಾರೆ. ಕಾರವಾರಕ್ಕೆ ಹೋದರೆ ನೀವು ಬೆಳಗಾವಿ ಜಿಲ್ಲೆಯವರು ಅಂತ ಹೇಳುತ್ತಾರೆ. ಖಾನಾಪುರ ತಾಲೂಕಿನ ಜನ ನಡುವಿನಲ್ಲಿ ಸಿಕ್ಕಿ ಒದ್ದಾಡುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು.
ಕಾರ್ಯಕರ್ತರಿಗೆ ನಿಮ್ಮ ಕಡೆಯಿಂದ ಉತ್ತಮ ಸ್ಪಂದನೆ ಸಿಗುತ್ತಿಲ್ಲ.ಅನಂತ್ ಕುಮಾರ್ ಹೆಗಡೆ ಎಲ್ಲಿದ್ದಾರೆ ಅಂತ ಜನ ಪ್ರಶ್ನೆ ಮಾಡುತ್ತಿದ್ದಾರೆ. 200 ಕಿಲೋಮೀಟರ್ ದೂರದಿಂದ ನಿಮ್ಮನ್ನು ಭೇಟಿಯಾಗಲು ಬಂದರೂ ಸಿಗುವುದಿಲ್ಲ.ಸಂಸದ ಅನಂತ್ ಕುಮಾರ್ ಹೆಗಡೆಗೆ ಬಿಜೆಪಿ ಕಾರ್ಯಕರ್ತರಿಂದ ಕ್ಲಾಸ್ ತೆಗೆದುಕೊಂಡಿರುವ ಘಟನೆ ಜರುಗಿತು.