ಬೆಂಗಳೂರು : ಖಾಸಗಿ ಬಸ್ ಒಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಸ್ಥಳದಲ್ಲೇ ಓರ್ವ ಸವಾರ ಸಾವನ್ನಪ್ಪಿದ್ದು ಪತ್ನಿ ಹಾಗೂ ಮಗುವಿಗೆ ಗಂಭೀರವಾದಂತಹ ಗಾಯಗಳಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದಲ್ಲಿ ನಡೆದಿದೆ.
ಬೈಕ್ ಗೆ ಖಾಸಗಿ ಬಸ್ ಡಿಕ್ಕಿಯಾಗಿರುವ ಪರಿಣಾಮ ಸ್ಥಳದಲ್ಲೇ ಸವಾರ ಸಾವನ್ನಪ್ಪಿದ್ದು, ಬೈಕ್ ನಲ್ಲಿದ್ದ ಮಹಿಳೆ ಹಾಗೂ ಮಗುವಿಗೆ ಗಂಭೀರವಾಗಿ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನೆಯು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಬಳಿ ಈ ಘಟನೆ ಸಂಭವಿಸಿದೆ.
ಅಪಘಾತದಲ್ಲಿ ಮೇಲಿನ ನಾಯಕರಂಡಹಳ್ಳಿ ನಿವಾಸಿ ಪ್ರಕಾಶ್ ನಾಯಕ್ (26) ಎನ್ನುವ ವ್ಯಕ್ತಿ ಸಾವನಪ್ಪಿದ್ದಾರೆ.ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.